Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:11 - ಕನ್ನಡ ಸತ್ಯವೇದವು C.L. Bible (BSI)

11 ಕುಳಿತಿದ್ದರವರು ಕತ್ತಲಲಿ, ಕಗ್ಗತ್ತಲಲಿ I ನರಳುತ್ತಿದ್ದರು ಬಂಧಿತರಾಗಿ ಬೇಡಿಗಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು, ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ದೇವರ ಕಟ್ಟಳೆಗಳಿಗೆ ವಿರೋಧವಾಗಿ ನಿಂತು ಪರಾತ್ಪರನ ಸಂಕಲ್ಪವನ್ನು ನಿರಾಕರಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾಕೆಂದರೆ ಅವರು ಯೆಹೋವನ ಆಜ್ಞೆಗಳಿಗೆ ವಿರೋಧವಾಗಿ ದಂಗೆ ಎದ್ದರು. ಮಹೋನ್ನತನಾದ ದೇವರ ಉಪದೇಶವನ್ನು ತಿರಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ದೇವರ ಮಾತುಗಳನ್ನು ಎದುರಿಸಿ, ಮಹೋನ್ನತರ ಯೋಜನೆಯ ಬಗ್ಗೆ ಹೀನೈಯಿಸಿದ್ದರಿಂದ ಅವರಿಗೆ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:11
23 ತಿಳಿವುಗಳ ಹೋಲಿಕೆ  

ಪ್ರಭು ಪದೇಪದೇ ವಿಮುಕ್ತಗೊಳಿಸಿದನಾದರೂ I ಪರ್ಯಾಲೋಚಿಸದೆ ಪ್ರತಿಭಟನೆ ಮಾಡಿದರವರು I ಈ ಪರಿಯ ಅಕ್ರಮದ ನಿಮಿತ್ತ ಅವನತಿಗಿಳಿದರು II


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ನನ್ನ ಬುದ್ಧಿವಾದವನ್ನು ಅಲಕ್ಷ್ಯಮಾಡಿದಿರಿ, ನನ್ನ ತಿದ್ದುಪಾಟನ್ನು ತಳ್ಳಿಬಿಟ್ಟಿರಿ.


ಎಷ್ಟೋ ಸಾರಿ ಅವಿಧೇಯರಾಗಿ ನಡೆದುಕೊಂಡರು ಅರಣ್ಯದಲಿ I ಎಷ್ಟೋ ಸಾರಿ ಆತನ ಮನನೋಯಿಸಿದರು ಮರುಭೂಮಿಯಲಿ II


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ಆದರೆ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ತಮ್ಮನ್ನು ಕುರಿತಾದ ದೈವೇಚ್ಛೆಯನ್ನು ಅಲ್ಲಗಳೆದು, ಯೊವಾನ್ನನಿಂದ ಸ್ನಾನದೀಕ್ಷೆಯನ್ನು ಪಡೆಯದೆಹೋದರು.


“ಸರ್ವೇಶ್ವರನ ಹೆಸರಿನಲ್ಲಿ ನೀನು ನಮಗೆ ನುಡಿದ ಮಾತನ್ನು ನಾವು ಕೇಳಲೊಲ್ಲೆವು.


ಸೂಕ್ತ ಸಲಹೆಯನಿತ್ತು ಮುಂದಕೆನ್ನ ನಡೆಸು I ಅಂತ್ಯದಲಿ ನಿನ್ನ ಮಹಿಮೆಗೆನ್ನ ಸೇರ್ಪಡಿಸು II


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಸರ್ವೇಶ್ವರಸ್ವಾಮಿ ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.


ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


ನೀಡುವನು ಮಡದಿ ಮಕ್ಕಳನು ಒಂಟಿಗನಿಗೆ I ಬಿಡುಗಡೆಯ ಭಾಗ್ಯವನು ನೊಂದ ಬಂಧಿಗಳಿಗೆ I ದ್ರೋಹಿಗಳಿಗಾದರೋ ಮರಳುಗಾಡೇ ಮಾಳಿಗೆ II


“ಸ್ವಾಮಿ ತ್ವರೆಮಾಡಲಿ, ತನ್ನ ಕಾರ್ಯವನ್ನು ತುರ್ತಾಗಿ ನಡೆಸಲಿ, ನೋಡೋಣ; ಇಸ್ರಯೇಲಿನ ಪರಮ ಪಾವನ ಸ್ವಾಮಿಯ ಯೋಜನೆ ಶೀಘ್ರವಾಗಿ ಕೈಗೂಡಲಿ, ಆಗ ಪರಿಗ್ರಹಿಸೋಣ” ಎಂದು ಹೇಳುವ ಜನರಿಗೆ ಧಿಕ್ಕಾರ !


ನಿನ್ನಾಜ್ಞೆಯು ಆನಂದದಾಯಕ I ಅವೇ ನನಗೆ ಮಂತ್ರಾಲೋಚಕ II


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


ಗ್ರಹಿಸಲಿಲ್ಲಾ ಪಿತೃಗಳು ನಿನ್ನದ್ಭುತಗಳನು ಈಜಿಪ್ಟಿನಲಿ I ಸ್ಮರಿಸಲಿಲ್ಲವರು ನಿನ್ನಚಲ ಪ್ರೇಮಾತಿಶಯಗಳನು ಅಲ್ಲಿ I ಬದಲಿಗೆ ಮಹೋನ್ನತನನೆ ಪ್ರತಿಭಟಿಸಿದರು ಕೆಂಗಡಲಬಳಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು