Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:4 - ಕನ್ನಡ ಸತ್ಯವೇದವು C.L. Bible (BSI)

4 ಉಳಿಸುವನು ಪಾತಾಳದ ಕೂಪದಿಂದ ನನ್ನನು I ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ಜೀವವನ್ನು ನಾಶದಿಂದ ತಪ್ಪಿಸುವವನೂ ಪ್ರೀತಿಕೃಪೆಗಳೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆತನು ನಮ್ಮ ಜೀವವನ್ನು ನಾಶನದಿಂದ ರಕ್ಷಿಸಿ ನಮಗೆ ಪ್ರೀತಿಯನ್ನೂ ಕನಿಕರವನ್ನೂ ತೋರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರು ನಿಮ್ಮ ಜೀವವನ್ನು ಪಾತಾಳದಿಂದ ವಿಮೋಚಿಸುವರು; ಪ್ರೀತಿ ಅನುಕಂಪವನ್ನು ನಿನಗೆ ಕಿರೀಟವಾಗಿ ಶೃಂಗರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:4
15 ತಿಳಿವುಗಳ ಹೋಲಿಕೆ  

ಮಧುರದನಿಗೈವುದು ಎನ್ನಧರ ನಿನ್ನ ಗುಣಗಾನದಲಿ I ನೀನುದ್ಧರಿಸಿದ ಎನ್ನ ಮನ ಭಾಗಿಯಾಗುವುದಾ ಗಾನದಲಿ II


ಪಡುವಣದಿಂದ ಮೂಡಣವೆಷ್ಟೋ ದೂರ I ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ II


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ತನ್ನ ದಾಸರನು ಉದ್ಧಾರಮಾಡದಿರನು ಪ್ರಭು I ತನ್ನ ಶರಣರೊಳೊಬ್ಬರನು ದಂಡಿಸನಾ ವಿಭು II


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ನೀನಾತನನು ಸ್ವಾಗತಿಸಿದೆ ಶುಭಾಶಯದೊಂದಿಗೆ I ಚಿನ್ನದ ಕಿರೀಟವನು ಮುಡಿಸಿದೆ ಆತನ ಶಿರಸ್ಸಿಗೆ II


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಋತು ಶಿಶಿರಕೆ ಸುಗ್ಗಿಯ ಸೊಬಗಿನ ಮುಕುಟವ ಮುಡಿಸಿದ್ದೀ I ನೀ ನಡೆವ ಹಾದಿಯಲ್ಲೆಲ್ಲಾ ತುಳುಕುತಿದೆ ಸಮೃದ್ಧಿ II


ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ.


ತಟ್ಟನೆ ಉಕ್ಕಿ ಹರಿಯುವ ಕೋಪದಿಂದ ಕ್ಷಣಮಾತ್ರ ಮುಖಮರೆಸಿಕೊಂಡೆ ನಿನ್ನಿಂದ ಕರುಣಿಸುವೆನು ನಿನ್ನನು ಶಾಶ್ವತ ಕೃಪೆಯಿಂದ.” ಇಂತೆನ್ನುತಿಹನು ನಿನ್ನ ಉದ್ಧಾರಕ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು