Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:32 - ಕನ್ನಡ ಸತ್ಯವೇದವು C.L. Bible (BSI)

32 ನಡುಗುತ್ತದೆ ಭೂಮಂಡಲ ಆತನ ಕೃತ್ಯಕೆ I ಹೊಗೆಕಾರುತ್ತದೆ ಪರ್ವತ ಆತನ ಸ್ಪರ್ಶಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆತನು ದೃಷ್ಟಿಸಿದ ಮಾತ್ರದಿಂದಲೇ ಭೂಮಿಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆತನು ದೃಷ್ಟಿಸಿದ ಮಾತ್ರದಿಂದಲೇ ಭೂವಿುಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆತನು ಭೂಮಿಯ ಕಡೆಗೆ ನೋಡಿದರೆ ಸಾಕು, ಭೂಮಿಯು ನಡುಗುವುದು; ಆತನು ಬೆಟ್ಟಗಳನ್ನು ಮುಟ್ಟಿದರೆ ಸಾಕು, ಅವು ಜ್ವಾಲಾಮುಖಿಗಳಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಭೂಮಿಯನ್ನು ದೃಷ್ಟಿಸಲು, ಅದು ನಡುಗುತ್ತದೆ; ಬೆಟ್ಟಗಳನ್ನು ಮುಟ್ಟಲು, ಅವು ಹೊಗೆ ಹಾಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:32
16 ತಿಳಿವುಗಳ ಹೋಲಿಕೆ  

ಆಕಾಶವನು ತಗ್ಗಿಸಿ ಬಾ ಪ್ರಭು ಇಳಿದು I ಬೆಟ್ಟಗಳನು ನೀ ಮುಟ್ಟಲು, ಹೊಗೆ ಹೊರಹೊಮ್ಮುವುದು II


ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.


ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು.


ನಡುಗು ಭೂಲೋಕವೇ, ಪ್ರಭುವಿನ ಮುಂದೆ I ನಡುನಡುಗು ಯಕೋಬ ದೇವರ ಮುಂದೆ II


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಅವರ ದುಷ್ಕೃತ್ಯಗಳ ನಿಮಿತ್ತವೇ ನಾಡು ಕಂಪಿಸುವುದು; ನಿವಾಸಿಗಳೆಲ್ಲರು ದುಃಖಿಸುವರು. ನಾಡೆಲ್ಲವು ನೈಲ್ ನದಿಯಂತೆ ಉಬ್ಬುವುದು. ಅಲ್ಲೋಲಕಲ್ಲೋಲವಾಗಿ ಈಜಿಪ್ಟಿನ ನದಿಯಂತೆ ಕುಗ್ಗಿ ಕರಗಿಹೋಗುವುದು.


ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.


ಜಲರಾಶಿಗಳು ದೇವಾ, ನಿನ್ನ ಕಂಡವು I ಕಾಣುತ್ತಲೇ ನಡುಗಿ ತಳಮಳಗೊಂಡವು I ತಳದವರೆಗೂ ಅಲ್ಲಕಲ್ಲೋಲವಾದವು II


ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ಅವರು ಮತ್ತೊಮ್ಮೆ, “ಅಲ್ಲೆಲೂಯ ! ಅವಳ ದಹನದಿಂದ ಹೊಗೆ ಸತತ ಮೇಲೇರುತಿಹುದು ಒಂದೇಸಮನೆ,” ಎಂದು ಕೂಗಿದರು.


ಸಾಗರವನೆ ನೀ ತುಳಿದು ನಡೆದೆ I ಮಹಾಸಾಗರವನೆ ನೀ ದಾಟಿದೆ I ಹೆಜ್ಜೆಯ ಗುರುತನೂ ಕಾಣಬಿಡದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು