Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:24 - ಕನ್ನಡ ಸತ್ಯವೇದವು C.L. Bible (BSI)

24 ಅವರೊ ಬೇಡವೆಂದರು ಆ ಚೆಲುವಿನ ನಾಡನು I ನಂಬದೆ ಹೋದರು ಅವನಿತ್ತಾ ವಾಗ್ದಾನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು, ಆತನ ಮಾತನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮತ್ತು ಅವರು ಆ ರಮಣೀಯದೇಶವನ್ನು ತಿರಸ್ಕರಿಸಿ ಆತನ ಮಾತನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಳಿಕ ಅವರು ರಮಣೀಯವಾದ ಕಾನಾನ್ ದೇಶಕ್ಕೆ ಹೋಗಲು ಒಪ್ಪಲಿಲ್ಲ. ಅಲ್ಲಿಯ ನಿವಾಸಿಗಳನ್ನು ಸೋಲಿಸಲು ಆತನು ತಮಗೆ ಸಹಾಯ ಮಾಡುತ್ತಾನೆಂಬ ನಂಬಿಕೆ ಅವರಲ್ಲಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹೌದು, ಇಸ್ರಾಯೇಲರು ಮನೋಹರವಾದ ದೇಶವನ್ನು ಹೀನೈಸಿ, ದೇವರ ಮಾತನ್ನು ನಂಬದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:24
21 ತಿಳಿವುಗಳ ಹೋಲಿಕೆ  

“ಆದರೂ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ನಂಬಲೇ ಇಲ್ಲ.


ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;


ಆದರೆ ನಿಮ್ಮ ಮಕ್ಕಳನ್ನು, ಪರರ ಪಾಲಾಗುವರು ಎಂದು ಹೇಳಿದ ನಿಮ್ಮ ಚಿಕ್ಕಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದ ನಾಡನ್ನು ಅವರು ಅನುಭವಿಸುವರು.


ಆದುದರಿಂದ, ಈ ವಿಶ್ರಾಂತಿಯ ನೆಲೆಯನ್ನು ಸೇರುವ ಸಾಧ್ಯತೆ ಬೇರೆಯವರಿಗಾದರೂ ಇದೆ ಎಂಬುದು ಸ್ಪಷ್ಟವಾಗುತ್ತದೆ. ದೇವರ ವಾಕ್ಯವನ್ನು ಮೊದಲು ಕೇಳಿದವರಾದರೋ, ತಮ್ಮ ಅವಿಶ್ವಾಸದಿಂದ ಅದನ್ನು ಸೇರದೆಹೋದರು.


ಇದನ್ನೆಲ್ಲಾ ನೀವು ಈಗಾಗಲೇ ಚೆನ್ನಾಗಿ ಅರಿತವರಾಗಿದ್ದೀರಿ. ಆದರೂ ಕೆಲವು ವಿಷಯಗಳನ್ನು ನಿಮ್ಮ ನೆನಪಿಗೆ ತರಲು ಬಯಸುತ್ತೇನೆ: ದೇವರು ತಮ್ಮ ಪ್ರಜೆಗಳನ್ನು ಈಜಿಪ್ಟ್ ದೇಶದಿಂದ ಬಿಡುಗಡೆಮಾಡಿದರು; ವಿಶ್ವಾಸವಿಡದವರನ್ನು ಅನಂತರ ಅವರೇ ನಾಶಮಾಡಿದರು.


ನಿಮ್ಮಲ್ಲಿ ಯಾರೂ ಕಾಮುಕರಾಗಬಾರದು. ಏಸಾವನಂತೆ ಅಧರ್ಮಿಗಳು ಆಗಬಾರದು. ಆತನು, ಒಪ್ಪೊತ್ತಿನ ಊಟಕ್ಕಾಗಿ ತನ್ನ ಜನ್ಮಸಿದ್ಧವಾದ ಹಕ್ಕನ್ನೇ ಮಾರಿಕೊಂಡನು.


ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲ ಪಡೆಯದೆ ಹೋದರು.


ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.


ಆದರೂ ಆಹ್ವಾನಿತರು ಅಲಕ್ಷ್ಯಮಾಡಿದರು. ಒಬ್ಬ ತೋಟಕ್ಕೆ ಹೊರಟುಬಿಟ್ಟ, ಇನ್ನೊಬ್ಬ ವ್ಯಾಪಾರಕ್ಕೆ ಹೊರಟುಹೋದ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.


ಅದೂ ಅಲ್ಲದೆ, ಕಾದೇಶ್ ಬರ್ನೇಯದಲ್ಲಿ ಸರ್ವೇಶ್ವರ ನಿಮಗೆ, ‘ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ನಾಡನ್ನು ಸ್ವಾಧೀನಮಾಡಿಕೊಳ್ಳಿ,’ ಎಂದು ಅಪ್ಪಣೆ ಕೊಟ್ಟಾಗಲೂ ನೀವು ನಿಮ್ಮ ದೇವರಾದ ಸರ್ವೇಶ್ವರನ ಆ ಆಜ್ಞೆಯನ್ನು ಧಿಕ್ಕರಿಸಿ ಅವರನ್ನು ನಂಬದೆ ಅವರ ಮಾತನ್ನು ಅಲಕ್ಷ್ಯಮಾಡಿದಿರಿ.


ಮೋಶೆಗೆ ಸರ್ವೇಶ್ವರ, “ಇನ್ನೆಷ್ಟುಕಾಲ ಈ ಜನರು ನನ್ನನ್ನು ಅಲಕ್ಷ್ಯ ಮಾಡುವರು? ನಾನು ಮಾಡಿದ ಮಹತ್ಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಇನ್ನೆಷ್ಟು ಕಾಲ ನಂಬದೆ ಇರುವರು?


ಆಗ ಯಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯನ್ನೂ ಕೊಟ್ಟ. ಏಸಾವನು ತಿಂದು, ಕುಡಿದು, ಎದ್ದು ಹೋದ. ಜ್ಯೇಷ್ಠತನದ ಹಕ್ಕುಬಾಧ್ಯತೆಗೆ ಏಸಾವನು ಕೊಟ್ಟ ಮರ್ಯಾದೆ ಇಷ್ಟೇ!


ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.


ಅದಲ್ಲದೆ ತಾವು ಸಂಚರಿಸಿ ನೋಡಿ ಬಂದ ನಾಡಿನ ವಿಷಯವಾಗಿ ಇಸ್ರಯೇಲರಿಗೆ ಅಶುಭ ಸಮಾಚಾರವನ್ನೇ ಹೇಳುವವರಾದರು. “ನಾವು ಸಂಚಾರಮಾಡಿ ನೋಡಿ ಬಂದ ನಾಡು ತನ್ನಲ್ಲಿ ವಾಸಿಸುವವರನ್ನೇ ಕಬಳಿಸುವಂತಿದೆ. ನಾವು ಅಲ್ಲಿ ನೋಡಿದ ಜನರೆಲ್ಲರು ಬಹು ಎತ್ತರವಾದ ವ್ಯಕ್ತಿಗಳು.


ಇಸ್ರಯೇಲರೆಲ್ಲರು ಮೋಶೆ ಮತ್ತು ಆರೋನರ ವಿರುದ್ಧ ಗುಣಗುಟ್ಟಿದರು. “ಈಜಿಪ್ಟಿನಲ್ಲೇ ನಾವು ಸತ್ತಿದ್ದರೆ ಚೆನ್ನಾಗಿತ್ತು.


ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”


ಆದರೂ ನೀವು ಅಲ್ಲಿಗೆ ಹತ್ತಿಹೋಗದೆ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸಿದಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು