Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 100:1 - ಕನ್ನಡ ಸತ್ಯವೇದವು C.L. Bible (BSI)

1 ಭೂನಿವಾಸಿಗಳೇ, ಜಯಘೋಷ ಮಾಡಿ ಪ್ರಭುವಿಗೆ I

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಗಾಯನ ಮಾಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಮಸ್ತ ಭೂಮಿಯೇ, ಯೆಹೋವ ದೇವರಿಗೆ ಜಯಧ್ವನಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 100:1
18 ತಿಳಿವುಗಳ ಹೋಲಿಕೆ  

ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ I ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ II


ಯೇಸು ಜೆರುಸಲೇಮನ್ನು ಸಮೀಪಿಸುತ್ತಾ ಓಲಿವ್ ಗುಡ್ಡದ ಇಳಿಜಾರನ್ನು ಮುಟ್ಟಿದಾಗ ಶಿಷ್ಯಸಮೂಹವೆಲ್ಲವೂ ತಾವು ಕಂಡ ಎಲ್ಲ ಮಹತ್ಕಾರ್ಯಗಳನ್ನು ಕುರಿತು ಹರ್ಷಾವೇಶರಾಗಿ ದೇವರ ಸ್ತುತಿಮಾಡುತ್ತಾ -


ಹರ್ಷಧ್ವನಿಗೈ, ಸಿಯೋನ್ ಕುವರಿಯೇ ಘೋಷಿಸು, ಇಸ್ರಯೇಲ್ ದೇಶವೇ, ಹೃತ್ಪೂರ್ವಕವಾಗಿ ಸಂತೋಷಿಸು, ಜೆರುಸಲೇಮ್ ನಗರವೇ.


ಸಜ್ಜನರೇ ಸಂತೋಷಿಸಿರಿ, ಉಲ್ಲಾಸಿಸಿರಿ ಪ್ರಭುವಿನಲಿ I ಯಥಾರ್ಥಚಿತ್ತರೇ, ಜಯಕಾರಮಾಡಿ ಆತನ ವಿಷಯದಲಿ II


ಇನ್ನೊಂದು ಕಡೆ: ಅನ್ಯಧರ್ಮೀಯರೇ, ದೇವಜನರೊಡನೆ ಸೇರಿ ಆನಂದಿಸಿರಿ.”


ಜಗವೆಲ್ಲ ಮಾಡಲಿ ಜಯಕಾರ ದೇವನಿಗೆ I


“ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”


ದೇವಾ, ನನ್ನೊಡೆಯಾ, ಮಾಡುವೆ ನಿನ್ನ ಗುಣಗಾನ I ಯುಗಯುಗಾಂತರಕ್ಕೂ ನಿನ್ನ ನಾಮಕ್ಕೆ ನಮನ II


ಸರ್ವ ಜನಾಂಗಗಳೇ, ಚಪ್ಪಾಳೆ ಹೊಡೆಯಿರಿ I ಸರ್ವೇಶ್ವರನಿಗೆ ಜಯಜಯ ಘೋಷ ಮಾಡಿರಿ II


ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು.


ನ್ಯಾಯದ ಪ್ರಕಾರ ತೀರ್ಪಿಡುತಿ ಜನತೆಗೆ I ಆದರ್ಶನೀಡುತಿ ಜಗದ ರಾಷ್ಟ್ರಗಳಿಗೆ I ಹರ್ಷಾನಂದವಾಗಲಿ ಜನಾಂಗಗಳಿಗೆ II


ಜಗವೆಲ್ಲ ಪೂಜಿಪುದು ನಿನ್ನನು I ಪೊಗಳಿ ಮಾಳ್ಪುದು ಗುಣಗಾನವನು I ಕೀರ್ತಿಸುವುದು ನಿನ್ನ ನಾಮವನು” II


ಏರಿದನು ಪ್ರಭು ಜಯಜಯಕಾರದೊಂದಿಗೆ I ಆರೋಹಣವಾದನು ತುತೂರಿನಾದ ಜೊತೆಗೆ II


ಭೂರಾಜ್ಯಗಳೇ, ಸ್ತುತಿಸಿರಿ ದೇವರನು I ಸಂಕೀರ್ತಿಸಿರಿ ನೀವೆಲ್ಲರು ಪ್ರಭುವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು