Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:9 - ಕನ್ನಡ ಸತ್ಯವೇದವು C.L. Bible (BSI)

9 ಗೊತ್ತುಮಾಡಿರುವೆ ಆ ಜಲರಾಶಿಗೆ ಮೇರೆಯನು I ಅವು ಮತ್ತೆ ಮುಚ್ಚದಂತೆ ಮಾಡಿರುವೆ ಭೂಮಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜಲರಾಶಿಗಳು ಬಂದು ಪುನಃ ಭೂಮಿಯನ್ನು ಮುಚ್ಚಿಕೊಳ್ಳದ ಹಾಗೆ, ನೀನು ಮೇರೆಗಳನ್ನು ಗೊತ್ತುಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜಲರಾಶಿಗಳು ಬಂದು ಪುನಃ ಭೂವಿುಯನ್ನು ಮುಚ್ಚಿಕೊಳ್ಳದ ಹಾಗೆ ನೀನು ಮೇರೆಯನ್ನು ಗೊತ್ತುಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಸಮುದ್ರಗಳಿಗೆ ಮೇರೆಗಳನ್ನು ಗೊತ್ತುಪಡಿಸಿರುವುದರಿಂದ ನೀರಿನಿಂದ ಭೂಮಿಯು ಮತ್ತೆಂದಿಗೂ ಆವೃತವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವು ದಾಟದ ಹಾಗೆಯೂ, ಭೂಮಿಯನ್ನು ಮುಚ್ಚುವುದಕ್ಕೆ ತಿರುಗಿ ಬಾರದ ಹಾಗೆಯೂ ನೀವು ಮೇರೆಯನ್ನು ಇಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:9
6 ತಿಳಿವುಗಳ ಹೋಲಿಕೆ  

ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.


“ಶಪಥಮಾಡಿದೆ ನಾನು ನೋಹನ ದಿನದಂದು: ಜಲಪ್ರಳಯವು ಭೂಮಿಯನು ಇ‍ನ್ನು ಮುಳುಗಿಸದೆಂದು. ಶಪಥಮಾಡುವೆ ಈಗ ‘ಕೋಪಮಾಡೆನು’ ಎಂದು ‘ಇನ್ನು ನಿನ್ನನು ಗದರಿಸೆನು’ ಎಂದು.


ಬೆಳಕು-ಕತ್ತಲು ಸಂಧಿಸುವ ಸ್ಥಾನದಲಿ ಮೇರೆಹಾಕಿದ್ದಾನೆ ಸಮುದ್ರದ ಸುತ್ತಲಲಿ.


ತುಂಬಿಟ್ಟಿಹನು ಜಲರಾಶಿಗಳನು ಕಡಲೆಂಬ ಕುಡಿಕೆಯಲಿ I ಕೂಡಿಟ್ಟಿಹನು ಜಲಾಶಯಗಳನು ಬುವಿಯುಗ್ರಾಣದಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು