Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:13 - ಕನ್ನಡ ಸತ್ಯವೇದವು C.L. Bible (BSI)

13 ಮಲೆಗಳ ಮೇಲೆ ಮಳೆಗರೆಯುವೆ ಗಗನದಿಂದ I ತೃಪ್ತಿಗೊಂಡಿದೆ ಪೃಥ್ವಿಯು ನಿನ್ನ ಕೃಪೆಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ನಿನ್ನ ಮೇಲಂತಸ್ತುಗಳಿಂದ ಪರ್ವತಗಳಿಗೆ ನೀರು ಕೊಡುತ್ತೀ; ನಿನ್ನ ಕಾರ್ಯಫಲದಿಂದ ಭೂಮಿಯು ತೃಪ್ತಿಹೊಂದುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನು ನಿನ್ನ ಮೇಲಂತಸ್ತುಗಳಿಂದ ಪರ್ವತಗಳಿಗೆ ನೀರು ಕೊಡುತ್ತೀ; ನಿನ್ನ ಕಾರ್ಯಫಲದಿಂದ ಭೂವಿುಯು ತೃಪ್ತಿಹೊಂದುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆತನು ಬೆಟ್ಟಗಳ ಮೇಲೆ ಮಳೆಯನ್ನು ಸುರಿಸುವನು. ಆತನ ಸೃಷ್ಟಿಗಳು ಭೂಮಿಗೆ ಅಗತ್ಯವಾದ ಪ್ರತಿಯೊಂದನ್ನೂ ಒದಗಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರು ಬೆಟ್ಟಗಳಿಗೆ ತಮ್ಮ ಉಪ್ಪರಿಗೆಗಳೊಳಗಿಂದ ನೀರು ಹಾಕುತ್ತಾರೆ. ಅವರ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:13
11 ತಿಳಿವುಗಳ ಹೋಲಿಕೆ  

ಕವಿಸುವನಾತ ಮೋಡಗಳನು ಗಗನದಲಿ I ಸುರಿಸುವನು ಮಳೆಯನು ಬುವಿಯಲಿ I ಬೆಳೆಸುವನು ಹುಲ್ಲನು ಬೆಟ್ಟಗಳಲಿ II


ಆಕಾಶದಲ್ಲಿ ನೀರು ಭೋರ್ಗರೆಯುವಂತೆ ಭುವಿಯ ಕಟ್ಟಕಡೆಯಿಂದ ಮೋಡಗಳು ಏರುವಂತೆ ಮಳೆಗಾಗಿ ಮಿಂಚು ಹೊಳೆಯುವಂತೆ ತಮ್ಮ ಭಂಡಾರದಿಂದ ಗಾಳಿ ಬೀಸುವಂತೆ - ಮಾಡುತ್ತದೆ ಸರ್ವೇಶ್ವರನಾ ಗರ್ಜನೆ.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡೋ ಹಳ್ಳದಿಣ್ಣೆಗಳ ನಾಡು; ಆಕಾಶದಿಂದ ಮಳೆಬಿದ್ದಂತೆ ನೀರುದೊರಕುತ್ತದೆ.


ಯಾರಿಗಿದೆ ಮೋಡಗಳನು ಲೆಕ್ಕಿಸುವ ಶಕ್ತಿ? ಆಕಾಶದಲ್ಲಿನ ಬುದ್ದಲಿಗಳನು ಮೊಗಚಿಹಾಕುವ ಬುದ್ಧಿಶಕ್ತಿ?


ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”


ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


ಉನ್ನತದಲ್ಲಿ ಹಲವು ಉಪ್ಪರಿಗೆಗಳನ್ನು ನಿರ್ಮಿಸುವವ ಆತನೆ ಭುವಿಯಲ್ಲಿ ಗುಮ್ಮಟವನ್ನು ಸ್ಥಾಪಿಸಿಕೊಂಡವನು ಆತನೆ ಸಾಗರದ ನೀರನ್ನು ಸೇದಿ ಧರೆಯ ಮೇಲೆ ಸುರಿಯುವವ ಆತನೆ ಆತನ ನಾಮಧೇಯ ಸರ್ವೇಶ್ವರಸ್ವಾಮಿ ಎಂಬುದೇ.


ನಿರ್ಮಿಸಿರುವೆ ನಿನ್ನ ಭವನವನು ಜಲದ ಮೇಲೆ I ಮಾಡುವೆ ಸಂಚಾರ ಮಾರುತನ ರೆಕ್ಕೆಗಳ ಮೇಲೆ I ನಿನಗೆ ರಥವಾಹನಗಳು ಆ ಮುಗಿಲು ಮೋಡಗಳೇ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು