Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:5 - ಕನ್ನಡ ಸತ್ಯವೇದವು C.L. Bible (BSI)

5 ಕೂಗಿ ನಾ ನಿಟ್ಟುಸಿರಿಟ್ಟೆ I ಎಲುಬು ತೊಗಲು ಆಗಿಬಿಟ್ಟೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಟ್ಟುಸಿರಿನಿಂದ ನನ್ನಲ್ಲಿ ಎಲುಬು, ತೊಗಲು ಮಾತ್ರ ಉಳಿದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಟ್ಟುಸುರಿನಿಂದ ನನ್ನಲ್ಲಿ ಎಲುಬು ತೊಗಲು ಮಾತ್ರ ಉಳಿದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೀರ್ಘ ದುಃಖದಿಂದಾಗಿ ನನ್ನ ಎಲುಬುಗಳು ಚರ್ಮಕ್ಕೆ ಅಂಟಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ನನ್ನ ನಿಟ್ಟುಸಿರಿನಿಂದ ಮೊರೆಯಿಡುತ್ತಿದ್ದೇನೆ. ನನ್ನಲ್ಲಿ ಎಲುಬು ತೊಗಲು ಮಾತ್ರ ಉಳಿದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:5
10 ತಿಳಿವುಗಳ ಹೋಲಿಕೆ  

ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ ಮೃತ್ಯುವಿನ ದವಡೆಗೆ ಸಿಕ್ಕಿಕೊಂಡಿದ್ದೇನೆ.


ಈಗ ಅವರ ಮುಖ ಕಾರ್ಮೋಡಕ್ಕಿಂತ ಕಪ್ಪು ಬೀದಿಗಳಲ್ಲಿ ನೋಡುತ್ತಿದ್ದವರಿಗೆ ಅವರ ಗುರುತೂ ಸಿಗದು. ಅವರ ಚರ್ಮ ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ; ಒಣಗಿ ಕಟ್ಟಿಗೆಯಾಗಿದೆ.


ಹರ್ಷ ಹೃದಯ ಒಳ್ಳೆಯ ಔಷಧ; ಕುಗ್ಗಿದ ಮನದಿಂದ ಅಸ್ಥಿಪಂಜರ.


ದುರ್ಜನರೇ ತೊಲಗಿರಿ ನನ್ನಿಂದ ದೂರ I ಪ್ರಭುವಿನ ಕಿವಿಮುಟ್ಟಿದೆ ನನ್ನಾರ್ತ ಸ್ವರ II


ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II


ವರ್ಷ ವರ್ಷವೂ ಇದು ಹಾಗೆಯೆ ನಡೆಯುತ್ತಿತ್ತು; “ಸರ್ವೇಶ್ವರನ ಮಂದಿರಕ್ಕೆ ಹೋದಾಗಲೆಲ್ಲ ಪೆನಿನ್ನಳು ಹನ್ನಳನ್ನು ಕೆಣಕುತ್ತಿದ್ದಳು. ಇದರಿಂದಾಗಿ ಒಮ್ಮೆ ಹನ್ನಳು ಊಟ ಮಾಡಲೊಲ್ಲದೆ ಅಳುತ್ತಾ ಇದ್ದಳು.


ಅರಳಿ ಬಾಡುವನು ಹೂವಿನಂತೆ ನಿಲ್ಲದೆ ಓಡುವನು ನೆರಳಿನಂತೆ.


ಚಿಗುರಿ ಹೂಬಿಡುವುದದು ಬೆಳಗಿನಲಿ I ಸೊರಗಿ ತರಗಾಗುವುದು ಬೈಗಿನಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು