Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:24 - ಕನ್ನಡ ಸತ್ಯವೇದವು C.L. Bible (BSI)

24 ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನೇ, ನಿನ್ನ ಕೈಕೆಲಸಗಳು ಎಷ್ಟೋ ವಿಧವಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿದ್ದೀ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನೇ, ನೀನು ಅನೇಕ ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ನೀನು ಸೃಷ್ಟಿಸಿದ ವಸ್ತುಗಳಿಂದ ಭೂಮಿಯು ತುಂಬಿಹೋಗಿದೆ. ನಿನ್ನ ಪ್ರತಿಯೊಂದು ಕಾರ್ಯದಲ್ಲೂ ನಿನ್ನ ಜ್ಞಾನವನ್ನು ಕಾಣಬಲ್ಲವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೆಹೋವ ದೇವರೇ, ನಿಮ್ಮ ಕೆಲಸಗಳು ಎಷ್ಟೋ ಇವೆ! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟುಮಾಡಿದ್ದೀರಿ, ಭೂಮಿಯು ನಿಮ್ಮ ಸಂಪತ್ತಿನಿಂದ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:24
22 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.


ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II


ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II


ಜ್ಞಾನದಿಂದ ಜಗವನು ನಿರ್ಮಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II


ಹೇ ಸರ್ವೇಶ್ವರಾ, ನೀವೊಬ್ಬರೇ ದೇವರು; ಉನ್ನತೋನ್ನತ ಆಕಾಶವನು, ಅದರ ಪರಿವಾರಗಳನು ಬುವಿಯನು, ಕಡಲನು, ಅದರ ಸರ್ವಜಲಚರಗಳನು ಸೃಷ್ಟಿಸಿದಾತ ನೀವು; ಸಮಸ್ತ ಪ್ರಾಣಿಗಳಿಗು ಜೀವಾಧಾರ ನೀವು; ಆರಾಧಿಸುತ್ತವೆ ನಿಮ್ಮನು ಆಕಾಶದ ಪರಿವಾರಗಳು.


ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.


ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಋತು ಶಿಶಿರಕೆ ಸುಗ್ಗಿಯ ಸೊಬಗಿನ ಮುಕುಟವ ಮುಡಿಸಿದ್ದೀ I ನೀ ನಡೆವ ಹಾದಿಯಲ್ಲೆಲ್ಲಾ ತುಳುಕುತಿದೆ ಸಮೃದ್ಧಿ II


ಇದನರಿಯನು ಪಶುಪ್ರಾಯನು I ಇದ ತಿಳಿಯನು ಬುದ್ಧಿಹೀನನು II


ಕಂಡರು ಪ್ರಭುವಿನ ಪವಾಡಗಳನು I ಸಮುದ್ರದೊಳಾತನ ಅದ್ಭುತಗಳನು II


ತಿಮಿಂಗಲಗಳೂ ಆದಿಸಾಗರಗಳೂ I ಹೊಗಳಲಿ ಭೂಮಂಡಲದಿಂದ ಪ್ರಭುವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು