Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:6 - ಕನ್ನಡ ಸತ್ಯವೇದವು C.L. Bible (BSI)

6 ನೆನೆಯಿರಿ ಆತನದ್ಭುತಗಳನು, ಮಹತ್ಕಾರ್ಯಗಳನು I ಆತನ ವದನ ವಿಧಿಸಿದಾ ನ್ಯಾಯನಿರ್ಣಯಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು ನೆನಪುಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಆತನ ಸೇವಕನಾದ ಅಬ್ರಹಾಮನ ಸಂತತಿಯವರಾಗಿದ್ದೀರಿ; ಆತನು ಆರಿಸಿಕೊಂಡ ಯಾಕೋಬನ ಸಂತತಿಯವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರ ಸೇವಕನಾದ ಅಬ್ರಹಾಮನ ಸಂತತಿಯೇ, ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:6
14 ತಿಳಿವುಗಳ ಹೋಲಿಕೆ  

ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಇಂತಿರಲು ನನ್ನ ದಾಸನಾದ ಇಸ್ರಯೇಲೇ, ನಾನು ಆಯ್ದುಕೊಂಡ ಯಕೋಬೇ, ನನ್ನ ಗೆಳೆಯ ಅಬ್ರಹಾಮನ ಸಂತತಿಯೇ,


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಆಯ್ದುಕೊಂಡನಾತ ಯಕೋಬ್ಯ ವಂಶವನು I ಸ್ವಕೀಯ ಜನರನ್ನಾಗಿ ಇಸ್ರಯೇಲರನು II


ನೀನಾರಿಸಿಕೊಂಡಿರುವ ಪ್ರಗತಿಯನು ನಾ ಕಾಣಮಾಡು I ನಿನ್ನ ಜನಾಂಗದವರ ಸಂತಸವನು ನಾ ಸವಿಯಮಾಡು I ನಿನ್ನ ಸ್ವಕೀಯರ ಮಹಿಮೆಯಲ್ಲೆನಗೆ ಪಾಲನ್ನು ನೀಡು II


ಸ್ಮರಿಸಿಕೊಂಡನು ಪ್ರಭು ತನ್ನ ವಾಗ್ದಾನವನು I ತನ್ನ ದಾಸ ಅಬ್ರಹಾಮನಿಗೆ ಕೊಟ್ಟಾ ಮಾತನು II


ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಹೊರತಂದನು ತನ್ನ ಪ್ರಜೆಯನು ಉಲ್ಲಾಸದಿಂದ I ತಾನಾರಿಸಿಕೊಂಡವರನು ಹರ್ಷೋದ್ಗಾರದಿಂದ II


ಅದನ್ನು ದಾಸರಾದ ನಮಗೆ ಸೊತ್ತಾಗಿ ನೀಡಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ನನ್ನ ಸೇವಕನಾದ ಯಕೋಬನ ನಿಮಿತ್ತ ನಾನು ಆರಿಸಿಕೊಂಡ ಇಸ್ರಯೇಲಿನ ನಿಮಿತ್ತ ನನ್ನ ಅರಿವೇ ಇಲ್ಲದ ನಿನ್ನನು ಹೆಸರು ಹಿಡಿದು ಕರೆದಿರುವೆನು, ಬಿರುದಿತ್ತು ಸನ್ಮಾನಿಸಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು