Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:12 - ಕನ್ನಡ ಸತ್ಯವೇದವು C.L. Bible (BSI)

12 ಎದ್ದೇಳು ಪ್ರಭು, ದಲಿತನನು ಮರೆಯದಿರಯ್ಯಾ I ಆತನನು ರಕ್ಷಿಸಲು ದೇವಾ, ಕೈಚಾಚಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ; ಅವನನ್ನು ರಕ್ಷಿಸುವುದಕ್ಕೆ ಕೈಚಾಚು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ; ಅವನನ್ನು ರಕ್ಷಿಸುವದಕ್ಕೆ ಕೈಚಾಚು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನೇ, ಎದ್ದೇಳು, ಕಾರ್ಯನಿರತನಾಗು! ದೇವರೇ, ಆ ದುಷ್ಟರನ್ನು ದಂಡಿಸು! ನಿಸ್ಸಹಾಯಕರನ್ನು ಮರೆತುಬಿಡಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರೇ, ಎದ್ದೇಳಿರಿ! ದೇವರೇ, ನಿಮ್ಮ ಕೈ ಎತ್ತಿರಿ. ನಿಸ್ಸಹಾಯಕರನ್ನು ಮರೆಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:12
15 ತಿಳಿವುಗಳ ಹೋಲಿಕೆ  

ಯಕೋಬ ವಂಶಜರೇ, ನಿಮ್ಮ ಎದುರಾಳಿಗಳ ಮೇಲೆ ನಿಮಗೆ ಜಯ ಲಭಿಸಲಿ. ನಿಮ್ಮ ಶತ್ರುಗಳೆಲ್ಲಾ ನಿರ್ಮೂಲವಾಗಲಿ.


ರಕ್ತಪಾತ ಲೆಕ್ಕಿಸಿ ಸೇಡು ತೀರಿಸುವಾತ I ದೀನದಲಿತರ ಮೊರೆಯನೆಂದಿಗು ಮರೆಯನಾತ II


ಸರ್ವೇಶ್ವರ ಹೀಗೆನ್ನೆತ್ತಾರೆ : “ಈಗ ಏಳುವೆನು. ಈಗಲೇ ಎದ್ದು ಸಿದ್ಧನಾಗುವೆನು. ಇದೀಗಲೇ ನನ್ನ ಮಹಿಮೆಯನ್ನು ತೋರಿಸುವೆನು.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಪ್ರಭೂ, ಲೋಕದ ನ್ಯಾಯಾಧಿಪತಿ I ಏಳು, ಗರ್ವಿಗಳಿಗೆ ಮಾಡು ತಕ್ಕಶಾಸ್ತಿ II


ಶರಣರನು ಶತ್ರುವಿಂದ ಸಂರಕ್ಷಿಸುವಾತ ನೀನಯ್ಯಾ I ಭುಜಬಲವನು ಪ್ರಯೋಗಿಸಿ ಕಾಪಾಡುವಾತ ನೀನಯ್ಯಾ I ನಿನ್ನಚಲ ಪ್ರೀತಿಯನ್ನಚ್ಚರಿಯಿಂದ ತೋರ್ಪಡಿಸಯ್ಯಾ II


ಕರುಣೆ ತೋರಲು ದೇವನು ಮರೆತುಬಿಟ್ಟನೋ? I ಕರುಳಿಗೆ ಕೋಪದಿಂದ ಬರೆಹಾಕಿಕೊಂಡನೋ? II


ಎಷ್ಟುಕಾಲ ಪ್ರಭು, ನೀ ಎನ್ನ ಪೂರ್ತಿ ಮರೆತಿರುವೆ? I ಇನ್ನೆಷ್ಟರ ತನಕ ನೀನೆನಗೆ ವಿಮುಖನಾಗಿರುವೆ? II


ಎದ್ದೇಳು ಪ್ರಭೂ, ಜಯ ದೊರಕದಿರಲಿ ನರಮಾನವನಿಗೆ I ನಡೆಯಲಿ ನಿನ್ನ ಮುಂದೆಯೆ ನ್ಯಾಯನಿರ್ಣಯ ಜನಾಂಗಗಳಿಗೆ II


ಹೇ ಪ್ರಭು, ಎಚ್ಚರಗೊಳ್ಳು : ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II


ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II


ಆಗ ಸಂಸೋನನು ಸರ್ವೇಶ್ವರನಿಗೆ, “ಪ್ರಭು ಸರ್ವೇಶ್ವರಾ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡು ಕಣ್ಣುಗಳಲ್ಲಿ ಒಂದಕ್ಕಾದರು ನಾನು ಅವರಿಗೆ ಮುಯ್ಯಿ ತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸಿರಿ,” ಎಂದು ಮೊರೆಯಿಟ್ಟನು.


ಮೃತ್ಯುವಿನ ಬಾಯಿಂದೆನ್ನ ಬದುಕಿಸುವ ಪ್ರಭು, ಕನಿಕರಿಸು I ವೈರಿ-ವಿರೋಧಿಗಳೆನಗೆ ಗೈದ ಕಿರುಕುಳವನು, ನೀ ಗಮನಿಸು II


ಸದೆಬಡಿ ಪ್ರಭು, ಆ ದುರುಳರನು ಇದಿರ್ಗೊಂಡು I ಖಡ್ಗ ಹಿಡಿದೆನ್ನ ಪ್ರಾಣವನು ಕಾಪಾಡು II


ಕೊಡಬೇಡ ನಿನ್ನ ಬೆಳವಕ್ಕಿಯ ಪ್ರಾಣವ ಕಾಡುಮೃಗಕೆ I ನೀ ಮರೆತುಬಿಡಬೇಡ ನಿನ್ನ ದೀನದಲಿತರನು ಒಮ್ಮೆಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು