Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 101:8 - ಕನ್ನಡ ಸತ್ಯವೇದವು C.L. Bible (BSI)

8 ಇಲ್ಲಮಾಡುವೆನು ಕೆಡುಕರನು ಪ್ರಭುವಿನಾ ನಗರದೊಳಗೆ I ನಾಶಮಾಡುವೆನು ನಾಡಿನ ದುರುಳರನು ದಿನದಿನಗಳೊಳಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ ಪ್ರತಿದಿನವೂ ಬೆಳಗಿನಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ದೇಶದಲ್ಲಿರುವ ದುಷ್ಟರನ್ನು ನಾನು ನಾಶಮಾಡುತ್ತೇನೆ. ಯೆಹೋವನ ಪಟ್ಟಣದಿಂದ ಕೆಡುಕರನ್ನು ಓಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದುಷ್ಟತನ ಮಾಡುವವರೆಲ್ಲರನ್ನು ಪ್ರತಿ ಮುಂಜಾನೆ ನಿಲ್ಲಿಸಿಬಿಡುವೆನು; ಯೆಹೋವ ದೇವರ ಪಟ್ಟಣದೊಳಗಿಂದ ಪ್ರತಿಯೊಬ್ಬ ದುಷ್ಟನನ್ನು ಹೊರಗೆ ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 101:8
16 ತಿಳಿವುಗಳ ಹೋಲಿಕೆ  

ಕತ್ತರಿಸುವನು ಕೆಡುಕರ ಕೋರೆಕೋಡುಗಳನು I ಎತ್ತರಿಸುವನು ಸಜ್ಜನರ ಕೋರೆಕೊಂಬುಗಳನು II


‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.


ರಾಜರಲ್ಲಿ ದುಷ್ಟಕಾರ್ಯ ಖಂಡನೀಯ; ಸದಾಚಾರ ಸಿಂಹಾಸನಕ್ಕೆ ನಿಜ ಆಧಾರ.


ರಾಜನು ನ್ಯಾಯಾಸನದ ಮೇಲೆ ವಿರಾಜಿಸುವಾಗ ಕೆಟ್ಟತನವನ್ನು ತೂರಿಬಿಡುವನು ದೃಷ್ಟಿಯಿಂದ.


ಕಿವಿಯಾರೆ ಕೇಳಿದಂತೆಯೆ ಕಣ್ಣಾರೆ ಕಂಡೆವು I ಸರ್ವಶಕ್ತ ಪ್ರಭುವನು ದೇವನಗರದಲಿ ಕಂಡೆವು II


ನ್ಯಾಯಕ್ಕೆ ಹೇಸಿ, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಕೋಬ ವಂಶದ ಮುಖಂಡರೆ, ಇಸ್ರಯೇಲ್ ವಂಶದ ಅಧಿಪತಿಗಳೇ, ಗಮನಿಸಿರಿ.


ಅವರು ಸರ್ವೇಶ್ವರಸ್ವಾಮಿಯ ನಾಡಿನಲ್ಲಿ ವಾಸಮಾಡುವುದಿಲ್ಲ. ಎಫ್ರಯಿಮರು ಈಜಿಪ್ಟಿಗೆ ಹಿಂದಿರುಗುವರು. ಅಸ್ಸೀರಿಯದಲ್ಲಿ ಅವರು ತಿನ್ನುವ ಆಹಾರ ಹೊಲಸಾಗುವುದು.


ಜ್ಞಾನಿಯಾದ ಅರಸ ಚದರಿಸಿಬಿಡುವನು ದುಷ್ಟರನ್ನು; ಅವರ ಮೇಲೆ ಉರುಳಿಸುವನು ಕಣದ ಗುಂಡನ್ನು.


ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ I ಆನಂದದಾಯಕ ರಾಜಾಧಿರಾಜನ ಆ ನಗರ II


ನದಿಯೊಂದು ಆನಂದಗೊಳಿಸುವುದು ದೇವನಗರವನು I ಪುನೀತಗೊಳಿಸುವುದು ಪರಾತ್ಪರನ ನಿವಾಸವನು II


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು