Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:38 - ಕನ್ನಡ ಸತ್ಯವೇದವು C.L. Bible (BSI)

38 ಭೀತಿಯಿತ್ತಾ ಈಜಿಪ್ಟರಿಗೆ ಇಸ್ರಯೇಲರ ಬಗ್ಗೆ I ಈ ಕಾರಣ ಆನಂದಿಸಿದರು ಅವರು ಹೋದುದಕ್ಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ, ಅವರು ಹೊರಟು ಹೋದದ್ದಕ್ಕೆ ಸಂತೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ದೇವಜನರು ಈಜಿಪ್ಟಿನಿಂದ ಹೊರಟಾಗ ಸಂತೋಷಪಟ್ಟರು; ಯಾಕೆಂದರೆ ಅವರು ದೇವಜನರಿಗೆ ಹೆದರಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಅವರೆಲ್ಲರೂ ಹೊರಗೆ ಹೋಗುವಾಗ ಈಜಿಪ್ಟ್ ದೇಶವು ಸಂತೋಷಿಸಿತು; ಏಕೆಂದರೆ ಈಜಿಪ್ಟಿನವರಿಗೆ ಅವರನ್ನು ಕುರಿತು ಹೆದರಿಕೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:38
6 ತಿಳಿವುಗಳ ಹೋಲಿಕೆ  

ಈಜಿಪ್ಟಿನವರು, “ನಾವೆಲ್ಲರು ಸಾಯುತ್ತೇವೆ,” ಎಂದುಕೊಂಡು ತಮ್ಮ ದೇಶವನ್ನು ಬಿಟ್ಟು ಬೇಗನೆ ಹೋಗಬೇಕೆಂದು ಇಸ್ರಯೇಲರನ್ನು ಒತ್ತಾಯಪಡಿಸಿದರು.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


“ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟಿದ್ದಾರೆಂದು ನಾನು ಬಲ್ಲೆ; ನಿಮ್ಮ ವಿಷಯದಲ್ಲಿ ನಮಗೆ ಮಹಾಭೀತಿ ಉಂಟಾಗಿದೆ. ನಾಡಿನ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆ.


ಅವರು ಪ್ರಯಾಣಮಾಡುತ್ತಿದ್ದಾಗ ದೇವರು ಸುತ್ತಮುತ್ತಣದ ಊರಿನವರಲ್ಲಿ ಭಯ ಹುಟ್ಟಿಸಿದರು. ಇದರಿಂದಾಗಿ ಆ ಊರಿವನರಾರೂ ಯಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.


ಆಗ ಪರಿವಾರದವರು ಫರೋಹನಿಗೆ, “ಈ ಮನುಷ್ಯ ಇನ್ನೆಷ್ಟುಕಾಲ ನಮಗೆ ಉರುಳಾಗಿರುವನೋ! ಆ ಜನರು ಹೋಗಿ ತಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಲು ಅಪ್ಪಣೆಕೊಟ್ಟುಬಿಡಿ. ಈಜಿಪ್ಟ್ ದೇಶವೇ ಹಾಳಾಗುತ್ತಿದೆಯೆಂದು ತಮ್ಮ ಮನಸ್ಸಿಗೆ ತೋಚಿರಬೇಕಲ್ಲವೆ?” ಎಂದು ಹೇಳಿದರು.


ರಾಜನಿರ್ಣಯ ಶಾಸನಗಳು ಪ್ರಕಟವಾದ ಸಂಸ್ಥಾನಗಳಲ್ಲೂ ನಗರಗಳಲ್ಲೂ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೆ ಶುಭದಿನ ಉದಯವಾಯಿತು. ಅವರು ಅದನ್ನು ಸಂತೋಷದ ಹಾಗೂ ಸಂಭ್ರಮದ ದಿನವನ್ನಾಗಿ ಆಚರಿಸಿದರು. ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು