Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:3 - ಕನ್ನಡ ಸತ್ಯವೇದವು C.L. Bible (BSI)

3 ಮಾಯವಾಗುತ್ತಿದೆ ನನ್ನೀ ಜೀವಮಾನ ಹೊಗೆಯಂತೆ I ಉರಿಯುತ್ತಿವೆ ಎನ್ನೆಲುಬುಗಳು ಒಲೆಯಲ್ಲಿಟ್ಟ ಕೊರಡಿನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಜೀವಮಾನವು ಹೊಗೆಯಂತೆ ಮಾಯವಾಗುತ್ತದೆ; ನನ್ನ ಎಲುಬುಗಳು ಕೊಳ್ಳಿಯಂತೆ ಸುಟ್ಟುಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ಜೀವಮಾನವು ಹೊಗೆಯಂತೆ ಮಾಯವಾಗುತ್ತದೆ. ನನ್ನ ಎಲುಬುಗಳು ಕೊಳ್ಳಿಯಂತೆ ಸುಟ್ಟು ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ಜೀವಮಾನವು ಹೊಗೆಯಂತೆ ಕಣ್ಮರೆಯಾಗುತ್ತಿದೆ. ನನ್ನ ಎಲುಬುಗಳು ಬೆಂಕಿಯಂತೆ ಸುಟ್ಟುಹೋಗುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗುತ್ತವೆ; ನನ್ನ ಎಲುಬುಗಳು ಬೂದಿ ಮುಚ್ಚಿದ ಕೆಂಡದಂತೆ ಸುಟ್ಟುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:3
11 ತಿಳಿವುಗಳ ಹೋಲಿಕೆ  

ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


“ಆಕಾಶದಿಂದ ಆತ ಸುರಿಸಿದ್ದಾನೆ ಅಗ್ನಿಯನ್ನೆ ಅದು ದಹಿಸುತ್ತಿದೆ ನನ್ನೊಳಗಿನ ಎಲುಬುಗಳನ್ನೆ ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ ಅದು ನನ್ನನ್ನೆಳೆಯುತ್ತಿದೆ ನೆಲಕ್ಕೆ ಹಾಳುಬಿದ್ದ ನಾನು ಸದಾ ಬಳಲುತ್ತಿದ್ದೇನೆ.”


ದುರುಳರ ಬೆಡಗೋ ಬಾಡಿಹೋಗುವುದು ಹುಲ್ಲಿನಂತೆ I ಪ್ರಭುವಿನ ಶತ್ರುಗಳು ತೇಲಿಹೋಗುವರು ಹೊಗೆಯಂತೆ II


ನನ್ನ ಚರ್ಮ ಉದುರುತ್ತಿದೆ ಕರ್ರಗಾಗಿ ನನ್ನೆಲುಬು ಉರಿಯುತ್ತಿದೆ ತಾಪಕ್ಕೊಳಗಾಗಿ.


ಕರಗುತ್ತಿದೆ ಬದುಕು ತಾಪದಲಿ; ಕುಂದುತ್ತಿದೆ ಶಕ್ತಿ ಪಾಪದಲಿ I ಸವೆದು ಹೋಗುತ್ತಿವೆ ನನ್ನ ದೇಹದೆಲುಬುಗಳು ಕಾಲ ಚಕ್ರದಲಿ II


ಸವೆಸಿರುವನು ನನ್ನ ಮಾಂಸಚರ್ಮಗಳನ್ನು ಮುರಿದಿರುವನು ನನ್ನ ಎಲುಬುಗಳನ್ನು.


ಬೆಂಕಿಗೆ ಬಿಸಾಡಿದ ಒಣ ಬುದ್ಧಲಿಯಂತಾದೆ I ಆದರೂ ನಿನ್ನ ನಿಬಂಧನೆಗಳನ್ನು ಮರೆಯದಿದ್ದೆ II


ನನ್ನ ದೇಹದಲ್ಲಿಲ್ಲ ಸೌಖ್ಯ ನಿನ್ನ ಕೋಪದ ನಿಮಿತ್ತ I ನನ್ನೆಲುಬಿನಲ್ಲಿಲ್ಲ ಕ್ಷೇಮ ನನ್ನ ಪಾಪದ ಪ್ರಯುಕ್ತ II


ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II


ಕೈ ಹಿಡಿದು ನಡೆಸೆನ್ನನು ನಿನ್ನ ನಾಮ ನಿಮಿತ್ತ I ನೀನೆನಗೆ ಪೊರೆಬಂಡೆ, ಸ್ಥಿರ ಕೋಟೆಕೊತ್ತಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು