Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:5 - ಕನ್ನಡ ಸತ್ಯವೇದವು C.L. Bible (BSI)

5 ಗೆಲುವೆ ಅವನ ವ್ಯವಹಾರವೆಲ್ಲದರ ಸಾರ I ನಿನ್ನ ನಿರ್ಣಯ ಅವನ ಗ್ರಹಿಕೆಗೆ ಅತಿ ದೂರ II ಶತ್ರುಗಳನು ಕಂಡರೆ ಅವನಿಗೆ ತಾತ್ಸಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ ಅದು ಅವನ ಗ್ರಹಿಕೆಗೆ ಬರುವುದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವದರಿಂದ ಅವನ ಗ್ರಹಿಕೆಗೆ ಬರುವದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರು ಕುಯುಕ್ತಿಗಳನ್ನೇ ಮಾಡುತ್ತಾ ದೇವರ ಕಟ್ಟಳೆಗಳನ್ನೂ ಬುದ್ಧಿಮಾತುಗಳನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ. ದೇವರ ವೈರಿಗಳು ಆತನ ಉಪದೇಶಗಳನ್ನು ಕಡೆಗಣಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನ ಮಾರ್ಗಗಳು ಯಾವಾಗಲೂ ಸಮೃದ್ಧಿಯಾಗಿರುತ್ತವೆ; ಆದರೆ ನಿಮ್ಮ ನಿಯಮಗಳು ಅವನ ದೃಷ್ಟಿಗೆ ಬಹು ದೂರವಾಗಿವೆ; ಅವನು ತನ್ನ ಎಲ್ಲಾ ವೈರಿಗಳನ್ನು ಹೀಯಾಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:5
23 ತಿಳಿವುಗಳ ಹೋಲಿಕೆ  

ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ನಾಶಪರಿವಿನಾಶ ಅವರು ಹೋದೆಡೆ.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ಪೂರ್ವದಲ್ಲಿ ಗಿಬ್ಯದವರು ಭ್ರಷ್ಟರಾದಂತೆ ಎಫ್ರಯಿಮಿನವರು ಅತಿ ಭ್ರಷ್ಟರಾಗಿದ್ದಾರೆ. ದೇವರು ಅವರ ಅಪರಾಧವನ್ನು ನೆನಪಿಗೆ ತಂದುಕೊಳ್ಳುವರು. ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವರು.


ಎಂದೇ ಸುರಿಸಿದನಾತ ರೋಷಾಗ್ನಿಯನು, ಯುದ್ಧದ ರೌದ್ರವನು ಅವರ ಮೇಲೆಲ್ಲ; ಸುತ್ತಲು ಉರಿ ಹತ್ತಿದರೂ ಅವರು ಅರಿಯಲಿಲ್ಲ, ದಹಿಸಿದರೂ ಅವರು ಕಲಿಯಲಿಲ್ಲ.


ನೀವು ನಿಮ್ಮನಿಮ್ಮೊಳಗೆ : “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.


ಅನ್ಯಾಯವಾದ ನಿಬಂಧನೆಗಳನ್ನು ಕ್ರೂರವಾದ ಕಾನೂನುಗಳನ್ನು ರಚಿಸುವ ನಿಮಗೆ ಧಿಕ್ಕಾರ !


ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.


ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ. ಅವರ ಒಡನಾಟವನ್ನು ಬಯಸಬೇಡ.


ವಿವೇಕಿಗಳ ಮಾರ್ಗ ಏರಿಸುವುದು ಸಜ್ಜೀವಕ್ಕೆ; ಅದನ್ನು ಕೈಗೊಳ್ಳುವವರು ಇಳಿಯರು ಪಾತಾಳಕ್ಕೆ.


ಅವರ ಮಾರ್ಗ ಅಂಕು, ಅವರ ನಡತೆ ಡೊಂಕು.


ಅಂಥವರು ಹಿಡಿವುದು ಕತ್ತಲು ಹಾದಿಯನ್ನು, ತೊರೆದುಬಿಡುವರು ಸತ್ಯದ ಮಾರ್ಗವನ್ನು.


ಸೂರೆ ಮಾಡುವವರೆಲ್ಲರ ಪಾಡು ಇದುವೆ; ಕೊಳ್ಳೆಯು, ಕೊಳ್ಳೆಗಾರರ ಪ್ರಾಣವನ್ನೇ ಕೊಳ್ಳೆಮಾಡುತ್ತದೆ.


ಆಗ ಒಬ್ಬ ಪ್ರವಾದಿ ಇಸ್ರಯೇಲರ ಅರಸ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾಸಮೂಹವನ್ನು ನೋಡಿದಿಯೋ? ‘ನಾನೇ ಸರ್ವೇಶ್ವರ’ ಎಂಬುದು ನಿನಗೆ ಮನದಟ್ಟಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೊಪ್ಪಿಸುವೆನು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.


ದಾವೀದನು ತನ್ನ ಜನರನ್ನು ಕರೆದುಕೊಂಡು ಜೆರುಸಲೇಮಿನ ಮೇಲೆ ದಾಳಿ ಮಾಡಲು ಹೊರಟನು. ನಾಡಿನ ಮೂಲನಿವಾಸಿಗಳಾದ ಯೆಬೂಸಿಯರು ಅಲ್ಲಿದ್ದರು. ಅವರು ದಾವೀದನು ಒಳಗೆ ಬರಲಾರನೆಂದು ನೆನೆಸಿ ಅವನಿಗೆ, “ನೀನು ಒಳಗೆ ಬರಕೂಡದು; ಬಂದರೆ ಕುರುಡರು, ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು,” ಎಂದು ಹೇಳಿದರು.


ಆಗ ಜೆಬುಲನು ಅವನಿಗೆ, “ಈಗ ನಿನ್ನ ಮಾತೆಲ್ಲಿ? ಅಬೀಮೆಲೆಕನು ಎಷ್ಟರವನು? ನಾವು ಅವನಿಗೆ ಏಕೆ ಸೇವೆಮಾಡಬೇಕು ಎಂದು ಕೊಚ್ಚಿಕೊಂಡಿಯಲ್ಲವೆ? ಅವರು ನೀನು ತಿರಸ್ಕರಿಸಿದ ಜನರಲ್ಲವೇ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ,” ಎಂದು ಹೇಳಿದನು.


ಆ ಊರಿನವರು ಒಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯ್ದು, ಆಲೆಗಳಲ್ಲಿ ರಸ ತೆಗೆದು, ತಮ್ಮ ದೇವರ ಗುಡಿಗೆ ಹೋಗಿ, ಹಬ್ಬಮಾಡಿ, ಉಂಡು, ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಭೂನಿವಾಸಿಗಳೆಲ್ಲರು ತಮ್ಮ ನಡತೆಯನ್ನು ಕೆಡಿಸಿಕೊಂಡಿದ್ದರು.


ಅವರು ಆಧರಿಸಿ ನಿಂತಿರುವುದು ದೇವರಿತ್ತ ಅಭಯದ ನಿಮಿತ್ತ ಆತನ ಕಟಾಕ್ಷ ಅವರ ಮಾರ್ಗದತ್ತ.


ತಡವರಿಸಿದವು ನನ್ನ ಕಾಲುಗಳು I ಜಾರಿ ಬೀಳಲಿದ್ದವು ಹೆಜ್ಜೆಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು