Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:45 - ಕನ್ನಡ ಸತ್ಯವೇದವು C.L. Bible (BSI)

45-46 ನೆನಪಿಗೆ ತಂದುಕೊಂಡನು ತನ್ನೊಡಂಬಡಿಕೆಯನು I ದಯಾಳುತನದಿಂದ ತೋರಿದನವರಿಗೆ ಕರುಣೆಯನು I ಬಂಧಿಸಿದವರಿಂದಲೂ ದಯೆಯನು ದೊರಕಿಸಿದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಂಡನು. ತನ್ನ ಮಹಾಪ್ರೀತಿಯಿಂದ ಅವರನ್ನು ಸಂತೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:45
22 ತಿಳಿವುಗಳ ಹೋಲಿಕೆ  

ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು I ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು II


ವೈರಿಗಳ ಹಿಂಸೆಯನ್ನು ತಾಳಲಾರದೆ ಇಸ್ರಯೇಲರು ಗೋಳು ಇಟ್ಟರು. ಸರ್ವೇಶ್ವರ ಅದನ್ನು ಕೇಳಿ ಕನಿಕರಪಟ್ಟು ನ್ಯಾಯಾಧಿಪತಿಗಳನ್ನು ಕಳುಹಿಸಿಕೊಟ್ಟರು; ಜೀವಮಾನವೆಲ್ಲ ಅವರ ಸಂಗಡವೇ ಇದ್ದು ಅವರ ಮುಖಾಂತರ ಇಸ್ರಯೇಲರನ್ನು ಶತ್ರುಗಳಿಂದ ಬಿಡಿಸಿದರು. ತಮ್ಮನ್ನು ಹಿಂಸಿಸುತ್ತಿದ್ದವರ ಕಾಟವನ್ನು ತಾಳದೆ ಮೊರೆಯಿಡುವುದನ್ನು ಸರ್ವೇಶ್ವರ ಕೇಳಿ ಮನಮರುಗಿದರು.


ಒಂದು ವೇಳೆ ದುಃಖಪಡಿಸಿದರೂ ಕೃಪಾತಿಶಯದಿಂದ ಕನಿಕರಿಸಬಲ್ಲ.


ಆಲಿಸೆನ್ನ ಪ್ರಭು, ನಿನ್ನ ಪ್ರೀತಿ ಸುಮಧುರ I ಕಟಾಕ್ಷಿಸೆನ್ನನು ದೇವಾ, ಕರುಣಾಸಾಗರ II


ಕೃಪಾಳು, ದೇವಾ, ಕರುಣಿಸೆನ್ನನು I ಕರುಣಾನಿಧಿ, ಅಳಿಸೆನ್ನ ದೋಷವನು II


ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.


ಆಗ ಸರ್ವೇಶ್ವರ ತಮ್ಮ ಪ್ರಜೆಗಳಿಗೆ ಮಾಡುವೆನೆಂದು ಹೇಳಿದ ಕೇಡಿನ ಬಗ್ಗೆ ಮನಸ್ಸನ್ನು ಮಾರ್ಪಡಿಸಿಕೊಂಡರು.


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I ನಿನ್ನೀ ಸೇವಕರ ಮೇಲಿರಲಿ ಮರುಕ II


ಒಡೆಯರಾದ ಸರ್ವೇಶ್ವರ ಇದನ್ನು ಕೇಳಿ ಮನಮರುಗಿ: “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.


ಇದನ್ನು ಕೇಳಿ ಸರ್ವೇಶ್ವರ ಮನಮರುಗಿದರು. “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ದೊರಕಿಸುವನು ಪ್ರಭು ನ್ಯಾಯವನು ತನ್ನ ಪ್ರಜೆಗೆ I ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ II


ದೇವದೂತನು ಜೆರುಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಸರ್ವೇಶ್ವರ ಆ ಕೇಡಿನ ವಿಷಯದಲ್ಲಿ ನೊಂದುಕೊಂಡು, ಸಂಹಾರಕ ದೂತನಿಗೆ, “ಈಗ ಸಾಕು, ನಿನ್ನ ಕೈಯನ್ನು ಹಿಂತೆಗೆ,” ಎಂದು ಆಜ್ಞಾಪಿಸಿದರು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.


ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ ಅವರ ಪೂರ್ವಜರನ್ನು ಎಲ್ಲ ಜನಾಂಗಗಳ ಕಣ್ಮುಂದೆಯೇ ಈಜಿಪ್ಟಿನಿಂದ ಬರಮಾಡಿದೆನು. ನಾನು ಸರ್ವೇಶ್ವರ.”


ಆಗ ಇಸ್ರಯೇಲರ ಸಂಕಟದ ನಿಮಿತ್ತ ಸರ್ವೇಶ್ವರ ಬಹಳವಾಗಿ ನೊಂದುಕೊಂಡರು.


ಹೀನ ಸ್ಥಿತಿಯಲ್ಲಿದ್ದ ನಮ್ಮನ್ನು ಜ್ಞಾಪಿಸಿಕೊಂಡಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ದಂಡನೆಗೆ ನಿರ್ಣಯಿಸಲಾದ ಆ ಜನಾಂಗದವರು ತಮ್ಮ ಕೆಟ್ಟತನವನ್ನು ಬಿಟ್ಟು ಹಿಂತಿರುಗಿದ್ದೇ ಆದರೆ ನಾನು ಬರಮಾಡಬೇಕೆಂದಿದ್ದ ಆ ವಿಪತ್ತನ್ನು ನಾನು ಮನಮರುಗಿ ಬರಮಾಡದಿರುವೆನು.


ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನಿನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು