Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:16 - ಕನ್ನಡ ಸತ್ಯವೇದವು C.L. Bible (BSI)

16 ತದನಂತರ ಬರಮಾಡಿದನಾ ನಾಡಿನಲಿ ಕ್ಷಾಮವನು I ಮುರಿದುಬಿಟ್ಟನು ಆಹಾರವೆಂಬಾ ಊರುಗೋಲನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅನಂತರ ಆತನು ದೇಶದಲ್ಲಿ ಕ್ಷಾಮವನ್ನು ಬರಮಾಡಿ ಆಹಾರವೆಂಬ ಊರುಗೋಲನ್ನು ಮುರಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರು ಆ ದೇಶಕ್ಕೆ ಬರಗಾಲವನ್ನು ಬರಮಾಡಿದನು. ಜನರಿಗೆ ತಿನ್ನುವುದಕ್ಕೂ ಸಾಕಷ್ಟು ಆಹಾರವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು. ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:16
17 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ಜೆರುಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕಮಾಡಿ ಅಂಜಿಕೆಯಿಂದ ತಿನ್ನುವರು, ನೀರನ್ನು ಅಳತೆಮಾಡಿ ಕಳವಳದಿಂದ ಕುಡಿಯುವರು;


ಇಗೋ, ಪ್ರಭುವೂ ಸೇನಾಧೀಶ್ವರ ಆದ ಸರ್ವೇಶ್ವರಸ್ವಾಮಿ ಜೆರುಸಲೇಮ್ ಮತ್ತು ಜುದೇಯದ ಜನರ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲ ತೆಗೆದುಬಿಡುವರು.


ಜೋಸೆಫನು ಹೇಳಿದ್ದ ಪ್ರಕಾರವೇ ಕ್ಷಾಮದ ಏಳು ವರ್ಷಗಳು ಪ್ರಾರಂಭವಾದವು. ಬರವು ಸುತ್ತಮುತ್ತಲಿನ ಎಲ್ಲ ದೇಶಗಳಿಗೂ ಹಬ್ಬಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.


ನಿಮ್ಮ ನಿಮ್ಮ ಜೀವನಾಧಾರವನ್ನು ನಾನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು, ಅದನ್ನು ಪಡಿ ಪ್ರಕಾರ ಹಂಚಿಕೊಡುವರು. ನೀವು ಅದನ್ನು ತಿಂದರೂ ತೃಪ್ತಿಯಾಗದು.


ಈಜಿಪ್ಟ್ ಹಾಗೂ ಕಾನಾನ್ ದೇಶಗಳಲ್ಲಿ ಕ್ಷಾಮ ತಲೆದೋರಿದಾಗ ಜನರು ಕಷ್ಟಸಂಕಟಗಳಿಗೆ ಒಳಗಾದರು. ನಮ್ಮ ಪೂರ್ವಜರು ಆಹಾರವಿಲ್ಲದೆ ಅವಸ್ಥೆಪಟ್ಟರು.


ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಸರ್ವೇಶ್ವರಸ್ವಾಮಿ ಈ ನಾಡಿಗೆ ಏಳು ವರ್ಷಗಳ ಬರಗಾಲವನ್ನು ಕಳುಹಿಸಲಿದ್ದಾರೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು,” ಎಂದು ಭವಿಷ್ಯ ಹೇಳಿದನು.


ಬರವು ಬಹು ಘೋರವಾಗಿತ್ತು. ದೇಶದ ಯಾವ ಭಾಗದಲ್ಲೂ ಆಹಾರ ಸಿಕ್ಕುತ್ತಿರಲಿಲ್ಲ. ಈ ನಿಮಿತ್ತ ಈಜಿಪ್ಟ್ ದೇಶವೂ ಕಾನಾನ್ ನಾಡೂ ಹಾಗೆ ಸೊರಗಿಹೋಗುತ್ತಿದ್ದುವು.


ಆಗ ಬೂದು ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು, ‘ಮೃತ್ಯು’ ಎಂದು. ಅವನನ್ನು ‘ಮೃತ್ಯುಲೋಕ’ ಎಂಬಾತನು ಹಿಂಬಾಲಿಸಿದನು. ಇವರಿಗೆ ಖಡ್ಗ, ಕ್ಷಾಮ, ಅಂಟುಜಾಡ್ಯ, ಕಾಡುಮೃಗ ಇವುಗಳಿಂದ ಭೂಲೋಕದ ಕಾಲುಭಾಗದ ಜನತೆಯನ್ನು ಕೊಂದುಹಾಕುವುದಕ್ಕೆ ಅಧಿಕಾರವನ್ನು ಕೊಡಲಾಗಿತ್ತು.


ನಾನು ನಿಮ್ಮ ದುಡಿಮೆಯ ಫಲವನ್ನು ಆನೆಕಲ್ಲು, ಬೂಷ್ಟು, ಬಿಸಿಗಾಳಿ - ಇವುಗಳಿಂದ ಹಾಳುಮಾಡಿ ನಿಮ್ಮನ್ನು ಬಾಧಿಸಿದೆನು. ಆದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ, ಇದನ್ನು ನೆನಪಿನಲ್ಲಿಡಿ. ಇದು ಸರ್ವೇಶ್ವರನ ನುಡಿ.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ನಾವೇಕೆ ನಿಮ್ಮ ಕಣ್ಣೆದುರಿಗೆ ಸಾಯಬೇಕು? ನಮ್ಮ ಭೂಮಿಯೇಕೆ ಹಾಳಾಗಬೇಕು? ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯ ಕೊಡಿ, ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವರಿಗೆ ಗುಲಾಮರಾಗುತ್ತೇವೆ. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿ ಪಾಳುಬೀಳಬಾರದಿದ್ದರೆ ಧಾನ್ಯಕೊಡಿ,” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು