Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:22 - ಕನ್ನಡ ಸತ್ಯವೇದವು C.L. Bible (BSI)

22 ಭಜಿಸಿರಿ ಪ್ರಭುವನು ಆತನ ಸೃಷ್ಟಿಗಳೇ I ಆತನ ಅಧಿಕಾರದಲ್ಲಿಹ ಸಕಲ ವಸ್ತುಗಳೇ I ಭಜಿಸು ಪ್ರಭುವನು, ಓ ಎನ್ನಮನವೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸರ್ವಸ್ಥಳಗಲ್ಲಿರುವ ಸಮಸ್ತವನ್ನು ಸೃಷ್ಟಿಸಿದಾತನು ಯೆಹೋವನೇ ಸರ್ವಸ್ಥಳಗಳಲ್ಲಿರುವ ಸಮಸ್ತಕ್ಕೂ ದೇವರೇ ಅಧಿಪತಿ. ಅವುಗಳೆಲ್ಲಾ ಆತನನ್ನು ಕೊಂಡಾಡಲಿ! ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೇವರ ಆಳಿಕೆಯ ಎಲ್ಲಾ ಕಡೆಗಳಲ್ಲಿಯೂ ಇರುವುದು. ಅವರ ಎಲ್ಲಾ ಸೃಷ್ಟಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ. ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:22
14 ತಿಳಿವುಗಳ ಹೋಲಿಕೆ  

ಪ್ರಭು, ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು I ಕೊಂಡಾಡುವುದು ನಿನ್ನನು ಭಕ್ತ ಸಮೂಹವು II


ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


ಪ್ರಭುವನು ಸ್ತುತಿಸಲಿ ಉಸಿರಿರುವುದೆಲ್ಲವೂ I ಪ್ರಭುವಿಗೆ ಸ್ತೋತ್ರವಾಗಲಿ ಅಲ್ಲೆಲೂಯ! II


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ಕಾಡುಮೃಗಗಳು, ನರಿ, ಉಷ್ಟ್ರಪಕ್ಷಿಗಳು ಕೂಗಿ ಕೊಂಡಾಡುವುವು ನನ್ನನು. ಏಕೆನೆ ಕೊಡುವೆನು ನೀರನ್ನು ಮರುಭೂಮಿಯಲಿ ಹರಿಸುವೆನು ತೊರೆನದಿಗಳನ್ನು ಅರಣ್ಯದಲಿ.


ಪ್ರಭುವಿಗೆ ಸ್ತುತಿಸ್ತೋತ್ರ ಅಲ್ಲೆಲೂಯ I ಮನವೇ, ವಂದಿಸು ಆತನನು ಅಲ್ಲೆಲೂಯ II


ದಹಿಸಿಹೋಗಲಿ ಧರೆಯಿಂದ ದುಷ್ಟರು I ನಿರ್ಮೂಲವಾಗಲಿ ಸಕಲ ದುರುಳರು I ಪ್ರಭುವನು ನನ್ನ ಮನ ಸ್ತುತಿಸಲಿ I ಪ್ರಭುವಿಗೆ ಸ್ತುತಿಸ್ತೋತ್ರವಾಗಲಿ II


ಭಜಿಸು ನನ್ನ ಮನವೇ, ಭಜಿಸು, ಪ್ರಭುವನು I ಪ್ರಭು, ನನ್ನ ದೇವಾ, ನೀ ಸರ್ವೋತ್ತಮನು I ಮಹಿಮೆ ಪ್ರತಾಪಗಳಿಂದ ಭೂಷಿತನು II


ಭಜಿಸು ನನ್ನ ಮನವೇ, ಭಜಿಸು ಪ್ರಭುವನು I ನನ್ನ ಅಂತರಂಗವೇ, ಭಜಿಸು ಆತನನು I ನೆನೆ ಆತನ ಪರಮಪಾವನ ನಾಮವನು II


ಸಲಹುವನು ತನ್ನನು ಪ್ರೀತಿಸುವವರೆಲ್ಲರನು I ನಾಶಮಾಡುವನು ದುರ್ಮಾರ್ಗಿಗಳೆಲ್ಲರನು II


ಹೊಗಳಿರಿ ಸ್ವರ್ಗದಿಂದ ಪ್ರಭುವನು I ವಂದಿಸಿ ಮಹೋನ್ನತದಲಿ ಆತನನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು