Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:28 - ಕನ್ನಡ ಸತ್ಯವೇದವು C.L. Bible (BSI)

28 ಬಾಳುವರು ನಿನ್ನ ದಾಸರ ಮಕ್ಕಳು ಸುರಕ್ಷಿತವಾಗಿ I ಇರುವುದವರ ಸಂತತಿ ನಿನ್ನ ಸಮ್ಮುಖದಲಿ ಸ್ಥಿರವಾಗಿ II 7

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಿನ್ನ ಸೇವಕರ ಮಕ್ಕಳು ಬಾಳುವರು. ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು” ಎಂದು ಮೊರೆಯಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಿನ್ನ ಸೇವಕರ ಮಕ್ಕಳು ಬಾಳುವರು. ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು ಎಂದು ಮೊರೆಯಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾವು ನಿನ್ನ ಸೇವಕರಾಗಿದ್ದೇವೆ. ಇಲ್ಲಿ ನಮ್ಮ ಮಕ್ಕಳು ವಾಸವಾಗಿರುತ್ತಾರೆ; ಅವರ ಸಂತತಿಗಳವರೂ ನಿನ್ನನ್ನು ಆರಾಧಿಸಲು ಇಲ್ಲಿರುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಿಮ್ಮ ಸೇವಕರ ಮಕ್ಕಳು ನಿಮ್ಮ ಸನ್ನಿಧಿಯಲ್ಲಿ ಬದುಕುವರು; ಅವರ ಸಂತತಿಯು ನಿಮ್ಮ ಮುಂದೆ ನೆಲೆಯಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:28
14 ತಿಳಿವುಗಳ ಹೋಲಿಕೆ  

“ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.


ತಾವು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಾಗಲಿ, ತಾವು ನೆಟ್ಟ ತೋಟಗಳ ಫಲವನ್ನು ಬೇರೆಯವರು ಅನುಭವಿಸುವುದಾಗಲಿ ಇನ್ನು ಸಂಭವಿಸದು. ಏಕೆಂದರೆ, ನನ್ನ ಜನರು ಮರಗಳಂತೆ ಬಹುಕಾಲ ಬಾಳುವರು. ನನ್ನಿಂದ ಆಯ್ಕೆಯಾದವರು ತಮ್ಮ ದುಡಿಮೆಯ ಫಲವನ್ನು ದೀರ್ಘಕಾಲ ಅನುಭವಿಸುವರು.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


“ಸ್ಥಾಪಿಸುವೆ ಶಾಶ್ವತವಾಗಿ ನಿನ್ನ ಸಂತತಿಯನು I ಸ್ಥಿರಪಡಿಸುವೆ ಯುಗಯುಗಕು ನಿನ್ನ ಸಿಂಹಾಸನವನು” II


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ನಿನ್ನ ದಿನಗಳು ಮನುಷ್ಯನ ಅಲ್ಪದಿನಗಳಂತಿವೆಯೋ? ನಿನ್ನ ವರುಷಗಳು ಮಾನವನ ವರುಷಗಳಷ್ಟೆಯೋ?


ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವರು ಯಾರು? ಸರ್ವೇಶ್ವರನಾದ ನಾನೇ. ಹೌದು, ಆದಿಯಲ್ಲಿದ್ದವನು. ಅಂತ್ಯದಲ್ಲಿ ಇರುವವನು ಆದ ನಾನೇ.


ಹೌದು, ನಾನೇ ಪರಮಾತ್ಮ ಆದಿಯಿಂದ ಬಿಡಿಸುವವರಾರು ಇಲ್ಲ ನನ್ನ ಕೈಯಿಂದ ನಾಗೈದುದನು ತಡೆಯಲಾಗದು ಯಾರಿಂದ.” ಈ ಪರಿ ನುಡಿದಿಹನು ಸರ್ವೇಶ್ವರನು, ನಿಮ್ಮ ಉದ್ಧಾರಕನು, ಇಸ್ರಯೇಲಿನ ಪರಮಪಾವನನು;


“ಯಕೋಬನ ಕುಲಪುತ್ರರೇ, ನಾನು ಅದಲುಬದಲಾಗದ ಸರ್ವೇಶ್ವರ, ಈ ಕಾರಣದಿಂದ ನೀವು ಅಳಿಯದೆ ಉಳಿದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು