Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:35 - ಕನ್ನಡ ಸತ್ಯವೇದವು C.L. Bible (BSI)

35 ದಹಿಸಿಹೋಗಲಿ ಧರೆಯಿಂದ ದುಷ್ಟರು I ನಿರ್ಮೂಲವಾಗಲಿ ಸಕಲ ದುರುಳರು I ಪ್ರಭುವನು ನನ್ನ ಮನ ಸ್ತುತಿಸಲಿ I ಪ್ರಭುವಿಗೆ ಸ್ತುತಿಸ್ತೋತ್ರವಾಗಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯೆಹೋವನಿಗೆ ಸ್ತೋತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಪಾಪಾತ್ಮರು ಭೂಲೋಕದಲ್ಲಿ ಮುಗಿದು ಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯಾಹುವಿಗೆ ಸ್ತೋತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಪಾಪಾತ್ಮರು ಭೂಮಿಯಿಂದ ಕಾಣದೆಹೋಗಲಿ. ದುಷ್ಟರು ಎಂದೆಂದಿಗೂ ನಿರ್ಮೂಲವಾಗಲಿ. ನನ್ನ ಆತ್ಮವೇ, ಯೆಹೋವನನ್ನು ಸ್ತುತಿಸು! ಯೆಹೋವನನ್ನು ಕೊಂಡಾಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಪಾಪಿಗಳು ಭೂಮಿಯೊಳಗಿಂದ ಮುಗಿದು ಹೋಗಲಿ; ದುಷ್ಟರು ಇಲ್ಲದೆ ಹೋಗಲಿ. ನನ್ನ ಮನವೇ, ಯೆಹೋವ ದೇವರನ್ನು ಸ್ತುತಿಸು. ಯೆಹೋವ ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:35
16 ತಿಳಿವುಗಳ ಹೋಲಿಕೆ  

ಭಜಿಸಿರಿ ಪ್ರಭುವನು ಆತನ ಸೃಷ್ಟಿಗಳೇ I ಆತನ ಅಧಿಕಾರದಲ್ಲಿಹ ಸಕಲ ವಸ್ತುಗಳೇ I ಭಜಿಸು ಪ್ರಭುವನು, ಓ ಎನ್ನಮನವೇ II


ನಾಶವಾಗುವುದು ನಿಜ, ದೋಷಿಗಳ ಮನೆತನ I ನಿರ್ಮೂಲವಾಗುವುದು ದುರುಳರ ಸಂತಾನ II


ದುರುಳರಾದರೋ ನಾಡಿನಿಂದ ಬೇರ್ಪಡುವರು, ದ್ರೋಹಿಗಳು ಅಲ್ಲಿಂದ ಅಳಿದು ನಾಶವಾಗುವರು.


ಇಸ್ರಯೇಲಿನ ದೇವನಾದ ಪ್ರಭುವಿಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್’, ಪ್ರಭುವಿಗೆ ಸ್ತೋತ್ರ II


ತನ್ನ ವಿಧಿಗಳಂತೆ ನಡೆಯಲೆಂದೇ I ತನ್ನ ಶಾಸ್ತ್ರವನು ಅನುಸರಿಸಲೆಂದೇ I ಈ ಪರಿ ಮಾಡಿದಾ ಸ್ವಾಮಿಗೆ ವಂದನೆ II


ಇಲ್ಲಮಾಡುವೆನು ಕೆಡುಕರನು ಪ್ರಭುವಿನಾ ನಗರದೊಳಗೆ I ನಾಶಮಾಡುವೆನು ನಾಡಿನ ದುರುಳರನು ದಿನದಿನಗಳೊಳಗೆ II


ಸುಟ್ಟು ನೀ ಭಸ್ಮಮಾಡು ಕೋಪಾಗ್ನಿಯಿಂದ I ಸ್ಪಷ್ಟವಾಗಲಿ ಇಡೀ ಲೋಕಕ್ಕಿದರಿಂದ I ದೇವನಾಳುತಿಹನೆಂದು ಇಸ್ರಯೇಲಿನಿಂದ II


ದುರುಳರಾದರೊ ತೂರಿ ಹೋಗುವರು I ಬಿರುಗಾಳಿಗೆ ತರಗೆಲೆಯಾಗುವರು II


ವಿನಾಶವಾಗುವರು ನಿನ್ನಿಂದ ದೂರ ಸರಿವವರು I ಧ್ವಂಸವಾಗುವರು ನಿನಗೆ ದ್ರೋಹವೆಸಗಿದವರು II


ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!


ಭಜಿಸು ನನ್ನ ಮನವೇ, ಭಜಿಸು, ಪ್ರಭುವನು I ಪ್ರಭು, ನನ್ನ ದೇವಾ, ನೀ ಸರ್ವೋತ್ತಮನು I ಮಹಿಮೆ ಪ್ರತಾಪಗಳಿಂದ ಭೂಷಿತನು II


ಹೆದರಿ ನಡೆಯುವವರ ಇಷ್ಟವನು ಈಡೇರಿಸುವನು I ಅವರ ಮೊರೆಯನು ಕೇಳಿ ಅವರನು ರಕ್ಷಿಸುವನು II


ಇಗೋ, ಸರ್ವೇಶ್ವರನ ದಿನ ಬರುತ್ತಿದೆ ! ಭೂಮಿಯನ್ನು ಹಾಳುಮಾಡಲು, ಪಾಪಿಗಳನ್ನು ನಿರ್ಮೂಲಮಾಡಲು; ಕೋಪೋದ್ರೇಕದಿಂದ, ರೋಷಾವೇಶದಿಂದ, ಕ್ರೂರವಾಗಿ ಬರುತ್ತಿದೆ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು