Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:26 - ಕನ್ನಡ ಸತ್ಯವೇದವು C.L. Bible (BSI)

26 ನೀನಾದರೋ ಉಳಿದಿರುವೆ, ಅವೋ ಅಳಿದುಹೋಗುವುವು I ಹಳೆಯದಾಗುತ್ತವೆ ಬಟ್ಟೆಯಂತೆ ಅವೆಲ್ಲವು I ಉಡುಪಿನಂತೆ ಬದಲಿಸುತ್ತ, ಮಾರ್ಪಡುತ್ತವೆ ಅವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತಿ; ಅವು ಮಾರ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತೀ; ಅವು ಮಾರ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಲೋಕವೂ ಆಕಾಶವೂ ಕೊನೆಗೊಳುತ್ತವೆ. ನೀನಾದರೊ ಶಾಶ್ವತವಾಗಿರುವೆ! ಅವು ಬಟ್ಟೆಗಳಂತೆ ಹಳೆಯದಾಗುತ್ತವೆ. ನೀನು ಅವುಗಳನ್ನು ಉಡುಪುಗಳಂತೆ ಬದಲಾಯಿಸುವೆ. ಅವುಗಳೆಲ್ಲಾ ಬದಲಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವು ನಾಶವಾಗುವುವು; ಆದರೆ ನೀವು ಸದಾಕಾಲವೂ ಜೀವಿಸುತ್ತೀರಿ. ಅವುಗಳೆಲ್ಲಾ ವಸ್ತ್ರದ ಹಾಗೆ ಹಳೆಯದಾಗುವುದು; ಅಂಗಿಯ ಹಾಗೆ ಅವುಗಳನ್ನು ಬದಲಾಯಿಸುವಿರಿ; ಅವು ತೆಗೆದುಹಾಕಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:26
14 ತಿಳಿವುಗಳ ಹೋಲಿಕೆ  

ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.


ತರುವಾಯ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಕಂಡೆ. ಮೊದಲಿದ್ದ ಆಕಾಶಮಂಡಲವೂ ಮೊದಲಿದ್ದ ಭೂಮಂಡಲವೂ ಕಣ್ಮರೆಯಾಗಿ ಹೋದವು. ಸಮುದ್ರವು ಇನ್ನಿಲ್ಲವಾಯಿತು.


ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಇದು ಅದರ ಸ್ವಂತ ಇಚ್ಛೆಯಿಂದಲ್ಲ. ದೇವರ ಇಚ್ಛೆಯಿಂದಲೇ ಆಯಿತು. ಆದರೂ ಸೃಷ್ಟಿಗೆ ನಿರೀಕ್ಷೆಯೊಂದಿದೆ.


“ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.


ನೀನಾದರೋ ಪ್ರಭು, ಸದಾ ಸಿಂಹಾಸನಾರೂಢ I ಮಾಳ್ಪರು ತಲತಲಾಂತರಕು ನಿನ್ನ ನಾಮಸ್ಮರಣ II


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುವೆನು; ಆಗ, ಮೊದಲಿದ್ದದ್ದು ಜ್ಞಾಪಕದಲ್ಲಿರದು; ಅದು ಯಾರ ನೆನಪಿಗೂ ಬಾರದು.


ಆಗ ದೇವರು ಹೀಗೆಂದರು: “ಇರುವವನಾಗಿ ಇರುವವನು ನಾನೇ; ನೀನು ಇಸ್ರಯೇಲರಿಗೆ 'ತಾನಾಗಿ ಇರುವವನು,' ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾನೆ ಎಂದು ಹೇಳು.”


“ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.


ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನೆಲ್ಲಿದ್ದೆ? ಉತ್ತರಕೊಡು, ನೀನು ಅಷ್ಟು ಜ್ಞಾನಿಯಾಗಿದ್ದರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು