Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:1 - ಕನ್ನಡ ಸತ್ಯವೇದವು C.L. Bible (BSI)

1 ನನ್ನಿಂದೇಕೆ ಪ್ರಭು, ಅಷ್ಟು ದೂರವಿರುವೆ? I ಕಷ್ಟಕಾಲದಲೇಕೆ ಕಣ್ಮರೆಯಾಗಿರುವೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನೀನು ಏಕೆ ದೂರವಾಗಿ ನಿಂತಿದ್ದೀ? ಕಷ್ಟಕಾಲದಲ್ಲಿ ಏಕೆ ಮರೆಯಾಗುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನೀನು ಯಾಕೆ ದೂರವಾಗಿ ನಿಂತಿದ್ದೀ; ಕಷ್ಟಕಾಲದಲ್ಲಿ ಯಾಕೆ ಮರೆಯಾಗುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನೀನು ಬಹುದೂರವಾಗಿರುವುದೇಕೆ? ಕಷ್ಟಕಾಲದಲ್ಲಿ ನೀನು ಮರೆಯಾಗಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನೀವು ದೂರದಲ್ಲಿ ನಿಂತುಕೊಳ್ಳುವುದು ಏಕೆ? ಇಕ್ಕಟ್ಟಿನ ಕಾಲಗಳಲ್ಲಿ ನೀವು ಮರೆಯಾಗಿರುವುದೂ ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:1
13 ತಿಳಿವುಗಳ ಹೋಲಿಕೆ  

ದೇವಾ, ಓ ಎನ್ನ ದೇವಾ, ಏಕೆನ್ನ ಕೈಬಿಟ್ಟೆ? I ಕಿವಿಗೊಡದೆ ಏಕೆ ದೂರವಾಗಿಬಿಟ್ಟೆ? II


ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II


ಸರ್ವೇಶ್ವರಾ, ಇಸ್ರಯೇಲರಿಗೆ ನೀವೇ ನಿರೀಕ್ಷೆ ಇಕ್ಕಟ್ಟಿನಲ್ಲಿ ಅವರಿಗೆ ನೀವೇ ರಕ್ಷೆ. ನಾಡಿನಲ್ಲಿ ಅನ್ಯದೇಶೀಯನಂತಿರುವಿರಿ, ಏಕೆ? ರಾತ್ರಿ ಕಳೆಯಲು ಗುಡಾರಹಾಕಿದ ಪ್ರಯಾಣಿಕನಂತಿರುವಿರಿ, ಏಕೆ?


ಪ್ರಭು, ನನ್ನ ತಳ್ಳಿಬಿಟ್ಟೆಯೇಕೆ? I ಮುಖವನು ತಿರುಗಿಸಿಕೊಂಡೆಯೇಕೆ? II


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ಮರೆಸಿಕೊಂಡಿರುವೆಯೇಕೆ ನಿನ್ನ ಮುಖವನು? I ಮರೆತಿರುವೆಯೇಕೆ ನಮ್ಮ ಹಿಂಸೆ ಬಾಧೆಯನು? II


ಪ್ರಭು, ನಿನ್ನ ಕೃಪೆ ನನ್ನ ಗುಡ್ಡಕ್ಕೆ ಅಡಿಬಂಡೆ I ನಿನ್ನ ಮುಖ ಮರೆಯಾದುದೆ ನಾ ಕಳವಳಗೊಂಡೆ II


ನೀನೇಕೆ ನನಗೆ ವಿಮುಖನಾಗಿರುವೆ? ನನ್ನನ್ನೇಕೆ ಶತ್ರು ಎಂದೆಣಿಸುವೆ?


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ಎಡಗಡೆ ಹುಡುಕಿದರೂ ನೋಡಲಾಗದಯ್ಯಾ ಬಲಗಡೆ ತಿರುಗಿದರೂ ಗೋಚರವಾಗದಯ್ಯಾ!


ಮಣ್ಣುಪಾಲಾಗಿದೆ ನಮ್ಮ ಪ್ರಾಣ I ನೆಲ ಕಚ್ಚಿಕೊಂಡಿದೆ ನಮ್ಮ ದೇಹ II


ದಿಕ್ಕು ತೋಚದವನಂತೆ ನಿಶ್ಚಲರಾಗಿರುವಿರಿ, ಏಕೆ? ರಕ್ಷಿಸಲಾಗದ ರಣಧೀರನಂತಿರುವಿರಿ, ಏಕೆ? ಆದರೂ ಸರ್ವೇಶ್ವರಾ, ನೀವು ನಮ್ಮ ಮಧ್ಯೆ ಇರುವಿರಿ; ನಾವು ನಿಮ್ಮ ಹೆಸರಿನವರು, ನಮ್ಮನ್ನು ಕೈಬಿಡಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು