Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:7 - ಕನ್ನಡ ಸತ್ಯವೇದವು C.L. Bible (BSI)

7 ತೋರಿಸಿದಾತ ತನ್ನ ಮಾರ್ಗವನು ಮೋಶೆಗೆ I ತನ್ನ ಮಹತ್ಕಾರ್ಯಗಳನು ಇಸ್ರಯೇಲರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಮೋಶೆಗೆ ತನ್ನ ಮಾರ್ಗವನ್ನೂ, ಇಸ್ರಾಯೇಲರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು ಮೋಶೆಗೆ ತನ್ನ ಮಾರ್ಗವನ್ನೂ ಇಸ್ರಾಯೇಲ್ಯರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನು ತನ್ನ ಕಟ್ಟಳೆಗಳನ್ನು ಮೋಶೆಗೆ ಉಪದೇಶಿಸಿದನು; ತನ್ನ ಮಹತ್ಕಾರ್ಯಗಳನ್ನು ಇಸ್ರೇಲರಿಗೆ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ತಮ್ಮ ಮಾರ್ಗಗಳನ್ನು ಮೋಶೆಗೂ, ತಮ್ಮ ಕ್ರಿಯೆಗಳನ್ನು ಇಸ್ರಾಯೇಲರಿಗೂ ಪ್ರಕಟಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:7
19 ತಿಳಿವುಗಳ ಹೋಲಿಕೆ  

ನನಗೆ ನಿಮ್ಮ ದಯೆ ದೊರಕಿದೆಯಾದರೆ ನಾನು ನಿಮ್ಮನ್ನು ಬಲ್ಲವನಾಗಿರುವಂತೆ ನಿಮ್ಮ ಮಾರ್ಗವನ್ನು ನನಗೆ ತೋರಿಸಿರಿ. ಆಗ ನಿಮ್ಮ ದಯೆ ನನಗೆ ದೊರಕಿದೆಯೆಂದು ತಿಳಿದುಕೊಳ್ಳುತ್ತೇನೆ. ಈ ಜನ ನಿಮ್ಮ ಪ್ರಜೆಯೆಂಬುದನ್ನು ನೆನಪಿನಲ್ಲಿಡಿ,” ಎಂದು ಅರಿಕೆ ಮಾಡಿದನು.


ತಿಳಿಸಿಹನು ತನ್ನ ವಾಕ್ಯವನು ಯಕೋಬ್ಯರಿಗೆ I ತನ್ನ ವಿಧಿನಿಯಮಗಳನು ಇಸ್ರಯೇಲರಿಗೆ II


ಮರೆತುಬಿಟ್ಟರವರು ಆತನ ಮಹತ್ಕಾರ್ಯಗಳನು I ತಮ್ಮೆದುರಿನಲ್ಲೇ ಸಾಧಿಸಿದ ಅದ್ಭುತಗಳನು : II


ಕಲಿಸಿದಿರಿ ಅವರಿಗೆ ಆಜ್ಞಾವಿಧಿ ಧರ್ಮಗಳನು ಪ್ರಕಟಿಸಿದಿರಿ ನಿಮಗೆ ಮೀಸಲಾದ ವಿಶ್ರಾಂತಿ ದಿನವನು; ನಿಮ್ಮ ದಾಸ ಮೋಶೆಯ ಮುಖಾಂತರ ಸಾಧಿಸಿದಿರಿದನು.


ಕುರುಬನು ತನ್ನ ಕುರಿಮಂದೆಯನು ಕರೆದೊಯ್ಯುವಂತೆ I ಮೋಶೆ, ಆರೋನರಿಂದ ನಿನ್ನ ಪ್ರಜೆಗಳನು ನಡೆಸಿದೆ II


ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡಿದರು.


ಮೇಘಸ್ತಂಭದಲಿದ್ದು ಅವರೊಡನೆ ಮಾತಾಡಿದನು I ಕೈಗೊಂಡರು ಅವರು ಆತನಿತ್ತ ವಿಧಿನಿಯಮಗಳನು II


ನೇಮವಿತ್ತನು ಯಕೋಬವಂಶಕೆ I ಶಾಸನಕೊಟ್ಟನು ಇಸ್ರಯೇಲರಿಗೆ II ವಿಧಿಸಿದ ನಿಂತು ನಮ್ಮ ಪೂರ್ವಜನರಿಗೆ I “ಕಲಿಸಿರಿ ಇವನ್ನು ನಿಮ್ಮ ಮಕ್ಕಳಿಗೆ” II


ಮೋಶೆಯೊಬ್ಬನೇ ದೇವರಿದ್ದ ಕಾರ್ಮುಗಿಲನ್ನು ಸಮೀಪಿಸಿದ್ದನು. ಜನರು ದೂರದಲ್ಲೇ ನಿಂತಿದ್ದರು.


ಸರ್ವೇಶ್ವರ ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದರು. ಅವರು, “ಬೆಟ್ಟದ ತುದಿಗೆ ಬಾ,” ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.


ಜನರೆಲ್ಲರು, “ಸರ್ವೇಶ್ವರ ಸ್ವಾಮಿ ಹೇಳಿದಂತೆಯೇ ನಾವು ಮಾಡುತ್ತೇವೆ,” ಎಂದು ಒಕ್ಕೊರಲಿನಿಂದ ಉತ್ತರಕೊಟ್ಟರು. ಮೋಶೆ ಸರ್ವೇಶ್ವರನ ಬಳಿಗೆ ಹೋಗಿ ಜನರ ಆ ಉತ್ತರವನ್ನು ಅರಿಕೆ ಮಾಡಿದನು.


ಹಾಮನಾಡಿನಲಿ ಮಾಡಿದ ಅದ್ಭುತಗಳನು I ಕೆಂಗಡಲಬಳಿ ನಡೆದ ಘೋರ ಕೃತ್ಯಗಳನು II


ನನ್ನ ದಾಸನಾದ ಮೋಶೆ ಅಂಥವನಲ್ಲ ಅವನೇ ನಂಬಿಗಸ್ತ ನನ್ನ ಮನೆಯಲ್ಲೆಲ್ಲಾ.


ತನ್ನ ಪ್ರಜೆಗಿತ್ತಿಹನು ಅನ್ಯಜನರ ಸೊತ್ತನು I ತೋರ್ಪಡಿಸಿಹನು ಈ ಪರಿ ತನ್ನ ಸಾಮರ್ಥ್ಯವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು