Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:21 - ಕನ್ನಡ ಸತ್ಯವೇದವು C.L. Bible (BSI)

21 ಪ್ರಭುವನು ಭಜಿಸಿರಿ ಆತನ ಸೇನೆಗಳೇ I ಭಜಿಸಿ ಪ್ರಭುವನು, ಓ ಎನ್ನಮನವೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆತನ ಸೈನ್ಯಗಳೇ, ಆತನ ಮೆಚ್ಚಿಕೆಯನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆತನ ಸೈನ್ಯಗಳೇ, ಚಿತ್ತವನ್ನು ನೇರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವರ ಇಷ್ಟವನ್ನು ನಡೆಸುವ ಸೇವಕರೇ, ಅವರ ಎಲ್ಲಾ ಸೈನ್ಯಗಳೇ, ಯೆಹೋವ ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:21
16 ತಿಳಿವುಗಳ ಹೋಲಿಕೆ  

ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ತಕ್ಷಣವೇ ಆ ದೂತನ ಸಂಗಡ ಸ್ವರ್ಗದ ದೂತಪರಿವಾರವೊಂದು ಕಾಣಿಸಿಕೊಂಡಿತು.


ಗಾಳಿಗಳೇ ನಿನಗೆ ದೂತರುಗಳು I ಅಗ್ನಿಜ್ಞಾಲೆಗಳೇ ಆಳುಗಳು II


ಹೇ ಸರ್ವೇಶ್ವರಾ, ನೀವೊಬ್ಬರೇ ದೇವರು; ಉನ್ನತೋನ್ನತ ಆಕಾಶವನು, ಅದರ ಪರಿವಾರಗಳನು ಬುವಿಯನು, ಕಡಲನು, ಅದರ ಸರ್ವಜಲಚರಗಳನು ಸೃಷ್ಟಿಸಿದಾತ ನೀವು; ಸಮಸ್ತ ಪ್ರಾಣಿಗಳಿಗು ಜೀವಾಧಾರ ನೀವು; ಆರಾಧಿಸುತ್ತವೆ ನಿಮ್ಮನು ಆಕಾಶದ ಪರಿವಾರಗಳು.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಆಗ ಆ ವ್ಯಕ್ತಿ, “ನಾನು ಅಂಥವನಲ್ಲ; ನಾನು ಸರ್ವೇಶ್ವರನ ಸೇನಾಪತಿ. ಇದೀಗಲೆ ಬಂದವನು,’ ಎಂದು ಉತ್ತರಿಸಿದನು. ಕೂಡಲೆ ಯೆಹೋಶುವ ಅವನಿಗೆ ಸಾಷ್ಟಾಂಗವೆರಗಿ, “ಒಡೆಯಾ, ತಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಎಂದನು.


ದೇವದೂತರು ಅವನೆದುರಿಗೆ ಬಂದರು. ಯಕೋಬನು ಅವರನ್ನು ನೋಡಿ, “ಇದು ದೇವರ ಪಾಳೆಯ,” ಏಂದು ಹೇಳಿ ಆ ಸ್ಥಳಕ್ಕೆ ‘ಮಹನಯಿಮ್’ ಎಂದು ಹೆಸರಿಟ್ಟನು.


ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ


ತನ್ನ ಸಹಸ್ರಾರು, ಲಕ್ಷಾಂತರ ರಥಗಳ ಸಮೇತ I ಸೀನಾಯಿಂದ ದೇಗುಲಕೆ ಪ್ರಭುವಿನ ಸಮಾಗಮನ II


ಸೃಷ್ಟಿಯಾಯಿತು ಗಗನ ಮಂಡಲ ಆತನ ನುಡಿಯೊಂದಕೆ I ರೂಪುಗೊಂಡಿತು ತಾರಾ ಮಂಡಲ ಅವನುಸಿರು ಮಾತ್ರಕೆ II


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು