Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:5 - ಕನ್ನಡ ಸತ್ಯವೇದವು C.L. Bible (BSI)

5 ಒಳ್ಳೆಯವುಗಳಿಂದ ತುಂಬಿಸುವನು ನನ್ನ ಜೀವಮಾನವನು I ಪುನರುಜ್ಜೀವನಗೊಳಿಸುವನು ಗರುಡನಂತೆ ನನ್ನ ಯೌವನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಶ್ರೇಷ್ಠವರಗಳಿಂದ ನಿನ್ನ ಆಶೆಯನ್ನು ಪೂರ್ತಿಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರಿಗಿ ಬರಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆತನು ನಮಗೆ ಸುವರಗಳನ್ನು ಹೇರಳವಾಗಿ ದಯಪಾಲಿಸುವನು. ಹದ್ದಿಗೆ ಬರುವಂತೆಯೇ ನಮಗೆ ಯೌವನವನ್ನು ಬರಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಯೌವನವು ಹದ್ದಿನ ಹಾಗೆ ನವೀಕರಿಸುವಂತೆ ಮಾಡುವರು. ಅವರು ನಿಮ್ಮ ಆಶೆಗಳನ್ನು ಒಳ್ಳೆಯವುಗಳಿಂದ ತೃಪ್ತಿಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:5
12 ತಿಳಿವುಗಳ ಹೋಲಿಕೆ  

ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ಬಾಯಾರಿದವರ ಆಸೆಯನ್ನಾತ ಪೂರೈಸಿದನು I ಹಸಿದವರನು ಮೃಷ್ಟಾನ್ನದಿಂದ ತೃಪ್ತಿಪಡಿಸಿದನು II


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಹೀಗಿರಲು, ನಾವು ಎದೆಗುಂದುವುದಿಲ್ಲ. ನಮ್ಮ ಭೌತಿಕ ದೇಹವು ನಶಿಸುತ್ತಿದ್ದರೂ ನಮ್ಮ ಅಂತರಂಗವು ದಿನೇದಿನೇ ನೂತನವಾಗುತ್ತದೆ.


ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II


ನೀ ನೀಡಲು ಕೂಡಿಸಿಟ್ಟುಕೊಳ್ಳುವುವು I ನೀ ಕೈತೆರೆಯಲು ಸಂತೃಪ್ತಿಪಡುವುವು II


ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II


ನಿನ್ನ ಆಸ್ಥಾನದಲಿ ನೆಲೆಸಲು ನೀನಾಯ್ದು ತಂದ ದೈವಭಕ್ತ ಧನ್ಯ I ನಮಗೆ ತರಲಿ ತೃಪ್ತಿ ನೀ ವಾಸಿಸುವ ಪವಿತ್ರಾಲಯದ ಸೌಭಾಗ್ಯ II


ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.


ಮೋಶೆ ನನ್ನನ್ನು ಕಳಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮುಂಚಿನಂತೆಯೇ ಶಕ್ತಿಯಿದೆ.


ಅವನ ದೇಹ ಬಾಲ್ಯಕ್ಕಿಂತಲೂ ಕೋಮಲವಾಗುವುದು ಎಳೆತನದ ಚೈತನ್ಯವನ್ನು ಮತ್ತೆ ಅನುಭವಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು