Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:43 - ಕನ್ನಡ ಸತ್ಯವೇದವು C.L. Bible (BSI)

43 ಹೊರತಂದನು ತನ್ನ ಪ್ರಜೆಯನು ಉಲ್ಲಾಸದಿಂದ I ತಾನಾರಿಸಿಕೊಂಡವರನು ಹರ್ಷೋದ್ಗಾರದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ತನ್ನ ಪ್ರಜೆಯು ಉಲ್ಲಾಸದಿಂದಲೂ, ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ತನ್ನ ಪ್ರಜೆಯು ಉಲ್ಲಾಸದಿಂದಲೂ ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆತನು ತನ್ನ ಜನರನ್ನು ಈಜಿಪ್ಟಿನಿಂದ ಹೊರತಂದನು. ಜನರು ಉಲ್ಲಾಸಪಡುತ್ತಾ ಹರ್ಷಗೀತೆಗಳನ್ನು ಹಾಡುತ್ತಾ ಹೊರಬಂದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ದೇವರು ತಮ್ಮ ಜನರನ್ನು ಆನಂದದಿಂದಲೂ, ತಾವು ಆಯ್ದುಕೊಂಡವರನ್ನು ಉತ್ಸಾಹದಿಂದಲೂ ಹೊರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:43
17 ತಿಳಿವುಗಳ ಹೋಲಿಕೆ  

ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು. ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು. ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು.


ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ.


ಹೊರಡುವಿರಿ ನೀವು ಆನಂದಭರಿತರಾಗಿ ಬರುವಿರಿ ನೆಮ್ಮದಿಯಿಂದ ಸಾಲಾಗಿ. ನಿಮ್ಮ ಮುಂದೆ ತಟ್ಟಾಡುವುವು ಬೆಟ್ಟಗುಡ್ಡಗಳು ಚಪ್ಪಾಳೆ ಹೊಡೆಯುವುವು ಅಡವಿಯ ಗಿಡಮರಗಳು.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.


ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.


ಬಳಿಕ ನಾನು ಮೋಶೆ ಹಾಗೂ ಆರೋನರನ್ನು ಕಳಿಸಿ, ಆ ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿ, ಆ ಜನರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆ.


ಈಜಿಪ್ಟಿನವರಿಂದ ನಿಮ್ಮನ್ನು ಬಿಡಿಸಿದೆನಲ್ಲದೆ ಬೇರೆ ಎಲ್ಲಾ ಶೋಷಕರಿಂದ ನಿಮ್ಮನ್ನು ಪಾರುಮಾಡಿ, ನಿಮ್ಮ ಕಣ್ಮುಂದೆಯೇ ಅವರನ್ನು ಅಟ್ಟಿಬಿಟ್ಟು, ಅವರ ನಾಡನ್ನು ನಿಮಗೆ ಕೊಟ್ಟೆ.


ನೆನೆಯಿರಿ ಆತನದ್ಭುತಗಳನು, ಮಹತ್ಕಾರ್ಯಗಳನು I ಆತನ ವದನ ವಿಧಿಸಿದಾ ನ್ಯಾಯನಿರ್ಣಯಗಳನು II


ನೀನಾರಿಸಿಕೊಂಡಿರುವ ಪ್ರಗತಿಯನು ನಾ ಕಾಣಮಾಡು I ನಿನ್ನ ಜನಾಂಗದವರ ಸಂತಸವನು ನಾ ಸವಿಯಮಾಡು I ನಿನ್ನ ಸ್ವಕೀಯರ ಮಹಿಮೆಯಲ್ಲೆನಗೆ ಪಾಲನ್ನು ನೀಡು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು