Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:16 - ಕನ್ನಡ ಸತ್ಯವೇದವು C.L. Bible (BSI)

16 ಏಕೆನೆ ಪುನರುದ್ಧರಿಸುವನು ಸಿಯೋನನು I ಪ್ರತ್ಯಕ್ಷಮಾಡುವನಾತ ತನ್ನ ಮಹಿಮೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರುಗಿ ಕಟ್ಟಿಸಿದನೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರಿಗಿ ಕಟ್ಟಿಸಿದನೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾಕೆಂದರೆ, ಯೆಹೋವನು ಚೀಯೋನನ್ನು ಮತ್ತೆ ಕಟ್ಟುವನು. ಜನಾಂಗಗಳು ಆಕೆಯ (ಜೆರುಸಲೇಮಿನ) ವೈಭವವನ್ನು ಮತ್ತೆ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ಯೆಹೋವ ದೇವರು ಚೀಯೋನನ್ನು ಮರಳಿ ಕಟ್ಟುವರು; ಅವರು ತಮ್ಮ ಮಹಿಮೆಯಲ್ಲಿ ಕಾಣಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:16
17 ತಿಳಿವುಗಳ ಹೋಲಿಕೆ  

ಜುದೇಯದ ಹಾಗೂ ಇಸ್ರಯೇಲಿನ ಗುಲಾಮಗಿರಿಯನ್ನು ಬಿಡಿಸಿ ಮೊದಲಿನಂತೆಯೆ ಅವುಗಳನ್ನು ಪುನರ್‍ ನಿರ್ಮಿಸುವೆನು.


ನಿರ್ಮಿಸುತಿಹನು ಪ್ರಭು ಮರಳಿ ಜೆರುಸಲೇಮನು I ಬಂದು ಸೇರಿಸುತಿಹನು ಚದರಿದ ಇಸ್ರಯೇಲರನು II


ನನ್ನ ಜನಾಂಗಕ್ಕೆ ಸೇರಿದ ಮಹಿಳೆಯರನ್ನು ಪ್ರಿಯವಾದ ಅವರ ಗೃಹಗಳಿಂದ ಹೊರದಬ್ಬುತ್ತೀರಿ. ಅವರ ಹಸುಳೆಗಳಿಗೆ ನನ್ನ ಆಶೀರ್ವಾದ ಇನ್ನೆಂದಿಗೂ ಲಭಿಸದಂತೆ ಮಾಡುತ್ತೀರಿ.


ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳುಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು, ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ.


“ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು.


ವಿಶ್ವದ ಬಗ್ಗೆ ನಾ ಮಾಡಿರುವ ಯೋಜನೆಯಿದು, ರಾಷ್ಟ್ರಗಳನ್ನು ದಂಡಿಸಲೆತ್ತಿರುವ ಕೈಯಿದು".


ಘೋಷಿಸುತ್ತದೆ ಗಗನಮಂಡಲ ಆತನ ನೀತಿಯನು I ಕಾಣುತ್ತವೆ ಸಕಲ ಜನಾಂಗ ಆತನ ಮಹಿಮೆಯನು II


ರಕ್ಷಿಸುವನು ದೇವನು ಆ ಸಿಯೋನ್ ಪಟ್ಟಣವನು I ಕಟ್ಟಿಸುವನು ಯೆಹೂದ ನಾಡಿನ ನಗರಗಳನು I ಸ್ವಂತವಾಗಿರಿಸಿಕೊಂಬರು ಆತನ ಪ್ರಜೆ ಅದನು II


ಸಿಯೋನಿಗೆ ದೇವಾ, ಶುಭವನು ಕರುಣಿಸು I ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು II


ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.


ರಾಷ್ಟ್ರಗಳು ಬರುವುವು ನಿನ್ನ ಬೆಳಕಿಗೆ ಅರಸರು ನಿನ್ನ ಉದಯದ ಶೋಭೆಗೆ.


“ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು