Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 1:6 - ಕನ್ನಡ ಸತ್ಯವೇದವು C.L. Bible (BSI)

6 ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೋ ನಾಶಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 1:6
17 ತಿಳಿವುಗಳ ಹೋಲಿಕೆ  

ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ.


ದುರುಳರ ನಡತೆ ಸರ್ವೇಶ್ವರನಿಗೆ ಹೇಯ; ನೀತಿವಂತರ ನಡತೆ ಆತನಿಗೆ ಸುಪ್ರಿಯ.


ಒಳ್ಳೆಯವನು ಸರ್ವೇಶ್ವರ ಸಂಕಟದಲಿ ಆಶ್ರಯದುರ್ಗ ಮೊರೆಹೊಕ್ಕವರನು ಚೆನ್ನಾಗಿ ಬಲ್ಲನಾತ.


ರಕ್ಷಿಸುವನು ಪ್ರಭು ಪರದೇಶಿಗಳನು I ಆದರಿಸುವನು ಅನಾಥರನು, ವಿಧವೆಯರನು I ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು II


ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೊಯ್ಯುವ ಹಾದಿಯಾಗಬಹುದು.


“ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು.


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


ಉರುಲೊಡ್ಡಿಹರು ನಾ ನಡೆಯುವ ಮಾರ್ಗದಲೆ I ನಾ ಮನಗುಂದಿರೆ, ಪರಿಹಾರವನು ನೀ ಬಲ್ಲೆ II


ಸಹಜ ಪ್ರವೃತ್ತಿಯಿಂದ ಬೇಟೆಗಾಗಿಯೂ ಕೊಲೆಗಾಗಿಯೂ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತೆ ಬಾಳುವ ಈ ದುರ್ಬೋಧಕರಾದರೋ ತಮಗೆ ತಿಳಿಯದವುಗಳನ್ನು ದೂಷಣೆಮಾಡುತ್ತಾರೆ. ಆ ಪ್ರಾಣಿಗಳು ನಾಶವಾಗುವಂತೆಯೇ ಇವರೂ ನಾಶವಾಗುತ್ತಾರೆ.


ಇದನು ಕಂಡು ಕೆರಳುವನಾ ದುರುಳನು I ಹೊಂದುವನು ಈ ಪರಿ ಆಶಾಭಂಗವನು I ಹಲ್ಲು ಕಡಿಯುತ ಅವನು ಹಾಳಾಗುವನು II


ನಿಶ್ಶೇಷವಾಗಿ ಹೋದರು ವಿರೋಧಿಗಳು I ನಾಶವಾಗಿ ಹೋದವು ಅವರ ನಗರಗಳು I ಇಲ್ಲವಾದವು ಅವರ ಯಾವ ನೆನಪುಗಳು II


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು