Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 101:2 - ಕನ್ನಡ ಸತ್ಯವೇದವು C.L. Bible (BSI)

2 ಸನ್ಮಾರ್ಗದಲೇ ನಾ ನಡೆಯುವೆನು I ನನಗೆಂದು ನೀಡುವೆ ದರ್ಶನವನು? I ಮನೆಯೊಳಗೂ ಶುದ್ಧಹೃದಯಿ ನಾನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥಹೃದಯದಿಂದಲೇ ಪ್ರವರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಎಚ್ಚರಿಕೆಯಿಂದ ಪರಿಶುದ್ಧನಾಗಿ ಜೀವಿಸುವೆನು; ನನ್ನ ಮನೆಯಲ್ಲೂ ಪರಿಶುದ್ಧನಾಗಿರುವೆನು. ನೀನು ನನ್ನ ಬಳಿಗೆ ಬರುವುದು ಯಾವಾಗ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೋಷರಹಿತ ಮಾರ್ಗದಲ್ಲಿ ನಡೆಯಲು ಜಾಗರೂಕನಾಗಿರುವೆನು; ನೀವು ಯಾವಾಗ ನನ್ನ ಬಳಿಗೆ ಬರುವಿರಿ? ನಾನು ನಿರ್ದೋಷ ಹೃದಯದಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 101:2
22 ತಿಳಿವುಗಳ ಹೋಲಿಕೆ  

ನಡೆದುಕೊಳ್ಳುವೆನು ಶಪಥ ಮಾಡಿರುವಂತೆ I ನಿನ್ನ ನೀತಿವಿಧಿಗಳನು ಪಾಲಿಪೆನು ಅದರಂತೆ II


ನೀನು ನಿನ್ನ ತಂದೆ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡು, ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಗೊಳ್ಳುತ್ತಾ ಬಂದರೆ, ಇಸ್ರಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು;


ತೊಲಗು ನನ್ನಿಂದ ದುರುಳ ಜನಾಂಗವೆ I ದೈವಾಜ್ಞೆಗಳನು ನಾನು ಪಾಲಿಸುವೆ II


ಆರಿಸಿಕೊಳ್ವೆನು ನಾಡಿನ ಸಜ್ಜನರನು I ಇರಿಸಿಕೊಳ್ವೆನು ನನ್ನೊಡನೆ ವಾಸಿಸಲವರನು I ಸನ್ಮಾರ್ಗಿಯೆ ನನ್ನ ಸೇವಕನಾಗಿರುವನು II


ಬಡವನು, ದುರ್ಬಲನು ಆದೆನಗೆ ಪ್ರಭೂ, ನೀ ಹಿತಚಿಂತಕನು I ತಡಮಾಡಬೇಡ ದೇವಾ, ನೀನೆನಗುದ್ಧಾರಕನು, ಸಹಾಯಕನು II


ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.


ಇವುಗಳನ್ನು ನಿನ್ನ ಮಕ್ಕಳಿಗೆ ಮನದಟ್ಟಾಗಿಸು; ಮನೆಯಲ್ಲಿರುವಾಗಲು, ಪ್ರಯಾಣದಲ್ಲಿರುವಾಗಲು, ಮಲಗುವಾಗಲು, ಏಳುವಾಗಲು ಇವುಗಳನ್ನು ಕುರಿತು ಪಾಠಹೇಳು.


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಇಸ್ರಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಚಿತ್ತನಾಗಿ ನಡೆದುಕೊಂಡನು.


ಅಹೀಮೆಲೆಕನು, “ನಿಮ್ಮ ಎಲ್ಲಾ ಸೇವಕರಲ್ಲಿ, ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾರಿದ್ದಾನೆ? ದಾವೀದನು ನಿಮ್ಮ ಆಲೋಚಕರಲ್ಲೊಬ್ಬನೂ ತಮ್ಮ ಮನೆಯವರಲ್ಲಿ ಗೌರವಾನ್ವಿತನೂ ಆಗಿದ್ದಾನಲ್ಲವೇ?


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


“ಸರ್ವೇಶ್ವರಾ, ನಿಮಗೆ ಶ್ರದ್ಧೆಯಿಂದಲೂ, ಪ್ರಾಮಾಣಿಕತೆಯಿಂದಲೂ ಸೇವೆಮಾಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಂಡಿದ್ದೇನೆ. ಇದನ್ನು ದಯೆಯಿಂದ ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥನೆ ಮಾಡಿದನು.


ದಾವೀದನು ಸಮಸ್ತ ಇಸ್ರಯೇಲಿಗೂ ಅರಸನಾಗಿ ಪ್ರಜೆಗಳೆಲ್ಲರನ್ನೂ ಧರ್ಮಾನುಸಾರ ನ್ಯಾಯಯುತವಾಗಿ ನಡೆಸುತ್ತಿದ್ದನು.


ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.


ನೀತಿಯ ಪಥದೊಳು ನಾ ನಡೆವೆನಯ್ಯಾ I ಕರುಣೆ ತೋರುತ ಪ್ರಭು, ರಕ್ಷಿಸಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು