Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:5 - ಕನ್ನಡ ಸತ್ಯವೇದವು C.L. Bible (BSI)

5 ಬುವಿಯನು ತಳಹದಿಯ ಮೇಲೆ ಸ್ಥಾಪಿಸಿರುವೆ I ಅದೆಂದಿಗೂ ಕದಲದಂತೆ ಮಾಡಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಭೂಮಿಯು ಯುಗಯುಗಾಂತರಕ್ಕೂ ಕದಲದ ಹಾಗೆ ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಭೂವಿುಯು ಯುಗಯುಗಾಂತರಕ್ಕೂ ಕದಲದ ಹಾಗೆ ಅದನ್ನು ದೃಢವಾದ ಅಸ್ತಿವಾರದ ಮೇಲೆ ಸ್ಥಾಪಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಭೂಮಿಯನ್ನು ನೀನು ಅಸ್ತಿವಾರದ ಮೇಲೆ ಕಟ್ಟಿರುವುದರಿಂದ ಅದೆಂದಿಗೂ ನಾಶವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯುಗಯುಗಾಂತರಗಳಿಗೂ ಅದು ಕದಲದ ಹಾಗೆ, ದೇವರು ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಸ್ಥಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:5
14 ತಿಳಿವುಗಳ ಹೋಲಿಕೆ  

ಉತ್ತರ ದಿಕ್ಕನ್ನು ವಿಸ್ತರಿಸಿಹನು ಶೂನ್ಯದ ಮೇಲೆ ಭೂಮಂಡಲವನ್ನು ತೂಗುಹಾಕಿಹನು ಏನೂ ಇಲ್ಲದರ ಮೇಲೆ.


ಕಡಲನು ತಳಪಾಯವನಾಗಿಸಿದವನು ಆತನೆ I ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೆ II


ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ I ಕದಲದ ಸ್ಥಿರತೆಯನು ಇತ್ತಿಹನು ಧರೆಗೆ I ನ್ಯಾಯವಾದ ತೀರ್ಪು ಕೊಡುವನು ಜನಾಂಗಕೆ II


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.


ಜಲರಾಶಿಯ ಮೇಲೆ ಭೂಮಿಯನು ಹಾಸಿದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II


ಆಕಾಶವು ಸುರುಳಿಯಂತೆ ಸುತ್ತಿಕೊಂಡು ಕಣ್ಮರೆಯಾಯಿತು. ಎಲ್ಲಾ ಪರ್ವತಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚಲಿಸಿದವು.


ಒಂದು ಸಂತತಿ ಗತಿಸುತ್ತದೆ, ಮತ್ತೊಂದು ಸಂತತಿ ಬರುತ್ತದೆ, ಭೂಮಿಯಾದರೋ ಶಾಶ್ವತವಾಗಿ ನಿಲ್ಲುತ್ತದೆ.


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ಇರುವುದು ತಲತಲಾಂತರಕು ನಿನ್ನ ಸತ್ಯತೆ I ನೀ ಸ್ಥಾಪಿಸಿದ ಭೂಮಂಡಲಕ್ಕಿದೆ ಸ್ಥಿರತೆ II


ಜಲಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಸಮುದ್ರಕ್ಕೆ ಎಲ್ಲೆಕಟ್ಟನ್ನು ನೇಮಿಸುವಾಗ ಭೂಮಿಯ ಅಸ್ತಿಭಾರವನ್ನು ಗೊತ್ತುಮಾಡುವಾಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು