Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:4 - ಕನ್ನಡ ಸತ್ಯವೇದವು C.L. Bible (BSI)

4 ಬಿಸಿಲಿಗೆ ಬಾಡಿದ ಹುಲ್ಲಿನಂತಿದೆ ಎನ್ನೆದೆ I ತಿಂಡಿತೀರ್ಥವನುಣ್ಣಲೂ ನಾ ಮರೆತುಹೋದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ನಿರ್ಬಲನಾಗಿ ಒಣಗಿಹೋಗುತ್ತಿರುವ ಹುಲ್ಲಿನಂತಿದ್ದೇನೆ. ನಾನು ಊಟವನ್ನೂ ಮರೆತುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಹೃದಯವು ಬಾಡಿಹೋಗಿ ಹುಲ್ಲಿನ ಹಾಗೆ ಒಣಗಿಹೋಗಿದೆ; ನಾನು ಊಟಮಾಡುವುದಕ್ಕೆ ಸಹ ಮರೆತುಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:4
21 ತಿಳಿವುಗಳ ಹೋಲಿಕೆ  

ಪ್ರಭುವಿನ ಶ್ವಾಸ ಬೀಸಲು ಒಣಗಿ ಹೋಗುವುದಾ ಹುಲ್ಲು ಬಾಡಿ ಹೋಗುವುದಾ ಹೂವು ಮಾನವರೆಲ್ಲ ಹುಲ್ಲೇ ಹುಲ್ಲು.


ಅವರು ಒಣಗಿಹೋಗುವರು ಕಾಡುಗರಿಕೆಯಂತೆ I ಬೇಗ ಬಾಡಿಹೋಗುವರು ಕಾಯಿಪಲ್ಯದಂತೆ II


ದೇವರನು ಸ್ಮರಿಸಿ ನಿಟ್ಟುಸಿರಿಡುತಿಹೆನು I ಹಂಬಲಿಸಿ ಮನದಲೇ ನಾ ಮರುಗುತಿಹೆನು II


ಆಮೇಲೆ ಎಜ್ರನು ಎದ್ದು, ದೇವಾಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ಅಲ್ಲಿ ಸೆರೆ ಇಂದ ಬಂದವರಿಗಾಗಿ ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.


ಮೂರು ದಿನಗಳವರೆಗೂ ಅವನಿಗೆ ಕಣ್ಣು ಕಾಣಿಸಲಿಲ್ಲ. ಅಲ್ಲದೆ ಅದುವರೆಗೂ ಅವನು ಅನ್ನಪಾನಗಳನ್ನು ಮುಟ್ಟಲಿಲ್ಲ.


ಮನದಲ್ಲೆ ಇವುಗಳನ್ನು ನಿತ್ಯವೂ ನೆನೆದಾಗ ನನ್ನೊಳಗೇ ಸೊರಗಿಹೋಗುತ್ತದೆ ನನ್ನ ಮನ.


ತನ್ನ ಬತ್ತಳಿಕೆಯ ಅಂಬುಗಳಿಂದ ಇರಿದಿದ್ದಾನೆ ನನ್ನ ಅಂತರಂಗವನ್ನು.


ನನ್ನ ಬಾಳು ಬೈಗಿನ ನೆರಳಂತೆ I ನಾನಿರುವೆ ಬಾಡಿದ ಹುಲ್ಲಿನಂತೆ II


ಬೂದಿಯೇ ನನಗೆ ಆಹಾರವಾಯಿತು I ಪಾನದಲಿ ಕಣ್ಣೀರು ಮಿಶ್ರವಾಯಿತು II


ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II


ನನಗಾಗುತ್ತದೆ ನಿನ್ನ ಸ್ಮರಣೆ ಮನ ಕುಗ್ಗಿದಾಗ I ಜೋರ್ದನ್, ಹೆರ್ಮನ್ ನಾಡಿಂದ, ಮೀಸಾರ್ ಗುಡ್ಡೆಯಿಂದ II


ಅವನಿಗೆ ಆಹಾರವೂ ಬೇಸರವಾಗುವುದು ಮೃಷ್ಟಾನ್ನವೂ ಅಸಹ್ಯವಾಗುವುದು.


“ನನ್ನ ಬಾಳೇ ನನಗೆ ಬೇಸರವಾಗಿದೆ ಎದೆಬಿಚ್ಚಿ ಮೊರೆಯಿಡುತ್ತಿರುವೆ ಕಹಿ ಮನದಿಂದ ನುಡಿಯುತ್ತಿರುವೆ.


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಆಸ್ಥಾನದ ಅಧಿಕಾರಿಗಳು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೂ ಇಲ್ಲ, ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.


ನನ್ನ ಚರ್ಮ ಉದುರುತ್ತಿದೆ ಕರ್ರಗಾಗಿ ನನ್ನೆಲುಬು ಉರಿಯುತ್ತಿದೆ ತಾಪಕ್ಕೊಳಗಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು