Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:2 - ಕನ್ನಡ ಸತ್ಯವೇದವು C.L. Bible (BSI)

2 ತೊಟ್ಟುಕೊಂಡಿರುವೆ ಬೆಳಕನೇ ಬಟ್ಟೆಯಂತೆ I ಹರಡಿಸಿರುವೆ ಆಗಸವನು ಗುಡಾರದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿದ್ದೀ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ಬೆಳಕನ್ನು ನಿಲುವಂಗಿಯಂತೆ ಧರಿಸಿಕೊಂಡಿರುವೆ ನೀನು ಆಕಾಶಮಂಡಲವನ್ನು ಪರದೆಯಂತೆ ಹರಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುತ್ತಾರೆ, ಆಕಾಶವನ್ನು ಗುಡಾರದ ಹಾಗೆ ಹರಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:2
11 ತಿಳಿವುಗಳ ಹೋಲಿಕೆ  

ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ.


ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.


ಜಗವನು, ಅದರಲ್ಲಿನ ಮನುಜರನು ಸೃಜಿಸಿದವನು ನಾನೇ, ಆಕಾಶಮಂಡಲವನು ವಿಶಾಲವಾಗಿ ಹರಡಿದ್ದು ನನ್ನ ಕೈಗಳೇ, ಸೂರ್ಯ, ಚಂದ್ರ, ನಕ್ಷತ್ರಗಳನು ನಿಯಂತ್ರಿಸುವವನು ನಾನೆ.


ದೇವರೇ ಬೆಳಕು. ಅವರಲ್ಲಿ ಕತ್ತಲು ಎಂಬುದೇ ಇಲ್ಲ. ಅವರ ಪುತ್ರನಿಂದಲೇ ನಾವು ಕೇಳಿದ ಈ ಸಂದೇಶವನ್ನು ನಿಮಗೆ ಸಾರುತ್ತಿದ್ದೇವೆ.


ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಸ್ವಾಮಿ ರೂಪಾಂತರ ಹೊಂದಿದರು, ಅವರ ಮುಖ ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಪ್ರಜ್ವಲಿಸಿತು.


ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:


ಆಕಾಶಮಂಡಲವನ್ನು ಹರಡಿದವನು ದೇವರೇ ಕಡಲಿನ ತರಂಗಗಳನ್ನು ಮೆಟ್ಟಿದವನು ಆತನೊಬ್ಬನೇ.


ಇಗೋ, ಪಸರಿಸುತ್ತಾನೆ ಸುತ್ತಲು ತನ್ನ ಬೆಳಕನ್ನು ಮುಚ್ಚಿಡುತ್ತಾನೆ ಕಡಲಿನ ಅಡಿಭಾಗವನು.


ರವಿಯಂತಿದೆ ಆತನ ತೇಜಸ್ಸಿನ ಮೆರೆತ ಕಿರಣಗಳು ಹೊರಹೊಮ್ಮುತಿವೆ ಆತನ ಕರಗಳಿಂದ ಮರೆಯಾಗಿದೆ ಅಲ್ಲೇ ಆತನ ಶಕ್ತಿಸಾಮರ್ಥ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು