Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:1 - ಕನ್ನಡ ಸತ್ಯವೇದವು C.L. Bible (BSI)

1 ಸಲ್ಲಿಸಿ ಪ್ರಭುವಿಗೆ ಕೃತಜ್ಞತಾಸ್ತೋತ್ರವನು I ಮಾಡಿರಿ ಆತನ ನಾಮಸ್ಮರಣೆಯನು I ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಹೆಸರನ್ನು ಆರಾಧಿಸಿರಿ. ಆತನ ಅದ್ಭುತಕಾರ್ಯಗಳ ಕುರಿತು ಜನಾಂಗಗಳಿಗೆ ಸಾರಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ; ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:1
22 ತಿಳಿವುಗಳ ಹೋಲಿಕೆ  

ಹೇಳುವಿರಿ ನೀವು ಆ ದಿನದಂದು ಈ ಪರಿ - “ಸಲ್ಲಿಸಿರಿ ಸರ್ವೇಶ್ವರನಿಗೆ ಕೃತಜ್ಞತೆಯನು ಸ್ಮರಿಸಿರಿ ಆತನ ಶ್ರೀನಾಮವನು ಸಾರಿರಿ ಜನತೆಗೆ ಆತನ ಕಾರ್ಯಗಳನು ಘೋಷಿಸಿರಿ ಆತನ ನಾಮಘನತೆಯನು.


“ಪ್ರಭುವಿನ ನಾಮಸ್ಮರಣೆಮಾಡುವ ಪ್ರತಿಯೊಬ್ಬನೂ ಜೀವೋದ್ಧಾರವನ್ನು ಹೊಂದುತ್ತಾನೆ,” ಎಂದು ಲಿಖಿತವಾಗಿದೆ.


ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II


ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II


ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II


ಅಷ್ಟುಮಾತ್ರವಲ್ಲ, ತಮ್ಮ ನಾಮಸ್ಮರಣೆ ಮಾಡುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕರಿಂದ ಅಧಿಕಾರವನ್ನು ಪಡೆದು ಇಲ್ಲಿಗೆ ಬಂದಿದ್ದಾನೆ,” ಎಂದನು.


ಸಕಲ ದೇಶ-ಕುಲ-ಭಾಷೆಗಳವರಲ್ಲಿ ಯಾರಾದರು ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರ ವಿಷಯದಲ್ಲಿ ಅಲ್ಲಸಲ್ಲದ ಮಾತನಾಡಿದರೆ ಅಂಥವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸಬೇಕೆಂದು ಆಜ್ಞೆ ವಿಧಿಸುತ್ತೇನೆ. ಹೀಗೆ ರಕ್ಷಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವೇ ಇಲ್ಲ,” ಎಂದು ಹೇಳಿದನು.


ಸಮುದ್ರ ಜನರಾಶಿಗಳನು ಬತ್ತಿಸಿದ ಬಾಹು ನೀನು ವಿಮುಕ್ತ ಜನ ಹಾಯುವಂತೆ ಸಮುದ್ರದಲಿ ದಾರಿಮಾಡಿದೆ ನೀನು.


ಹೇ, ದೇವಾ, ಸಲ್ಲಿಸುವೆವು ಕೃತಜ್ಞತೆ ನಿಮಗೆ ಹಾಡುವೆವು ಕೀರ್ತನೆ ನಿಮ್ಮ ನಾಮ ಪ್ರತಿಭೆಗೆ!


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”


ಪ್ರಭುವಿನ ಯಾಜಕರು, ಮೋಶೆ ಮತ್ತು ಆರೋನನು I ಸಮುವೇಲನು ಸಹ ಆತನ ಶರಣರಲಿ ಒಬ್ಬನು I ಪ್ರಾರ್ಥಿಸಲು ಇವರು, ಪ್ರಭುವು ಸದುತ್ತರಿಸಿದನು II


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು I ಸಾರುವೆನು ತಲತಲಾಂತರಕು ನಿನ್ನ ಸತ್ಯತೆಯನು II


ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಇವರು ಕಿನ್ನರಿಯನ್ನು ಬಾರಿಸುತ್ತಾ ಪರವಶರಾಗಿ, ಸರ್ವೇಶ್ವರನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನನಿಗೆ ಈ ಆರು ಮಂದಿ ಸಹಾಯಕರು.


ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು