Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:17 - ಕನ್ನಡ ಸತ್ಯವೇದವು C.L. Bible (BSI)

17 ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದೀ; ಅವರ ಹೃದಯವನ್ನು ಧೈರ್ಯಪಡಿಸುತ್ತೀ; ಅವರ ಮೊರೆಗೆ ಕಿವಿಗೊಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನೇ, ಕುಗ್ಗಿಹೋದವರ ಕೋರಿಕೆಯನ್ನು ನೀನು ಕೇಳುವೆ. ಅವರ ಮೊರೆಗೆ ಕಿವಿಗೊಟ್ಟು ಅವರನ್ನು ಪ್ರೋತ್ಸಾಹಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ; ಅವರನ್ನು ಪ್ರೋತ್ಸಾಹಿಸಿ, ಅವರ ಕೂಗನ್ನು ಲಾಲಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:17
28 ತಿಳಿವುಗಳ ಹೋಲಿಕೆ  

ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II


ಈ ನಾಡಿನ ಮತ್ತು ಇದರ ನಿವಾಸಿಗಳ ಬಗ್ಗೆ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡೆ; ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದೆ; ಆದ್ದರಿಂದ ನಿನ್ನನ್ನು ಲಕ್ಷಿಸಿದೆನು


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ನೀತಿವಂತರನು ಕಾಯುವನು ಸರ್ವೇಶ್ವರನು ಅವರ ವಿಜ್ಞಾಪನೆಗೆ ಕಿವಿಗೊಡುವನು. ಕೆಡುಕರಿಗಾದರೋ ಆತನು ವಿಮುಖನು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಪ್ರಭುವಿನಿಂದಲೆ ಬಯಸು ನಿನ್ನಾನಂದವನು I ನೆರವೇರಿಸುವನಾತ ನಿನ್ನ ಮನದಾಸೆಯನು II


ನಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರ ದೇವರೇ, ಸರ್ವೇಶ್ವರಾ, ನಿಮ್ಮ ಪ್ರಜೆಗಳಲ್ಲಿ ಇಂಥ ಮನೋಭಾವ ಸದಾ ಇರುವಂತೆ ಮಾಡಿರಿ; ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ಇರಲು ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸಿರಿ.


ರಕ್ತಪಾತ ಲೆಕ್ಕಿಸಿ ಸೇಡು ತೀರಿಸುವಾತ I ದೀನದಲಿತರ ಮೊರೆಯನೆಂದಿಗು ಮರೆಯನಾತ II


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಪ್ರಭುವಿನ ಮುಂದೆ ನಮ್ರರಾಗಿರಿ. ಆಗ ಅವರು ನಿಮ್ಮನ್ನು ಉದ್ಧರಿಸುವರು.


ಆಲೋಚನೆ ಮಾಡುವುದು ಮನುಷ್ಯನ ಇಚ್ಛೆ; ಅದನ್ನು ಸಫಲವಾಗಿಸುವುದು ಸರ್ವೇಶ್ವರನ ಇಚ್ಛೆ.


ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ಯೇಸುಕ್ರಿಸ್ತರಲ್ಲಿ ನಾವಿಟ್ಟಿರುವ ವಿಶ್ವಾಸದ ಮೂಲಕ ಅವರಲ್ಲಿ ಒಂದಾಗಿ, ದೇವರ ಸಾನ್ನಿಧ್ಯವನ್ನು ಸೇರುವ ಧೈರ್ಯ ಹಾಗೂ ಭರವಸೆ ನಮಗಿದೆ.


ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.


ಅಂತೆಯೇ ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ.


“ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ದುರ್ಜನರು ಭಯಪಡುವುದೇ ಸಂಭವಿಸುವುದು; ಸಜ್ಜನರು ಇಷ್ಟಪಡುವುದೇ ಲಭಿಸುವುದು.


ದರಿದ್ರರನು ದೇವರು ಎಂದಿಗು ಮರೆಯುವುದಿಲ್ಲ I ನಿರ್ಗತಿಕರ ನಿರೀಕ್ಷೆ ಕೈಗೂಡದೆ ಇರುವುದಿಲ್ಲ II


ಹೀಗೆ ಸರ್ವೇಶ್ವರನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ಯಾರೂ ಗಮನಿಸುವುದಕ್ಕೆ ಮುಂಚೆಯೇ, ದೇವರು ತಾವೇ ತಮ್ಮ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲ ಜನರೂ ಸಂತೋಷಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು