Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:31 - ಕನ್ನಡ ಸತ್ಯವೇದವು C.L. Bible (BSI)

31 ಸ್ವಾಮಿದೇವನ ಮಹಿಮೆಯಿರಲಿ ಶಾಶ್ವತವಾಗಿ I ಆತ ಸಂತೋಷಿಸಲಿ ತನ್ನ ಸುಕೃತ್ಯಗಳಿಗಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋವನ ಮಹಿಮೆಯು ಸದಾಕಾಲವೂ ಇರಲಿ; ಯೆಹೋವನಿಗೆ ಆತನ ಸೃಷ್ಟಿಗಳಿಂದ ಸಂತೋಷವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೋವನ ಮಹಿಮೆಯು ಸದಾಕಾಲವೂ ಇರಲಿ; ಯೆಹೋವನಿಗೆ ಆತನ ಸೃಷ್ಟಿಗಳಿಂದ ಸಂತೋಷವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋವನ ಮಹಿಮೆಯು ಶಾಶ್ವತವಾಗಿರಲಿ! ಯೆಹೋವನು ತಾನು ಸೃಷ್ಟಿಸಿದವುಗಳಲ್ಲಿ ಆನಂದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೆಹೋವ ದೇವರ ಮಹಿಮೆಯು ಯುಗಯುಗಕ್ಕೂ ಇರಲಿ; ಯೆಹೋವ ದೇವರು ತಮ್ಮ ಕೆಲಸಗಳಲ್ಲಿ ಸಂತೋಷಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:31
17 ತಿಳಿವುಗಳ ಹೋಲಿಕೆ  

ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.


ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.


ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.


ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು.


ನನಗೂ ಇಸ್ರಯೇಲರಿಗೂ ನಡುವೆ ಇದೊಂದು ಸದಾಕಾಲದ ಗುರುತು. ಆರು ದಿನಗಳಲ್ಲಿ ಸರ್ವೇಶ್ವರನಾದ ನಾನು ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿ ಏಳನೆಯ ದಿನದಲ್ಲಿ ದುಡಿಯದೆ ವಿಶ್ರಮಿಸಿಕೊಂಡೆನಲ್ಲವೆ?”


ಅವರ ಆಳ್ವಿಕೆ ಯುಗಯುಗಾಂತರಕ್ಕೂ ಇರಲಿ. ಆಮೆನ್.


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ದೇವರಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ! ಆಮೆನ್.


ಏಕೆನೆ ಪುನರುದ್ಧರಿಸುವನು ಸಿಯೋನನು I ಪ್ರತ್ಯಕ್ಷಮಾಡುವನಾತ ತನ್ನ ಮಹಿಮೆಯನು II


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು