Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:1 - ಕನ್ನಡ ಸತ್ಯವೇದವು C.L. Bible (BSI)

1 ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾಹುವಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು! ಆತನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಪ್ರೀತಿಯು ಶಾಶ್ವತವಾದದ್ದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:1
16 ತಿಳಿವುಗಳ ಹೋಲಿಕೆ  

ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ.


ಸಲ್ಲಿಸಿ ಪ್ರಭುವಿಗೆ ಕೃತಜ್ಞತಾಸ್ತೋತ್ರವನು I ಮಾಡಿರಿ ಆತನ ನಾಮಸ್ಮರಣೆಯನು I ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II


ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II


ಒಳ್ಳೆಯವನಾದ ಪ್ರಭುವಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II


ತನ್ನ ವಿಧಿಗಳಂತೆ ನಡೆಯಲೆಂದೇ I ತನ್ನ ಶಾಸ್ತ್ರವನು ಅನುಸರಿಸಲೆಂದೇ I ಈ ಪರಿ ಮಾಡಿದಾ ಸ್ವಾಮಿಗೆ ವಂದನೆ II


ಕೃತಜ್ಞತೆಯಿಂದ ಸಲ್ಲಿಸಿರಿ ಪ್ರಭುವಿಗೆ ಸ್ತುತಿಯನು I ಆತನ ಪ್ರೀತಿ ಶಾಶ್ವತ, ಆತನು ಒಳ್ಳೆಯವನು II


ಪರಸ್ಪರವಾಗಿ ಹಾಡುತ್ತಾ ಸರ್ವೇಶ್ವರನನ್ನು ಕೀರ್ತಿಸಿದರು. “ಸರ್ವೇಶ್ವರ ಒಳ್ಳೆಯವರು! ಅವರ ಅಚಲಪ್ರೀತಿ ಇಸ್ರಯೇಲರ ಮೇಲೆ ಶಾಶ್ವತ!” ಎಂದು ಕೃತಜ್ಞತಾಸ್ತುತಿ ಮಾಡಿದರು. ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.


ಅದಕ್ಕೆ ಅವರು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ವಿಚಾರಿಸುವುದು ಏಕೆ? ಒಳ್ಳೆಯವರು ಒಬ್ಚರೇ. ನೀನು ಆ ಜೀವಕ್ಕೆ ಪ್ರವೇಶಿಸಬೇಕಾದರೆ ದೈವಾಜ್ಞೆಗಳನ್ನು ಅನುಸರಿಸು,” ಎಂದರು.


ಒಳ್ಳೆಯವ, ಒಳ್ಳೆಯದ ಗೈಕೊಳ್ಳುವ ನೀನು I ಬೋಧಿಸೆನಗೆ ನಿನ್ನಾ ನಿಬಂಧನೆಗಳನು II


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ಅಲ್ಲಿ ಅವರೊಂದಿಗೆ ಸರ್ವೇಶ್ವರನ ನಿತ್ಯಪ್ರೀತಿಗಾಗಿ ಅವರನ್ನು ಸ್ತುತಿಸಿ, ಸಂಗೀತ ಹಾಡಲು ಹೇಮಾನ್, ಯೆದುತೂನ ಹಾಗು ಇನ್ನಿತರರು ನಿರ್ದಿಷ್ಟವಾಗಿ ನೇಮಕರಾಗಿದ್ದರು.


ಪ್ರಭು ಒಳ್ಳೆಯವನು, ಆತನಿಗೆ ಸ್ತುತಿಸ್ತೋತ್ರ I ಆತನ ನಾಮವನು ಸ್ತುತಿಸಿರಿ, ಅದು ಮನೋಹರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು