ಕೀರ್ತನೆಗಳು 10:14 - ಕನ್ನಡ ಸತ್ಯವೇದವು C.L. Bible (BSI)14 ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು. ಅಧ್ಯಾಯವನ್ನು ನೋಡಿ |
ಅಹಾಬನಿಗೆ ಸರ್ವೇಶ್ವರ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು,’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲವೆ?’ ಎಂದಿದ್ದರು. ಸರ್ವೇಶ್ವರನ ಆ ನುಡಿ ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲೇ ಹಾಕಿಬಿಡು,” ಎಂದು ಹೇಳಿದನು.