Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:3 - ಕನ್ನಡ ಸತ್ಯವೇದವು C.L. Bible (BSI)

3 ಕೇಡಿಗನು ತನ್ನ ಮನದಾಸೆಗಾಗಿ ಹೆಮ್ಮೆಪಡುತಿಹನು I ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದುಷ್ಟನು ತನ್ನ ಮನೋರಥವು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಪರರ ಸೊತ್ತನ್ನು ಅಪಹರಿಸಿದವನು ಯೆಹೋವನನ್ನು ಅಲ್ಲಗಳೆದು ಬಿಟ್ಟುಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದುಷ್ಟನು ತನ್ನ ಹೃದಯಭಿಲಾಷೆಯಲ್ಲಿ ಕೊಚ್ಚಿಕೊಳ್ಳುತ್ತಾನೆ; ಅವನು ದುರಾಶೆಯುಳ್ಳವರನ್ನು ಆಶೀರ್ವದಿಸುವವನೂ ಯೆಹೋವ ದೇವರನ್ನು ಶಪಿಸುವವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:3
40 ತಿಳಿವುಗಳ ಹೋಲಿಕೆ  

ಉಬ್ಬಿಹೋಗಿಹರು ಕೆಡುಕರೆಲ್ಲರು I ಜಂಬ ಕೊಚ್ಚಿಕೊಳ್ಳುತ್ತಿಹರು ಅವರು II


ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ಧರ್ಮಶಾಸ್ತ್ರವನ್ನು ಕೈಗೊಳ್ಳದವರು ದುಷ್ಟರನ್ನು ಹೊಗಳುವರು; ಕೈಗೊಳ್ಳುವವರು ಅವರ ವಿರುದ್ಧ ಹೋರಾಡುವರು.


ಅವರ ಭರವಸೆ ಸಿರಿಸಂಪತ್ತಿನಲಿ I ಅವರ ಹಿರಿಮೆ ಅಧಿಕಾಸ್ತಿಪಾಸ್ತಿಯಲಿ II


ಎನ್ನೀ ಪರಿಸ್ಥಿತಿಯನು ಕಂಡು ಅವರು ಬಾಯಿ ಕಿಸಿದು I ನುಡಿದರು, “ಆಹಾ! ಕಣ್ಣಾರೆ ಕಂಡೆವಲ್ಲಾ” ಎಂದು II


ಹುಸಿ ನುಡಿವವರನು ಪ್ರಭು, ನೀ ನಾಶಮಾಡುವೆ I ಹಿಂಸಕರನು, ವಂಚಕರನು ನೀ ಹೇಸಿಬಿಡುವೆ II


ಬಂಗಾರದಲಿ ನಾನು ಭರವಸೆಯಿಟ್ಟಿದ್ದರೆ ಅಪರಂಜಿಯನೇ ನಾನು ನೆಚ್ಚಿಕೊಂಡಿದ್ದರೆ,


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇ‍ಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.


ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು: ‘ಹಿಂದಟ್ಟಿ ಹಿಡಿಯುವೆವು ಅವರನು ಅಪಹರಿಸಿಕೊಳ್ವೆವು ಅವರ ಸೊತ್ತನು ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.’


ಲೋಕಕ್ಕೂ ಲೌಕಿಕವಾದವುಗಳಿಗೂ ನೀವು ಒಲಿಯಬಾರದು. ಈ ಲೋಕವನ್ನು ಒಲಿದರೆ ಪಿತನಲ್ಲಿ ನಿಮಗೆ ಒಲವಿಲ್ಲವೆಂದಾಯಿತು.


“ಇಂಥಿಂಥ ದಿನ ಇಂಥಿಂಥ ಪಟ್ಟಣಕ್ಕೆ ಹೋಗೋಣ, ಅಲ್ಲಿ ಒಂದು ವರ್ಷ ಇದ್ದು ವ್ಯಾಪಾರ ಮಾಡೋಣ; ಅತಿಯಾಗಿ ಲಾಭ ಸಂಪಾದಿಸೋಣ,” ಎಂದೆಲ್ಲಾ ಆಲೋಚಿಸುವವರೇ, ಈಗ ಕೇಳಿ: ನೀವು ಇಷ್ಟೆಲ್ಲಾ ಆಲೋಚಿಸಿದರೂ ನಾಳೆ ಏನಾಗುವುದೋ ನಿಮಗೇ ತಿಳಿಯದು.


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ.


ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.


ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.


ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.


ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.


ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ!


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ನನ್ನ ಜನರ ದುರಾಶೆಯ ದೋಷದ ನಿಮಿತ್ತ ನಾನು ಕೋಪಗೊಂಡೆ, ದಂಡಿಸಿದೆ, ಮುಖ ಮರೆಸಿಕೊಂಡೆ, ರೋಷಭರಿತನಾದೆ. ಅವರಾದರೋ ಮೊಂಡುತನದಿಂದ ಮನಸ್ಸಿಗೆ ತೋಚಿದ ಹಾಗೆ ನಡೆಯುತ್ತಾ ಬಂದಿದ್ದಾರೆ.


ನೀಚಕಾರ್ಯವೆಸಗಿ ಹಿಗ್ಗುವ ಘನ ಮಾನವನೆ I ದೇವರ ಅನಂತ ಕೃಪೆಯನು ಪ್ರತಿಭಟಿಸುವವನೆ I ದೇವರ ದೃಷ್ಟಿಯಲಿ ನೀನು ಹೀನಾಯನೆ II


ಸಿರಿಬಂದಾಗ ಕೊರತೆಯಿರದು ಹೊಗಳಿಕೆಗೆ I ಆತ್ಮಸ್ತುತಿ, ಮುಖಸ್ತುತಿ, ಇವುಗಳ ಮೆರೆತಕೆ II


ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರಪಟ್ಟದ್ದರಿಂದ ಸರ್ವೇಶ್ವರನ ಆಶೀರ್ವಾದ ನಿಮ್ಮ ಮೇಲಿರಲಿ!


ಇದ ಕಂಡು ಸರ್ವೇಶ್ವರ ಬೇಸರಗೊಂಡ ತನ್ನಾ ಕುವರಕುವರಿಯರ ನಡತೆಯ ನೋಡಿ ನೊಂದುಕೊಂಡ.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.


ಆದರೆ ನೀವು ಅಹಂಭಾವದಿಂದ ಕೊಚ್ಚಿಕೊಳ್ಳುತ್ತೀರಿ. ಹಾಗೆ ಕೊಚ್ಚಿಕೊಳ್ಳುವುದು ಸರಿಯಲ್ಲ.


ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ಬೆಳ್ಳಿ ನಾಣ್ಯಗಳಿಗಾಗಿ ನೀನು ನನಗೆ ಕೇಳಿಸುವಂತೆ ಶಪಿಸಿದೆಯಲ್ಲವೆ? ಇಗೋ, ಆ ನಾಣ್ಯಗಳು ನನ್ನ ಹತ್ತಿರವೇ ಇವೆ; ನಾನೇ ತೆಗೆದುಕೊಂಡಿದ್ದೇನೆ,” ಎಂದು ಹೇಳಿದನು. ಆಕೆ, “ನನ್ನ ಮಗನೇ, ಸರ್ವೇಶ್ವರಸ್ವಾಮಿ ನಿನ್ನನ್ನು ಆಶೀರ್ವದಿಸಲಿ!” ಎಂದಳು.


ನಮ್ಮ ಸೈನ್ಯದಿಂದ ನಷ್ಟವಾಗಿಹೋದಷ್ಟು ಜನರನ್ನೂ ಕುದುರೆಗಳನ್ನೂ ರಥಗಳನ್ನೂ ಮತ್ತೆ ಕೂಡಿಸಿ ಅವರೊಡನೆ ಬಯಲಿನಲ್ಲಿ ಯುದ್ಧಮಾಡೋಣ; ನಮಗೆ ಹೇಗೂ ಜಯಸಿಕ್ಕುವುದು ನಿಶ್ಚಯ,” ಎಂದು ಹೇಳಿದರು. ಅವನು ಅದರ ಅಂತೆಯೇ ಮಾಡಿದನು.


ಸಜ್ಜನನು ಸದ್ಧರ್ಮಿಯಾಗಿ ಜೀವಿಸುತ್ತಾ ಗತಿಸಿಹೋಗುತ್ತಾನೆ; ದುರ್ಜನನಾದರೋ ಅಧರ್ಮದಲ್ಲಿ ಬಹುಕಾಲ ಬದುಕುತ್ತಾನೆ. ಇದನ್ನು ಎಲ್ಲಾ ನನ್ನ ನಿರರ್ಥಕ ಜೀವನದಲ್ಲಿ ಎಷ್ಟೋ ನೋಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು