Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:14 - ಕನ್ನಡ ಸತ್ಯವೇದವು C.L. Bible (BSI)

14 ಕತ್ತಲು, ಕಗ್ಗತ್ತಲಿಂದವರನು ಹೊರತಂದನು I ಅವರ ಬೇಡಿಬಂಧನಗಳನು ಮುರಿದುಹಾಕಿದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ಅವರ ಬಂಧನಗಳನ್ನು ತೆಗೆದುಹಾಕಿ ಕತ್ತಲೆಯಿಂದಲೂ ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆತನು ಅವರನ್ನು ಕಾರ್ಗತ್ತಲೆಯ ಸೆರೆಮನೆಗಳಿಂದ ಹೊರತಂದನು; ಕಟ್ಟಿದ ಹಗ್ಗಗಳನ್ನು ಕಿತ್ತುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕತ್ತಲೆಯೊಳಗಿಂದಲೂ, ಮರಣದ ನೆರಳಿನಿಂದಲೂ ದೇವರು ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:14
27 ತಿಳಿವುಗಳ ಹೋಲಿಕೆ  

ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.


ಹೇ ಪ್ರಭು, ಕರುಣಿಸು, ನಾ ನಿನ್ನ ಕಿಂಕರನು I ನಿನ್ನ ದಾಸಿಯ ಮಗನು, ನಿನ್ನ ಸೇವಕನು I ಬಿಡಿಸಿರುವೆ ನೀನು ನನ್ನ ಬಂಧನಗಳನು II


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ದೇವರಾಜ್ಞೆಯನು ವಿರೋಧಿಸಿದ ಕಾರಣ I ಪರಾತ್ಪರನಾಜ್ಞೆಯನು ಹೀಗಳೆದ ಕಾರಣ II


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಅಷ್ಟರಲ್ಲಿ ಒಬ್ಬನು ಅಲ್ಲಿಗೆ ಬಂದು, “ಇಗೋ, ನೀವು ಸೆರೆಮನೆಯಲ್ಲಿಟ್ಟವರು ದೇವಾಲಯದಲ್ಲಿ ನಿಂತು ಜನರಿಗೆ ಬೋಧಿಸುತ್ತಿದ್ದಾರೆ,” ಎಂದನು.


ಆ ರಾತ್ರಿಯೇ ಪ್ರಭುವಿನ ದೂತನೊಬ್ಬನು ಸೆರೆಮನೆಯ ದ್ವಾರಗಳನ್ನು ತೆರೆದು ಪ್ರೇಷಿತರನ್ನು ಹೊರಕ್ಕೆ ತಂದನು.


ಅಬ್ರಹಾಮನ ವಂಶಜಳಾದ ಈಕೆಯನ್ನು ಸೈತಾನನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು; ಈ ಕಟ್ಟಿನಿಂದ ಈಕೆಯನ್ನು ಸಬ್ಬತ್‍ದಿನ ಬಿಡಿಸಬಾರದಿತ್ತೆ?” ಎಂದರು.


ಆಲಿಸಿದಾತನು ಬಂಧಿತರ ಗೋಳಾಟವನು I ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು II


ನೀಡುವನು ಮಡದಿ ಮಕ್ಕಳನು ಒಂಟಿಗನಿಗೆ I ಬಿಡುಗಡೆಯ ಭಾಗ್ಯವನು ನೊಂದ ಬಂಧಿಗಳಿಗೆ I ದ್ರೋಹಿಗಳಿಗಾದರೋ ಮರಳುಗಾಡೇ ಮಾಳಿಗೆ II


ಆದರೆ ಅವರು ಬಂಧನಕ್ಕೊಳಗಾದರೆ ಸಂಕಟ ಸಂಕೋಲೆಗಳಿಗೆ ಸಿಕ್ಕಿಕೊಂಡರೆ,


‘ಹೊರಟುಹೋಗಿರಿ’ ಎನ್ನುವೆನು ಸೆರೆಯಾಳುಗಳಿಗೆ ‘ಬೆಳಕಿಗೆ ಬನ್ನಿರಿ’ ಎನ್ನುವೆನು ಕತ್ತಲಲ್ಲಿರುವವರಿಗೆ ಪಾಳುಬಿದ್ದ ಸೊತ್ತುಗಳನ್ನು ಹಂಚಿಕೊಡುವೆನು ಅವರಿಗೆ. ದೇಶವನ್ನು ಪುನಃ ತರುವೆನು ಪೂರ್ವಸ್ಥಿತಿಗೆ ದಾರಿಯುದ್ದಕ್ಕೂ ಆಹಾರ ಒದಗಿಸುವೆನು ನನ್ನ ಪ್ರಜೆಗೆ ಬೋಳು ಬೆಟ್ಟಗಳೆಲ್ಲ ಹುಲ್ಲುಗಾವಲುಗಳಾಗುವುವು ನನ್ನಾ ಮಂದೆಗೆ.


ದೊರಕಿಸುವನು ನ್ಯಾಯ ದಲಿತರಿಗೆ I ಒದಗಿಸುವನು ಆಹಾರ ಹಸಿದವರಿಗೆ I ನೀಡುವನು ಬಿಡುಗಡೆ ಬಂಧಿತರಿಗೆ II


ಅವನ ಆತ್ಮವನು ಅಧೋಲೋಕದಿಂದ ಹಿಂದಿರುಗಿಸುವನು ಜೀವಲೋಕದ ಬೆಳಕನು ಅನುಭವಿಸುವಂತೆ ಮಾಡುವನು.


ಕಾರ್ಮೋಡಗಳು ಅದನ್ನು ಕವಿಯಲಿ ಇರುಳೂ ಮರಣದ ನೆರಳೂ ಅದನ್ನು ಆಕ್ರಮಿಸಲಿ ಹಗಲನ್ನೇ ಮಬ್ಬಾಗಿಸುವ ಮುಸುಕು ಅದನ್ನು ಹೆದರಿಸಲಿ.


ನಾನು ಮುಂದೆ ಹೋಗದಂತೆ ದೇವರು ಅಡ್ಡಗೋಡೆ ಹಾಕಿದ್ದಾನೆ ನನ್ನ ಹಾದಿಗೆ ಕತ್ತಲೆ ಕವಿಯುವಂತೆ ಮಾಡಿದ್ದಾನೆ.


ಕತ್ತಲೊಳಗಿಂದ ಪಾರಾಗನವನು ಸುಡುವುದು ಕಿಚ್ಚು ಅವನ ಕೊಂಬೆಯನು ಬಡಿದೊಯ್ಯುವುದು ಗಾಳಿ ಅದರ ಫಲವನು.


ಕತ್ತಲಿಂದ ಹಿಂದಿರುಗುವ ನಂಬಿಕೆ ಅವನಿಗಿಲ್ಲ ಕತ್ತಿ ತನಗಾಗಿ ಕಾದಿದೆಯೆಂಬುದರಲ್ಲಿ ಸಂದೇಹವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು