Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:4 - ಕನ್ನಡ ಸತ್ಯವೇದವು C.L. Bible (BSI)

4 ಸೊಕ್ಕೇರಿದ ಮುಖದಾತನು ಪ್ರಭುವನು ಅರಸುವುದಿಲ್ಲ I ಅವನ ಮನದೊಳಿದೊಂದೇ ಭಾವನೆ : “ದೇವರೇ ಇಲ್ಲ"! II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ವಿಚಾರಿಸುವದಿಲ್ಲ ಎಂದು ದುಷ್ಟನು ಸೊಕ್ಕಿನ ಮುಖದಿಂದ ಹೇಳಿಕೊಂಡು ದೇವರಿಲ್ಲವೆಂಬದಾಗಿ ಸದಾ ಯೋಚಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ದುಷ್ಟರು ಗರ್ವದಿಂದ ದೇವರನ್ನು ತೊರೆದುಬಿಡುವರು; ದುಷ್ಟಾಲೋಚನೆಗಳನ್ನು ಮಾಡುತ್ತಾ ದೇವರಿಲ್ಲದಂತೆ ವರ್ತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದುಷ್ಟನು ತನ್ನ ಗರ್ವದಲ್ಲಿ ದೇವರನ್ನು ಹುಡುಕುವುದಿಲ್ಲ; ಅವನ ಎಲ್ಲ ಯೋಚನೆಗಳಲ್ಲಿಯೂ ದೇವರಿಗೆ ಸ್ಥಳವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:4
30 ತಿಳಿವುಗಳ ಹೋಲಿಕೆ  

ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ನಿನ್ನ ದುರಾಲೋಚನೆಗಾಗಿ ಪಶ್ಚಾತ್ತಾಪಪಡು; ನಿನ್ನ ದುರುದ್ದೇಶವನ್ನು ಕ್ಷಮಿಸಲೆಂದು ಪ್ರಭುವನ್ನು ಪ್ರಾರ್ಥಿಸು; ಅವರು ಕ್ಷಮಿಸಬಹುದು.


ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು.


ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ; ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯ ಆಯಿತು.


ನನ್ನನ್ನು ತೊರೆದು ತಮಗೆ ಇಷ್ಟಬಂದ ಹಾದಿಯನ್ನು ಹಿಡಿದು ದುಷ್ಟಮಾರ್ಗದಲ್ಲೆ ನಡೆದ ಜನತೆಯನ್ನು ಕೈಚಾಚಿ ಕರೆದೆ.


ಮನದಲಿ “ದೇವನಿಲ್ಲ” ಎನ್ನುವವರು ದುರ್ಮತಿಗಳು I ಹೇಯಕೃತ್ಯವೆಸಗುವವರು ಆ ಭ್ರಷ್ಟಾಚಾರಿಗಳು I ಒಳಿತನ್ನು ಮಾಡುವವರಾರೂ ಇಲ್ಲ ಅವರೊಳು II


ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರೂ ಅವರು ಆತನಿಗೆ, ‘ತೊಲಗಿಹೋಗು ನಮ್ಮಿಂದ’ ಎಂದರು.


ನೀವು ಗರ್ವಗೊಂಡು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟೀರಿ!


ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.


ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.


ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ,


ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?


ನಿಮ್ಮ ಕಾಲುಗಳು ಓಡುವುದು ಕೇಡಿಗಾಗಿ, ನೀವು ತವಕಪಡುವುದು ನಿರಪರಾಧಿಯ ರಕ್ತಪಾತಕ್ಕಾಗಿ. ನಿಮ್ಮ ಈ ಆಲೋಚನೆಗಳು ದುಷ್ಟವಾದುವು, ನೀವು ಹಿಡಿದ ಹಾದಿಗಳು ತರುವುದು ನಾಶವಿನಾಶವನ್ನೇ.


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.


ಮೇಲಿಂದ ಮೇಲಕ್ಕೆ ದೃಷ್ಟಿಸಿ ನೋಡುವ, ಠೀವಿಯಿಂದ ಕಣ್ಣುರೆಪ್ಪೆಗಳನ್ನೇರಿಸುವ ಜನರುಂಟು.


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


ಗರ್ವದ ನೋಟ, ಉಬ್ಬಿದ ಎದೆ, ಇವು ದುರುಳರೊಳು ಕಾಣುವ ಪಾಪದ ಕಿಡಿಗಳು.


ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II


ಜಿನುಗುಟ್ಟುತಿಹುದು ಪಾಪವು ದುಷ್ಟನ ಮನದಲಿ I ದೇವ ಭಯವೇ ಇಲ್ಲ ಅವನ ಕಣ್ಣೆದುರಿನಲಿ II


“ಅರಸೆನ್ನ ಮುಖದರುಶನವನು", ಎಂದೆ ನೀನು I “ಅರಸುವೆನು ಅದನೆ", ಎಂದು ಮರುನುಡಿದೆ ನಾನು II


ದೀನದಲಿತರನು ಉದ್ಧರಿಸುವವನು ನೀನು I ತಗ್ಗಿಸಿಬಿಡುವೆಯಲ್ಲವೆ ಪ್ರಭು, ಸೊಕ್ಕಿನ ಲೋಚಕರನು? II


“ಆ ದೇವನೆಂತು ಕಂಡುಹಿಡಿದಾನು?” ಎಂಬರು I “ಪರಾತ್ಪರನು ಪರಿಜ್ಞನೆ?” ಎಂದುಕೊಳ್ವರು II


ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.


“ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು