Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:17 - ಕನ್ನಡ ಸತ್ಯವೇದವು C.L. Bible (BSI)

17 ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ, ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆತನು ನಿರ್ಗತಿಕರ ಪ್ರಾರ್ಥನೆಗಳಿಗೆ ಉತ್ತರ ಕೊಡುವನು. ಅವರ ಮೊರೆಗಳನ್ನು ಆತನು ತಿರಸ್ಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ದಿಕ್ಕಿಲ್ಲದವರ ಪ್ರಾರ್ಥನೆಗೆ ಕಿವಿಗೊಡುತ್ತಾರೆ; ದೇವರು ಅವರ ಪ್ರಾರ್ಥನೆಯನ್ನು ತಿರಸ್ಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:17
16 ತಿಳಿವುಗಳ ಹೋಲಿಕೆ  

ಕೃಪೆಮಾಡಿ ನನಗೆ ಕಿವಿಗೊಡಿ, ಕಟಾಕ್ಷಿಸಿ ನೋಡಿ; ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿ, ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ; ಅವರು ನಿಮಗೆ ವಿರುದ್ಧ ಮಾಡಿದ ಪಾಪಗಳನ್ನು ಅರಿಕೆಮಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.


ಏಕೆನೆ ಕಾಪಾಡುವನಾತ ಮೊರೆಯಿಡುವ ಬಡವರನು I ಉದ್ಧರಿಸುವನಾತ ದಿಕ್ಕಿಲ್ಲದ ದೀನದಲಿತರನು II


ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II


ದರಿದ್ರರನು ದೇವರು ಎಂದಿಗು ಮರೆಯುವುದಿಲ್ಲ I ನಿರ್ಗತಿಕರ ನಿರೀಕ್ಷೆ ಕೈಗೂಡದೆ ಇರುವುದಿಲ್ಲ II


ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.


“ಅಲ್ಲಿಂದಾದರೂ ನೀವು ಪೂರ್ಣಹೃದಯದಿಂದ, ಪೂರ್ಣಮನಸ್ಸಿನಿಂದ ನಿಮ್ಮ ದೇವರಾದ ಸರ್ವೇಶ್ವರನನ್ನು ಅರಸಿದರೆ ಅವರು ನಿಮಗೆ ಸಿಗುವರು.


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ಅವರ ಕಣ್ಣು ಮಬ್ಬಾಗಿ ಕಾಣದೆಹೋಗಲಿ I ಅವರ ಸೊಂಟ ಬಿಡುವಿಲ್ಲದೆ ನಡುಗುತ್ತಿರಲಿ II


ನಾನು ಅವರಿಗೆ, “ಪರಲೋಕದೇವರು ನಮಗೆ ಸಫಲತೆಯನ್ನು ಅನುಗ್ರಹಿಸುವರು. ಆದುದರಿಂದ ಅವರ ದಾಸರಾದ ನಾವು ಕೋಟೆಯ ಗೋಡೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದೇವೆ. ನಿಮಗಾದರೋ ಜೆರುಸಲೇಮಿನಲ್ಲಿ ಪಾಲಾಗಲಿ, ಹಕ್ಕಾಗಲಿ, ಸ್ಮಾರಕವಾಗಲಿ ಇರುವುದಿಲ್ಲ,” ಎಂದು ಉತ್ತರಕೊಟ್ಟೆ.


ನಿರ್ಮಿಸುತಿಹನು ಪ್ರಭು ಮರಳಿ ಜೆರುಸಲೇಮನು I ಬಂದು ಸೇರಿಸುತಿಹನು ಚದರಿದ ಇಸ್ರಯೇಲರನು II


ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”


ನನ್ನ ದಾಸನ ಮಾತನ್ನಾದರೋ ದೃಢೀಕರಿಸುವವನು ನಾನೆ ನನ್ನ ದೂತರ ಯೋಜನೆಯನ್ನು ಸಫಲಗೊಳಿಸುವವನು ನಾನೆ ಜನನಿವಾಸವಾಗುವುದು ಜೆರುಸಲೇಮ್ ನಗರವು ಪುನಃ ಕಟ್ಟಲ್ಪಡುವುವು ಜುದೇಯ ಪಟ್ಟಣಗಳು. ಅಲ್ಲಿ ಹಾಳುಬಿದ್ದವುಗಳು ಮರಳಿ ಎದ್ದು ನಿಲ್ಲುವುವು.


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ಕಾಲ ಬರಲಿದೆ. ಆಗ ಸರ್ವೇಶ್ವರನಾದ ನನ್ನ ಮಹಿಮೆಗಾಗಿ ಈ ನಗರವನ್ನು ಹನನೇಲನ ಗೋಪುರದಿಂದ ಮೂಲೆ ಬಾಗಿಲವರೆಗೆ ವಿಸ್ತರಿಸಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು