Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:28 - ಕನ್ನಡ ಸತ್ಯವೇದವು C.L. Bible (BSI)

28 ಕಾಳ ರಾತ್ರಿಯಾಯಿತು ಪ್ರಭು ಕಳಿಸಲು ಕತ್ತಲನು I ಈಜಿಪ್ಟರಾದರೊ ಇದಿರಿಸಿದರು ಆತನ ಮಾತನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು. ಐಗುಪ್ತ್ಯರು ಆತನ ಆಜ್ಞೆಗಳನ್ನು ಅನುಸರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು. ಅವರು ಆತನ ಆಜ್ಞೆಗಳನ್ನು ತಿರಸ್ಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದೇವರು ಕಾರ್ಗತ್ತಲೆಯನ್ನು ಕಳುಹಿಸಿದನು; ಆದರೂ ಈಜಿಪ್ಟಿನವರು ಆತನಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇವರು ಕತ್ತಲೆಯನ್ನು ಕಳುಹಿಸಿ, ದೇಶವನ್ನೆಲ್ಲಾ ಕತ್ತಲು ಮಾಡಿದರು. ದೇವರ ಮಾತಿಗೆ ಈಜಿಪ್ಟನವರು ವಿರೋಧವಾಗಿ ತಿರುಗಿ ಬಿದ್ದರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:28
9 ತಿಳಿವುಗಳ ಹೋಲಿಕೆ  

ಮೇಘಸ್ತಂಭದಲಿದ್ದು ಅವರೊಡನೆ ಮಾತಾಡಿದನು I ಕೈಗೊಂಡರು ಅವರು ಆತನಿತ್ತ ವಿಧಿನಿಯಮಗಳನು II


ಈ ಕಳ್ಳಬೋಧಕರು ನೀರಿಲ್ಲದ ಬಾವಿಗಳು, ಬಿರುಗಾಳಿಯಿಂದ ಚದರಿಹೊಗುವ ಮಂಜುಮೋಡಗಳು, ಕಾರ್ಗತ್ತಲಿನ ಕಂದಕವೇ ಅವರ ಪಾಲಿಗೆ ಕಟ್ಟಿಟ್ಟ ಬುತ್ತಿ.


ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು.


ಸರ್ವೇಶ್ವರಸ್ವಾಮಿಯ ಭಯಂಕರ ಮಹಾದಿನದ ಮುಂಚೆ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ರಕ್ತಗೆಂಪಾಗುವನು.


ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.


ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೆ ವಿಧೇಯರಾಗಿ ಅವರನ್ನೇ ಪೂಜಿಸಿರಿ; ಅವರ ಮಾತನ್ನು ತಪ್ಪದೆ ಪಾಲಿಸುತ್ತಾ ಅವರನ್ನೇ ಹೊಂದಿಕೊಂಡಿರಿ. ಹೀಗೆ ಮಾಡಿದರೆ ಎಷ್ಟೋ ಒಳ್ಳೆಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು