Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:18 - ಕನ್ನಡ ಸತ್ಯವೇದವು C.L. Bible (BSI)

18 ದಲಿತರಿಗೆ, ದಿಕ್ಕಿಲ್ಲದವರಿಗೆ ನ್ಯಾಯವನು ದೊರಕಿಸುವೆ I ಈ ಪರಿ ಇಳೆಮಾನವರ ತುಳಿತದಿಂದ ಪಾರುಮಾಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತೀ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನೇ, ಅನಾಥರನ್ನೂ ಕುಗ್ಗಿಸಲ್ಪಟ್ಟವರನ್ನೂ ಸಂರಕ್ಷಿಸು. ಆಗ ಕೇವಲ ಮನುಷ್ಯರಿಂದ ಅವರಿಗೆ ಭಯವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅನಾಥರಿಗೂ, ಕುಗ್ಗಿದವರಿಗೂ ನ್ಯಾಯವನ್ನು ನಡಿಸಿಕೊಡಿರಿ. ಹೀಗಾದರೆ ಕೇವಲ ಮಣ್ಣಿನ ಮಾನವರಿಂದ ಅವರಿಗೆ ಇನ್ನೆಂದಿಗೂ ಭಯ ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:18
13 ತಿಳಿವುಗಳ ಹೋಲಿಕೆ  

ಅಬಲರಿಗೆ, ಅನಾಥರಿಗೆ ದೊರಕಿಸಿರಿ ನ್ಯಾಯವನು I ಕಾದಿರಿಸಿರಿ ದೀನದಲಿತರ ಹಕ್ಕು ಬಾಧ್ಯತೆಯನು II


ದಲಿತರಿಗೆ ಪ್ರಭು ದುರ್ಗಸ್ಥಾನ I ಆಪತ್ತಿನಲ್ಲಿ ಆಶ್ರಯ ಸ್ಥಾನ II


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II


ಕುಗ್ಗಿದವರು ಹಿಂದಿರುಗದಿರಲಿ ಅವಮಾನದಿಂದ I ಬಡವರು ಕೀರ್ತಿಸಲಿ ನಿನ್ನ ನಾಮವನು ಭಕ್ತಿಯಿಂದ II


ದೀನದಲಿತರನಾತ ಉದ್ಧರಿಸಲಿ I ಬಡಬಗ್ಗರಿಗೆ ನ್ಯಾಯ ದೊರಕಿಸಲಿ I ಪ್ರಜಾಹಿಂಸಕರನು ಸದೆಬಡಿಯಲಿ II


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯ ದೊರಕಿಸುತ್ತಾರೆ; ಪರದೇಷಿಗಳಾದವರಿಗೆ ಪ್ರೀತಿಯಿಂದ ಅನ್ನ ವಸ್ತ್ರಗಳನ್ನು ನೀಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು