Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:2 - ಕನ್ನಡ ಸತ್ಯವೇದವು C.L. Bible (BSI)

2 ಸೊಕ್ಕಿನಿಂದ ಶೋಷಿಸುತಿಹರು ದಲಿತರನು ದುರುಳರು I ಸಿಕ್ಕಿಬೀಳಲಿ ತಾವೇ ಒಡ್ಡಿದ ಉರಿಲಿನೊಳವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದುಷ್ಟರು ಗರ್ವಿಷ್ಠರಾಗಿ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದುಷ್ಟರು ಗರ್ವಿಷ್ಠರಾಗಿ ಬಡವರನ್ನು ಹಿಂದಟ್ಟಿ ಹೋಗುತ್ತಿದ್ದರೆ, ಆ ದುಷ್ಟರ ಕುಯುಕ್ತಿಯಲ್ಲಿ ಅವರು ಸಿಕ್ಕಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ, ಅವನು ಕಲ್ಪಿಸಿದ ಕುಯುಕ್ತಿಗಳಲ್ಲಿ ಅವನೇ ಸಿಕ್ಕಿಬೀಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:2
18 ತಿಳಿವುಗಳ ಹೋಲಿಕೆ  

ಪಾಪವಿದೆ ಬಾಯಲಿ, ದೋಷವಿದೆ ತುಟಿಯಲಿ I ಸುಳ್ಳಿದೆ ಮಾತಲಿ, ಶಾಪವಿದೆ ನುಡಿಯಲಿ I ಅವರ ಸೊಕ್ಕಿನಲಿ ಅವರೇ ಸಿಕ್ಕಬೀಳಲಿ II


ಗರ್ವಿಗಳ ಕಾಲಿಗೆ ನಾ ಬೀಳುವುದು ಬೇಡ I ದುರುಳರ ಕೈ ನನ್ನ ಹೊರದೂಡುವುದು ಬೇಡ II


ತಾನು ಮಾಡಿದ ಕುತಂತ್ರ ತನ್ನ ತಲೆಗೆ ಗಂಡಾಂತರ I ತಾನು ಕೊಟ್ಟ ಉಪದ್ರವ ತನ್ನ ಬುರುಡೆಗೆ ಅವಾಂತರ II


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ಹೊಣೆಗಾರನಾಗು ನಿನ್ನ ದಾಸನ ಕ್ಷೇಮಕೆ I ಆ ಗರ್ವಿಗಳು ಬಾಧಕರಾಗದಿರಲಿ ನನಗೆ II


ಸೇದಿಹೋಗಲಿ ಸಜ್ಜನರ ವಿರುದ್ಧ ಸುಳ್ಳಾಡುವ ನಾಲಿಗೆ I ಬಿದ್ದುಹೋಗಲಿ, ಸೊಕ್ಕಿನಿಂದವರನು ಧಿಕ್ಕರಿಸುವ ನಾಲಿಗೆ II


ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II


ಗುಂಡಿ ಅಗೆದಿಹರು ಎನಗೆ ಗರ್ವಿಷ್ಠರು I ಧರ್ಮಶಾಸ್ತ್ರ ಪಾಲಿಸದ ಆ ದುರುಳರು II


ಸುಳ್ಳು ಕಲ್ಪಿಸಿಹರಾ ಗರ್ವಿಗಳು ನಿನಗೆ ವಿರುದ್ಧವಾಗಿ I ನಾನೋ ಪಾಲಿಪೆ ನಿನ್ನ ನಿಯಮಗಳನು ಹೃತ್ಪೂರ್ವಕವಾಗಿ II


ಅದಾದ ಮೇಲೆ ಹೋಷಾಯನ ಮಗ ಅಜರ್ಯನು, ಕಾರೇಹನ ಮಗ ಯೋಹಾನಾನನು, ಹಾಗು ಅಹಂಕಾರಿಗಳಾದ ಜನರೆಲ್ಲರು ಅವನಿಗೆ, “ನಿನ್ನ ಮಾತು ಸುಳ್ಳು, ಈಜಿಪ್ಟಿಗೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ.


ಸತ್ತವರು ದಿಟ್ಟಿಸಿ ನಿನ್ನನು: ‘ಭುವಿಯನು ನಡುಗಿಸಿದವನು, ರಾಜ್ಯಗಳನು ಕದಲಿಸಿದವನು,


‘ಹತ್ತಿಹೋಗುವೆನು ನಾನು ಆಕಾಶಮಂಡಲಕೆ ಉತ್ತರದಿಕ್ಕಿನ ಕೊನೆಗಿರುವ ಸುರಗಣ ಪರ್ವತಕ್ಕೆ ಎತ್ತುವೆ ಸಿಂಹಾಸನವನ್ನು ದೇವ ನಕ್ಷತ್ರಗಳ ಮೇಲಕೆ ‘ಕುಳಿತಲ್ಲಿ ರಾಜ್ಯವಾಳುವೆ’ ಎಂದುಕೊಂಡೆ ನಿನ್ನೊಳಗೆ.


ನಿನ್ನ ನಿಬಂಧನೆಗಳ ಪಾಲನೆಯಲಿ I ಸ್ಥಿರತೆ ಇದ್ದರೆ ಒಳಿತು ನನ್ನ ಮನದಲಿ II


ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯೋ?


ಯಾರೊಬ್ಬನಿಗು ಮರುಕತೋರೆ ಮರೆತುಬಿಟ್ಟನವನು I ಕೊಲ್ಲಲು ಯತ್ನಿಸಿದನು ದೀನರನು, ಮನಗುಂದಿದವರನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು