Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:26 - ಕನ್ನಡ ಸತ್ಯವೇದವು C.L. Bible (BSI)

26 ಕಳಿಸಿದ ತನ್ನ ದಾಸ ಮೋಶೆಯನು I ತಾನು ಆರಿಸಿಕೊಂಡ ಆರೋನನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ, ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ದೇವರು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಯಾಜಕನಾದ ಆರೋನನನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ದೇವರು ತಮ್ಮ ಸೇವಕ ಮೋಶೆಯನ್ನೂ, ಆಯ್ದುಕೊಂಡ ಆರೋನನನ್ನೂ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:26
22 ತಿಳಿವುಗಳ ಹೋಲಿಕೆ  

ಆದ್ದರಿಂದ ಹೋಗು; ನನ್ನ ಜನರಾಗಿರುವ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರತರುವುದಕ್ಕಾಗಿ ನಿನ್ನನ್ನು ಫರೋಹನ ಬಳಿಗೆ ಕಳಿಸುತ್ತಿದ್ದೇನೆ,” ಎಂದರು.


ಆರೋನನ ಸಂತತಿಯವರಲ್ಲದೆ ಇತರರು ಸರ್ವೇಶ್ವರನ ಸನ್ನಿಧಿಗೆ ಬಂದು ಧೂಪವನ್ನು ಅರ್ಪಿಸಬಾರದು; ಅರ್ಪಿಸಿದರೆ ಕೋರಹನಿಗೂ ಅವನ ಪಂಗಡದವರಿಗೂ ಆದ ಗತಿಗೆ ಗುರಿಯಾಗುವರು ಎಂದು ಇಸ್ರಯೇಲರಿಗೆ ಎಚ್ಚರಿಕೆ ನೀಡುವ ಚಿನ್ಹೆಯಾಯಿತು.


ಇಸ್ರಯೇಲರ ಜ್ಞಾಪಕಾರ್ಥವಾಗಿ ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಕವಚದ ಪಟ್ಟಿಗಳಲ್ಲಿ ಬಿಗಿಸಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಬರುವನು.


ಆಗ ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು. “ನೋಡು, ನಾನು ನಿನ್ನನ್ನು ಫರೋಹನ ಮುಂದೆ ದೇವರ ಪ್ರತಿನಿಧಿಯನ್ನಾಗಿ ನೇಮಿಸಿದ್ದೇನೆ. ನಿನ್ನ ಅಣ್ಣ ಆರೋನನು ನಿನ್ನ ಪರವಾಗಿ ವಾದಿಸುವನು.


ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.


ಕುರುಬನು ತನ್ನ ಕುರಿಮಂದೆಯನು ಕರೆದೊಯ್ಯುವಂತೆ I ಮೋಶೆ, ಆರೋನರಿಂದ ನಿನ್ನ ಪ್ರಜೆಗಳನು ನಡೆಸಿದೆ II


ಆಗ ಸಮುವೇಲನು, “ನಿಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಕರೆದುತರುವುದಕ್ಕಾಗಿ ಮೋಶೆ ಹಾಗು ಆರೋನರನ್ನು ನೇಮಿಸಿದ ಸರ್ವೇಶ್ವರಸ್ವಾಮಿಯೇ ಇದಕ್ಕೆ ಸಾಕ್ಷಿ: ಇಲ್ಲಿ ನಿಂತುಕೊಳ್ಳಿರಿ:


ಬಳಿಕ ನಾನು ಮೋಶೆ ಹಾಗೂ ಆರೋನರನ್ನು ಕಳಿಸಿ, ಆ ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿ, ಆ ಜನರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆ.


ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಬಿಸಾಡಿದರು. ಅವೂ ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.


“ನೀನು ಈಜಿಪ್ಟಿನವರ ಅರಸ ಫರೋಹನ ಬಳಿಗೆ ಹೋಗು. ಅವನಿಗೆ, ‘ಇಸ್ರಯೇಲರು ನಿನ್ನ ದೇಶದಿಂದ ಹೊರಟು ಹೋಗುವುದಕ್ಕೆ ಅಪ್ಪಣೆಕೊಡಬೇಕು’ ಎಂದು ಹೇಳು,” ಎಂದರು.


ಇದಲ್ಲದೆ ಸರ್ವೇಶ್ವರ ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳಲು ಮರುಭೂಮಿಗೆ ತೆರಳು,” ಎಂದರು. ಅಂತೆಯೇ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.


ತರುವಾಯ ಅವರಿಬ್ಬರು ಹೋಗಿ ಇಸ್ರಯೇಲರ ಹಿರಿಯರನ್ನೆಲ್ಲ ಕೂಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು