Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:12 - ಕನ್ನಡ ಸತ್ಯವೇದವು C.L. Bible (BSI)

12 ಕರಗಿತ್ತವರ ಹೃದಯ ಕಡುಕಷ್ಟದಿಂದ I ಎಡವಿ ಬಿದ್ದಿದ್ದರು ಅಸಹಾಯತೆಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರ ಕಾರ್ಯಗಳ ನಿಮಿತ್ತವೇ ದೇವರು ಅವರ ಜೀವನವನ್ನು ಸಂಕಷ್ಟಕ್ಕೆ ಒಳಪಡಿಸಿದನು. ಅವರು ಎಡವಿಬಿದ್ದರು, ಅವರಿಗೆ ಸಹಾಯಮಾಡಲು ಯಾರೂ ಇರಲಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕನಿಲ್ಲದೆ ಕೆಳಗೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:12
19 ತಿಳಿವುಗಳ ಹೋಲಿಕೆ  

ದುರುಳರು ಅರುಗಲೇ ಇರೆ, ನೆರವಿಗಾರೂ ಇಲ್ಲ I ನನ್ನಿಂದ ನೀ ದೂರಸರಿವುದು ಸರಿಯಲ್ಲ II


ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.”


ಸುತ್ತಲು ನೋಡಿದೆ, ಯಾರು ಇರಲಿಲ್ಲ ಸಹಾಯಮಾಡಲು ನನಗೆ ಒತ್ತಾಸೆಗೆ ಒಬ್ಬನೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆ. ಆಗ ನನ್ನ ಭುಜಬಲವೇ ಜಯಕ್ಕೆ ಅಡಿಪಾಯವಾಯಿತು.


ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಕರೆದೊಯ್ದಿದ್ದಾರೆ. ಇಲ್ಲಿ ನಾನು ಸುಮ್ಮನಿರುವುದಾದರೂ ಹೇಗೆ? ಆಳುತ್ತಿರುವವರು ನನ್ನ ಪ್ರಜೆಯಾದವರನ್ನು ಗೋಳಿಡಿಸುತ್ತಿದ್ದಾರೆ, ಎಡೆಬಿಡದೆ ನನ್ನ ಶ್ರೀ ನಾಮವು ದಿನವೆಲ್ಲ ದೂಷಣೆಗೆ ಗುರಿಯಾಗುತ್ತಿದೆ.


ರಹೆಬನ ಸಹಾಯಕರು ಕಾಲಿಗೆರಗಿದರೂ ದೇವರು ತನ್ನ ಸಿಟ್ಟು ಸಿಡುಕನು ಬಿಟ್ಟುಬಿಡನು.


ನಮ್ಮ ಪಾಪದ ನಿಮಿತ್ತ ಅಧೀನರಾಗಿಸಿದಿರಿ ಅನ್ಯರಾಜರಿಗೆ ಈ ನಾಡಿನ ಸಿರಿಸಂಪತ್ತು ಹರಿದುಹೋಗುತ್ತಿದೆ ಆ ಅರಸರಿಗೆ ನಮ್ಮೊಡಲು, ದನಕರುಗಳು, ಈಡಾಗಿವೆ ಅವರ ದಬ್ಬಾಳಿಕೆಗೆ ಅಕಟಕಟ, ನಾವು ಸಿಕ್ಕಿಕೊಂಡಿದ್ದೇವೆ, ಮಹಾಸಂಕಟಕೆ!”


ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆ ಆಳೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಸರ್ವೇಶ್ವರನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.


“ನಾನು ಫಿಲಿಷ್ಟಿಯರ ಸಂಗಡ ಸಾಯುವೆನು,” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆ ಮನೆಯು ಅಧಿಪತಿಗಳ ಮೇಲೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದು ಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಿತ್ತು.


ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II


ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಾಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಬೀಸುವುದಕ್ಕೆ ಹಚ್ಚಿದರು.


“ಇಸ್ರಯೇಲರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ. ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ,” ಎಂಬುದನ್ನು ಸರ್ವೇಶ್ವರ ನೋಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು