Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:3 - ಕನ್ನಡ ಸತ್ಯವೇದವು C.L. Bible (BSI)

3 ನ್ಯಾಯದಂತೆ ನಡೆಯುವವರು ಧನ್ಯರು I ಅವಿರತವಾಗಿ ನೀತಿವಂತರು ಧನ್ಯರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾವಾಗಲೂ ನ್ಯಾಯವನ್ನು ಕಾಪಾಡುವವರೂ, ನೀತಿಯನ್ನು ಪಾಲಿಸುವವರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾವಾಗಲೂ ನ್ಯಾಯವನ್ನು ಕಾಪಾಡುವವರೂ ನೀತಿಯನ್ನು ಪಾಲಿಸುವವರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರ ಆಜ್ಞೆಗಳಿಗೆ ವಿಧೇಯರಾಗಿರುವವರು ಭಾಗ್ಯವಂತರೇ ಸರಿ! ಅವರು ಸತ್ಕಾರ್ಯಗಳನ್ನು ಯಾವಾಗಲೂ ಮಾಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನ್ಯಾಯವನ್ನು ಕಾಪಾಡಿಕೊಂಡು ಯಾವಾಗಲೂ ಸರಿಯಾದವುಗಳನ್ನು ಪಾಲಿಸುವವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:3
29 ತಿಳಿವುಗಳ ಹೋಲಿಕೆ  

ಅಂಥವನಿರಬೇಕು ನಿರ್ದೋಷಿ, ಸನ್ಮಾರ್ಗಿ I ಸತ್ಯವ ನುಡಿಯಬೇಕು ಹೃತ್ಪೂರ್ವಕವಾಗಿ II


ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!


ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು !


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ದೈವೇಚ್ಛೆಯನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ, ತಾಯಿ,” ಎಂದರು.


ಮನಸ್ಸುಮಾಡಿರುವೆ ಸದಾ ಕೈಗೊಂಡು ನಡೆಯಲು I ಜೀವಮಾನವೆಲ್ಲ ನಿನ್ನ ನಿಬಂಧನೆಗಳನು II


ನಡೆದುಕೊಳ್ಳುವೆನು ಶಪಥ ಮಾಡಿರುವಂತೆ I ನಿನ್ನ ನೀತಿವಿಧಿಗಳನು ಪಾಲಿಪೆನು ಅದರಂತೆ II


ಸತತ ನಿನ್ನ ಧರ್ಮಶಾಸ್ತ್ರವನು ಕೈಗೊಳ್ಳುವೆ I ಯುಗಯುಗಾಂತರಕು ಅದನು ಪರಿಪಾಲಿಸುವೆ II


ನಿನ್ನ ವಿಧಿಗಳನೆ ಹಂಬಲಿಸುತಿರುವೆ ಅನುದಿನ I ಇದು ಕಾರಣ ಕರಗಿಹೋಗುತಿದೆ ಎನ್ನ ಚೇತನ II


“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಪ್ರೀತಿಯಿಟ್ಟು, ಅವರ ನಿಯಮಗಳನ್ನು ಕೈಕೊಂಡು ಅವರ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು.


‘ಇರುವರು ದೇವರ ಸಿಂಹಾಸನದ ಸಮ್ಮುಖದಲ್ಲೇ ಆರಾಧಿಪರಾತನನು ಹಗಲಿರುಳು ದೇವಾಲಯದಲ್ಲೇ ಸಂರಕ್ಷಿಪನಾತನು ಅವರನ್ನು ಗುಡಾರದಂತೆ.


ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ಸದಾಚಾರದಲ್ಲೇ ಸಂತೋಷಪಡುತ್ತಾ, ನಿಮ್ಮ ಮಾರ್ಗದಲ್ಲಿ ನಡೆಯುತ್ತಾ, ನಿಮ್ಮನ್ನು ಸ್ಮರಿಸುತ್ತಾ ಬಂದವರಿಗೆ ಪ್ರತ್ಯಕ್ಷರಾಗುತ್ತೀರಿ. ನಮ್ಮ ಮೇಲಾದರೋ ಕೋಪಗೊಂಡಿರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಬಹುಕಾಲದಿಂದ ಪಾಪದಲ್ಲಿ ಮುಳುಗಿಹೋದೆವು. ನಮ್ಮಂಥವರಿಗೆ ರಕ್ಷಣೆ ಇದೆಯೇ?


“ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು.


ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು