Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:2 - ಕನ್ನಡ ಸತ್ಯವೇದವು C.L. Bible (BSI)

2 ಕಷ್ಟಕಾಲದೊಳು ವಿಮುಖನಾಗಬೇಡ ನೀನೆನಗೆ I ಕಿವಿಗೊಡು, ಮೊರೆಯಿಡುವಾಗಲೆ, ಸದುತ್ತರಿಸು ಬೇಗನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಕಷ್ಟದಲ್ಲಿ ವಿಮುಖನಾಗಬೇಡ; ನನ್ನ ಮೊರೆಗೆ ಕಿವಿಗೊಡು; ನಾನು ಕೂಗಿಕೊಳ್ಳುವ ದಿನದಲ್ಲಿ ಬೇಗನೆ ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಕಷ್ಟದಲ್ಲಿ ವಿಮುಖನಾಗಬೇಡ; ನನ್ನ ಮೊರೆಗೆ ಕಿವಿಗೊಡು; ನಾನು ಕೂಗಿಕೊಳ್ಳುವ ದಿನದಲ್ಲೇ ಬೇಗನೆ ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನೇ, ನಾನು ಆಪತ್ತುಗಳಲ್ಲಿರುವಾಗ ನನಗೆ ವಿಮುಖನಾಗಬೇಡ, ನನಗೆ ಕಿವಿಗೊಡು. ಸಹಾಯಕ್ಕಾಗಿ ಮೊರೆಯಿಡುವಾಗ ಬೇಗನೆ ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿಮ್ಮ ಮುಖವನ್ನು ನನಗೆ ಮರೆಮಾಡಬೇಡಿರಿ, ಸಹಾಯಮಾಡಿರಿ; ನಾನು ಕರೆಯುವಾಗ ನನ್ನ ಕಡೆಗೆ ತಿರುಗಿರಿ, ಬೇಗನೇ ನನಗೆ ಉತ್ತರಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:2
21 ತಿಳಿವುಗಳ ಹೋಲಿಕೆ  

ನಿನ್ನ ದಾಸನಿಗೆ ವಿಮುಖನಾಗಬೇಡಯ್ಯಾ I ಆಪತ್ತಿನಲ್ಲಿರುವೆ, ತಡಮಾಡಬೇಡಯ್ಯಾ II


ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II


ತಲ್ಲಣಗೊಳ್ಳುವುವು ನೀ ಮುಖ ಮರೆಮಾಡಿಕೊಳ್ಳಲು I ಮಣ್ಣುಪಾಲಾಗುವುವು ನೀನವುಗಳ ಉಸಿರನಡಗಿಸಲು II


ಕರುಣೆಯಿಂದೆನ್ನನು ದೇವಾ, ರಕ್ಷಿಸು I ತ್ವರೆಯಾಗಿ ಬಂದು ಪ್ರಭು, ಉದ್ಧರಿಸು II


ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ಸದುತ್ತರ ಪಾಲಿಸು ಪ್ರಭೂ, ಸೊರಗಿದೆ ಎನ್ನ ಚೇತನ I ನೀ ವಿಮುಖನಾದರೆ ನಾ ನರಕಹೊಕ್ಕವರಿಗೆ ಸಮಾನ II


ಸತ್ಯಸ್ವರೂಪನೆ, ನನ್ನ ಬಿಡಿಸಿ ರಕ್ಷಿಸಯ್ಯಾ I ನನಗೆ ಕಿವಿಗೊಟ್ಟು ಪ್ರಭು ನನ್ನನುದ್ಧರಿಸಯ್ಯಾ II


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಕರುಣೆಯಿಂದೆನ್ನನು ಪ್ರಭು ರಕ್ಷಿಸ ಬಾ I ನನಗೊತ್ತಾಸೆ ಮಾಡಲು ಪ್ರಭು, ಬೇಗ ಬಾ II


ನನಗೆ ಕಿವಿಗೊಡು ಪ್ರಭು, ನನ್ನನು ಬಿಡಿಸು ಬೇಗನೆ I ನನ್ನಾಶ್ರಯಗಿರಿ, ದುರ್ಗಸ್ಥಾನವಾಗಿರು ನೀನೆ II


ನನ್ನಿಂದ ದೂರ ಸರಿಯಲುಬೇಡ, ಪ್ರಭು I ನೀನೆನ್ನ ಶಕ್ತಿ, ನೆರವಾಗಲು ತ್ವರೆಮಾಡು II


ಎಷ್ಟುಕಾಲ ಪ್ರಭು, ನೀ ಎನ್ನ ಪೂರ್ತಿ ಮರೆತಿರುವೆ? I ಇನ್ನೆಷ್ಟರ ತನಕ ನೀನೆನಗೆ ವಿಮುಖನಾಗಿರುವೆ? II


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.


ದೇವರು ಆ ಜನರ ನರಳಾಟವನ್ನು ಕೇಳಿ ತಾವು ಅಬ್ರಹಾಮ, ಇಸಾಕ, ಯಕೋಬರಿಗೆ ಮಾಡಿದ್ದ ವಾಗ್ದಾನವನ್ನು ನೆನಪಿಗೆ ತಂದುಕೊಂಡರು.


ಲಕ್ಷ್ಯವಿಡು, ಓ ಪ್ರಭು, ಎನ್ನ ನ್ಯಾಯವಾದ ಮೊರೆಗೆ I ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು