Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:21 - ಕನ್ನಡ ಸತ್ಯವೇದವು C.L. Bible (BSI)

21 ಗರ್ಜಿಸುತ್ತವೆ ಪ್ರಾಯಸಿಂಹಗಳು ಬೇಟೆಗಾಗಿ I ದೇವರನ್ನು ಎದುರು ನೋಡುತ್ತವೆ ಆಹಾರಕ್ಕಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪ್ರಾಯದ ಸಿಂಹಗಳು ಬೇಟೆಗಾಗಿ ಗರ್ಜಿಸುತ್ತವೆ; ದೇವರಿಂದ ಆಹಾರವನ್ನು ಕೇಳಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪ್ರಾಯದ ಸಿಂಹಗಳು ಬೇಟೆಗಾಗಿ ಗರ್ಜಿಸುತ್ತವೆ; ದೇವರಿಂದ ಆಹಾರವನ್ನು ಕೇಳಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸಿಂಹಗಳು ಬೇಟೆಯಾಡುವಾಗ ಆಹಾರಕ್ಕಾಗಿ ದೇವರನ್ನು ಕೇಳಿಕೊಳ್ಳುತ್ತಿವೆಯೊ ಎಂಬಂತೆ ಬರ್ಜಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಸಿಂಹದ ಮರಿಗಳು ಬೇಟೆಗೋಸ್ಕರವೂ, ದೇವರಿಂದ ತಮ್ಮ ಆಹಾರವನ್ನು ಹುಡುಕುವುದಕ್ಕೋಸ್ಕರವೂ ಗರ್ಜಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:21
11 ತಿಳಿವುಗಳ ಹೋಲಿಕೆ  

ಗುಹೆಯಲ್ಲಿ ಮಲಗಿರುವ ಸಿಂಹಕೆ ಬೇಟೆಯಾಡಿ ಊಟ ಒದಗಿಸಬಲ್ಲೆಯಾ ನೀನು?


ಕಾಡುಮೃಗಗಳು ನಿನ್ನ ಕಡೆಗೆ ತಲೆಯೆತ್ತಿವೆ; ಹಳ್ಳಕೊಳ್ಳಗಳು ಬತ್ತಿಹೋಗಿವೆ; ಹುಲ್ಲುಗಾವಲನ್ನು ಕಾಳ್ಗಿಚ್ಚು ದಹಿಸಿಬಿಟ್ಟಿದೆ.


ಯುವ ಕೇಸರಿಗೆ ಇರಬಹುದು ಹಸಿವು, ದಾಹ I ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II


ಭೂಜಂತುಗಳೇ ಅಂಜಬೇಡಿ, ವನವೃಕ್ಷಗಳು ಫಲಭರಿತವಾಗಿರುವುವು; ಅಂಜೂರ, ದ್ರಾಕ್ಷಿಗಳೆಲ್ಲವೂ ತುಂಬಿ ತುಳುಕುವುವು.


ಬೇಟೆ ಕಂಡಾಗಲ್ಲದೆ ಸಿಂಹವು ಕಾಡಿನಲ್ಲಿ ಗರ್ಜಿಸುವುದುಂಟೆ? ಏನನ್ನೂ ಹಿಡಿಯದೆ ಯುವಸಿಂಹವು ಗುಹೆಯಲ್ಲೆ ಗುರುಗುಟ್ಟುವುದುಂಟೆ?


ಪಶುಪ್ರಾಣಿಗಳು ನರಳುತ್ತಿವೆ; ದನಕರುಗಳು ಮೇವಿಲ್ಲದೆ ಕಂಗಾಲಾಗಿವೆ; ಕುರಿಮಂದೆಗಳು ಕೂಡ ಕಂಗೆಟ್ಟಿವೆ.


ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಸಿಂಹವೋ ಪ್ರಾಯದ ಸಿಂಹವೋ ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಆ ಕೂಗನ್ನು ಕೇಳಿ ಕುರುಬರನೇಕರು ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದು, ಅವರ ಗದ್ದಲಕ್ಕೆ ಎದೆಗುಂದದು. ಅಂತೆಯೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆದ ನಾನು ಯುದ್ಧಮಾಡಲು ಸಿಯೋನ್ ಶಿಖರದ ಮೇಲೆ ಇಳಿದು ಬರುವಾಗ ನನ್ನನ್ನು ಯಾರೂ ಹೆದರಿಸುವುದಿಲ್ಲ, ಎದೆಗುಂದಿಸುವಂತಿಲ್ಲ.


ಪಶುಗಳಿಗೂ ಕೂಗುವ ಕಾಗೆಮರಿಗಳಿಗೂ I ಒದಗಿಸುವನು ಬೇಕಾದ ಆಹಾರಗಳನು II


ಎತ್ತುವನಾತ ಬಿದ್ದವರನೆಲ್ಲ I ಉದ್ಧರಿಪನು ಕುಗ್ಗಿದವರನೆಲ್ಲ II


ಆಹಾರವನು ಒದಗಿಸುವವರಾರು ತಾಯಿ ಕಾಗೆಗೆ ಅದರ ಹಸಿದ ಮರಿಗಳು ಕೊಕ್ಕೆತ್ತಿ ದೇವರಿಗೆ ಮೊರೆಯಿಡುವಾಗ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು