Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 100:4 - ಕನ್ನಡ ಸತ್ಯವೇದವು C.L. Bible (BSI)

4 ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದದೊಂದಿಗೆ I ಆತನ ಆವರಣದಲಿ ನಿಲ್ಲಿರಿ ಸ್ತುತಿಸ್ತೋತ್ರಗಳೊಂದಿಗೆ I ಆತನ ನಾಮವನು ಕೊಂಡಾಡಿ ಉಪಕಾರಸ್ಮರಣೆಯೊಂದಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕೃತಜ್ಞತಾಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ ಕೀರ್ತನೆಯೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರ ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ, ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ; ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 100:4
17 ತಿಳಿವುಗಳ ಹೋಲಿಕೆ  

ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಹೇ, ದೇವಾ, ಸಲ್ಲಿಸುವೆವು ಕೃತಜ್ಞತೆ ನಿಮಗೆ ಹಾಡುವೆವು ಕೀರ್ತನೆ ನಿಮ್ಮ ನಾಮ ಪ್ರತಿಭೆಗೆ!


ದಹನ ಬಲಿಯನರ್ಪಿಸೆ ದೇಗುಲಕೆ ಧಾವಿಸುವೆ I ನಿನಗೆ ನಾ ಹೊತ್ತ ಹರಕೆಗಳನ್ನು ತೀರಿಸುವೆ II


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ಪ್ರಭುವಿಗೆ ಹಾಡಿರಿ, ಆತನ ನಾಮವನು ಕೊಂಡಾಡಿರಿ I ಆತನ ಮುಕ್ತಿಮಾರ್ಗವನು ಪ್ರತಿನಿತ್ಯವೂ ಸಾರಿರಿ II


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


ಸಿಯೋನಿನಲ್ಲಿ ಸಲ್ಲತಕ್ಕವು ನಿನಗೆ ಸ್ತುತಿಸ್ತೋತ್ರಗಳು I ಪೂರೈಸತಕ್ಕವು ದೇವಾ, ಜನರು ನಿನಗೆ ಹೊತ್ತ ಹರಕೆಗಳು II


ಆತನ ಸನ್ನಿಧಿ ಸೇರೋಣ ಕೃತಜ್ಞತಾಸ್ತುತಿಯೊಂದಿಗೆ I ಜಯಜಯಕಾರ ಮಾಡೋಣ ಕೀರ್ತನೆಗಳಿಂದಾತನಿಗೆ II


ಆತನ ನಾಮಕೆ ತನ್ನಿ ಘನತೆಗೌರವವನು I ಆತನ ಮಂದಿರಕೆ ಬನ್ನಿ ಕಾಣಿಕೆ ಹೊತ್ತು II


ಆತ ಪರಮ ಪವಿತ್ರನು, ಸ್ತುತಿಸಲಿ ಅವರೆಲ್ಲರು I ಆತ ಘನಗಂಭೀರನು, ಸ್ತುತಿಸಲಿ ಆತನ ಶ್ರೀನಾಮವನು II


ನನ್ನ ಕಾಲುಗಳು ಓ ಜೆರುಸಲೇಮೇ I ತಲುಪಿವೆ ನಿನ್ನ ಪುರದ್ವಾರಗಳನೇ II


ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ I ಮಾಡುವರಿಲ್ಲಿಯೆ ಪ್ರಭುವಿನ ನಾಮ ಕೀರ್ತನೆ I ಪಾಲಿಪರಿಂತು ಇಸ್ರೇಲರಿಗೆ ವಿಧಿಸಿದಾಜ್ಞೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು